Dharwad: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿ: ತಾಯಿ ಮತ್ತು ಮಗು ಸಾವು
ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗು ಸಾವನ್ನಪ್ಪಿರುವಂತಹ ಘಟನೆ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ.
ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿ (bike accident) ಹೊಡೆದ ಪರಿಣಾಮ ತಾಯಿ ಮತ್ತು ಮಗು ಸಾವನ್ನಪ್ಪಿರುವಂತಹ ಘಟನೆ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಸಂಗವ್ವ(20), ಮಾಯಕ್ಕ(1) ಮೃತರು. ಪತಿ ಜಕ್ಕಪ್ಪ ಹೆಗ್ಗಣ್ಣವರ್ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಾಗರಾಳದ ನಿವಾಸಿಗಳಾಗಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಬಸವೇಶ್ವರ ವೃತ್ತದ ಬಳಿ 2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಸವಾರ ಮೃತಪಟ್ಟಿದ್ದಾನೆ. ಆಸೀಫ್ ಚೌದರಿ(27) ಮೃತ ವ್ಯಕ್ತಿ. ಗಂಭೀರ ಗಾಯಗೊಂಡ ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇಳಕಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
2ನೇ ಮಹಡಿಯಿಂದ ಕೆಳಗೆ ಬಿದ್ದು ಮಗು: ಗಂಭೀರ ಗಾಯ
ಬೆಂಗಳೂರು: ಅಪಾರ್ಟ್ಮೆಂಟ್ 2ನೇ ಮಹಡಿಯಿಂದ ಕೆಳಗೆ ಬಿದ್ದು ಮಗುವಿಗೆ ಗಂಭೀರ ಗಾಯವಾಗಿರುವಂತಹ ಹೃದಯವಿದ್ರಾವಕ ಘಟನೆ ನಗರದ ಕೆಂಗೇರಿ ಬಳಿಯ ಬಿಡಿಎ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಶಿವಪ್ಪ ಎಂಬುವವರ ಮಗು ರಾಹುಲ್(3) ಅಪಾರ್ಟ್ಮೆಂಟ್ನಿಂದ ಬಿದ್ದಾತ. 2ನೇ ಮಹಡಿಯಿಂದ ಮಗು ಬೀಳುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸದ್ಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಗಾಯಾಳು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಬೆಳಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Fire Crime: ಕಿಡಿಗೇಡಿಗಳಿಂದ ರಾತ್ರೋರಾತ್ರಿ ಅರಣ್ಯ ಪ್ರದೇಶಕ್ಕೆ ಬೆಂಕಿ: ಧಗ-ಧಗ ಉರಿದ 5 ಎಕರೆ ಅರಣ್ಯ!
ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸ್ನೇಹಿತರಿಂದಲೇ ಅತ್ಯಾಚಾರ
ಹುಬ್ಬಳ್ಳಿ: ಮೊಬೈಲ್ ಫೋನ್ ಕೊಡಿಸುವ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಪರಿಚಿತ ಸ್ನೇಹಿತರಿಂದಲೇ ಗ್ಯಾಂಗ್ರೇಪ್ ನಡೆದಿರುವಂತಹ ಘಟನೆ ಹುಬ್ಬಳಿಯ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ನಡೆದಿದೆ. ದೇವರಾಜ್, ಪಕ್ಕಿರೇಶ್ ಮತ್ತು ಇಬ್ಬರು ಅಪರಿಚಿತರಿಂದ ಕೃತ್ಯವೆಸಗಲಾಗಿದೆ. ಮೊಬೈಲ್ ಫೋನ್ ಕೊಡಿಸುವ ನೆಪದಲ್ಲಿ ಸ್ನೇಹಿತರು ಬಾಕಿಯನ್ನು ಹುಬ್ಬಳಿಗೆ ಕರೆತಂದಿದ್ದಾರೆ. ಜೀವ ಬೆದರಿಕೆ ಹಾಕಿ ಬಲವಂತವಾಗಿ ಯುವಕರು ಅತ್ಯಾಚಾರವೆಸಗಿದ್ದಾರೆ. ಈ ಕುರಿತು ಹುಬ್ಬಳ್ಳಿ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಯುವಕರ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ: ಇಬ್ಬರು ಸ್ಥಳದಲ್ಲೇ ದುರ್ಮರಣ
ಬೆಂಗಳೂರು ಗ್ರಾಮಾಂತರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಡಿಕ್ಕಿ ಹೊಡೆದ ನಂತರ ಒಂದಷ್ಟು ದೂರ ಕಾರನ್ನು ಲಾರಿ ಎಳೆದೊಯ್ದಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಂಗಳೂರು: ಪೊಲೀಸ್ ಎಂದು ಹೇಳಿ ನಟಿಯೋರ್ವಳ ತಾಯಿಯಿಂದ ಸಾವಿರಾರು ರೂಪಾಯಿ ಪೀಕಿದ ವ್ಯಕ್ತಿ
ತೋಟದ ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ತಾಲೂಕಿನ ಬಿಳಲಖಂಡ ಸಮೀಪದ ಗುಳ್ಮೆ ಗ್ರಾಮದ ಬಳಿ ತೋಟದ ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿನ್ನೆ(ಮಾ.7) ರಾತ್ರಿ ಮನೆ ಪಕ್ಕದಲ್ಲಿರುವ ತೋಟದ ಬಾವಿಗೆ ಬಿದ್ದು ಪ್ರತಿಭಾ ಮಂಗಳಾ ಗೊಂಡ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಮೃತ ಯುವತಿ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಪ್ರಥಮ ವರ್ಷದ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ವಾರದ ಹಿಂದೆ ಮನೆಗೆ ಬಂದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಘಟನೆ ಕುರಿತು ‘ಯುವತಿಗೆ ತನ್ನದೆ ಕ್ಲಾಸಿನ ಯುವಕನೊಬ್ಬನ ಪರಿಚಯವಿತ್ತು, ನನ್ನ ಮಗಳ ಸಾವಿಗೆ ಆ ಯುವಕನೇ ಕಾರಣ ಎಂದು ಯುವತಿ ತಂದೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮತ್ತಷ್ಟ ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:31 pm, Fri, 10 March 23