AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದ ಓರ್ವ ಮಹಿಳೆ ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಧಾರವಾಡ: ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ
ಮೃತರ ಮನೆ (ಎಡಚಿತ್ರ) ಆತ್ಮಹತ್ಯೆಗೆ ಶರಣಾದ ಮಹಿಳೆ (ಬಲಚಿತ್ರ)
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Feb 25, 2024 | 11:54 AM

Share

ಧಾರವಾಡ, ಫೆಬ್ರವರಿ 25: ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಲಗುಂದ (Navalagund) ತಾಲೂಕಿನ ಮೊರಬ (Morab) ಗ್ರಾಮದಲ್ಲಿ ನಡೆದಿದೆ. ಸಾವಿತ್ರಿ ಸರಕಾರ್ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ದರ್ಶನ್ (4), ಸುಮಾ (5) ಕೊಲೆಯಾದ ಮಕ್ಕಳು. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಂದೆ ಬುದ್ದಿ ಹೇಳಿದಕ್ಕೆ ಮಗ ಆತ್ಮಹತ್ಯೆ

ತಂದೆ ಬುದ್ಧಿವಾದ ಹೇಳಿದಕ್ಕೆ ಮನನೊಂದ ಮಗ ಆತ್ಮಹತ್ಯೆಗೆ ಶರಣಾದ ಘಟನೆ ಕೆಲ ದಿನಗಳ ಹಿಂದೆ  ಧಾರವಾಡ ನಗರದ ಸಾದನಕೇರಿ ಬಡಾವಣೆಯಲ್ಲಿ ನಡೆದಿತ್ತು. ಧಾರವಾಡ ನಗರದ ಕೆಲಗೇರಿ ಕೆರೆಗೆ ಹಾರಿ ಫುಟ್​​ಬಾಲ್​​ ಆಟಗಾರ ಚೇತನ್​​ ಕೊಂಡಿಹಾಳ (23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ‘ಕ್ರೀಡೆಗೆ ಆಸಕ್ತಿ ಕಡಿಮೆ ಕೊಟ್ಟು, ಓದಿನ ಕಡೆ ಗಮನಹರಿಸು’ ಎಂದು ತಂದೆ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶರಣಪ್ಪ ಕೊಂಡಿಹಾಳ ಎಂಬುವರ ಪುತ್ರ ಚೇತನ್​​ ಮೃತಪಟ್ಟಿದ್ದಾನೆ.

ಚೇತನ್​ಗೆ ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಇತ್ತು. ಮಗನ ಆಸಕ್ತಿಯಿಂದಾಗಿ ಓದಿಗೆ ಸಮಸ್ಯೆ ಆಗಬಾರದೆಂದುಕೊಂಡ ಶರಣಪ್ಪ ಕೊಂಡಿಹಾಳ ಅವರು ಆತನಿಗೆ ಬುದ್ಧಿ ಹೇಳಿದ್ದರು. ‘ಕ್ರೀಡೆ ಕಡೆಗೆ ಕಡಿಮೆ ಹೆಚ್ಚು ಗಮನ ಕೊಡಬೇಡ, ಓದಿನ ಕಡೆ ಗಮನಹರಿಸು’ ಎಂದು ಹೇಳಿದ್ದಾರೆ. ಇಷ್ಟಕ್ಕೆ ಮನನೊಂದ ಚೇತನ್ ಮನೆಯಿಂದ ನಾಪತ್ತೆಯಾಗಿದ್ದನು. ಫೆ.07 ರಂದು ಕೆಲಗೇರಿ ಕೆರೆಯಲ್ಲಿ ಚೇತನ್ ಶವ ಪತ್ತೆಯಾಗಿತ್ತು. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಗ್‌ರೈಸ್ ಅಂಗಡಿಯಲ್ಲಿ ಭೀಕರ ಹತ್ಯೆ

ಧಾರವಾಡದ ಭೋವಿಗಲ್ಲಿಯಲ್ಲಿನ ಎಗ್​ರೈಸ್​ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಕ್ಕಿರೇಶ್ ಎಂಬಾತನನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಲಾಗಿತ್ತು. ದಾಂಡೇಲಿ ಮೂಲದ ಕನ್ಯಯ್ಯ ಎಂಬಾತ ಹತ್ಯೆ ಮಾಡಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಕಲಬುರಗಿಯಲ್ಲಿ ಖಾರದ ಪುಡಿ ಎರಚಿ ತಂದೆ-ಮಕ್ಕಳ ಮೇಲೆ ಹಲ್ಲೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಿರನಕೋಡ ಗ್ರಾಮದಲ್ಲಿ ತಂದೆ-ಮಕ್ಕಳ ಮೇಲೆ ಹಲ್ಲೆ ಮಾಡಲಾಗಿತ್ತು. ಜಮೀನು ವಿಚಾರಕ್ಕೆ ತಂದೆ-ಮಕ್ಕಳ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಮೈಸೂರಲ್ಲಿ ತನ್ನ ಜೀವ ಉಳಿಸಿದ್ದ ಪತ್ನಿಯನ್ನೇ ಕೊಂದ ಪತಿ

ಮೈಸೂರಿನ ರಾಜೀವ್ ನಗರದಲ್ಲಿ ಪತ್ನಿಯನ್ನೇ ಪತಿರಾಯ ಹತ್ಯೆಗೈದಿದ್ದಾನೆ. ಈ ಹಿಂದೆ ಪತಿಗೆ ಹೃದಯಾಘಾತವಾದಾಗ ಪತ್ನಿ ತವರು ಮನೆಯವರ ನೆರವಿನಿಂದ ಪತಿಗೆ ಚಿಕಿತ್ಸೆ ಕೊಡಿಸಿದ್ದರು. ಪದೇ ಪದೆ ಸಾಲ ಮಾಡಿ ಪತ್ನಿ ಬಳಿ ಹಣಕ್ಕೆ ಪೀಡಿಸುತ್ತಿದ್ದ ಅಕ್ಬರ್ ಜಗಳ ತೆಗೆಯುತ್ತಿದ್ದ. ಹಣ ನೀಡದಿದ್ದಕ್ಕೆ ಪತ್ನಿಯನ್ನು ಕೊಲೆ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:39 am, Sun, 25 February 24

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್