AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಆಸ್ತಿ ವಿವಾದ: ರಾಜಿ ಸಂಧಾನ ಮಾಡಿದ್ರೂ ತಮ್ಮನನ್ನೇ ಕೊಂದ ಅಣ್ಣ

ಹಣ, ಆಸ್ತಿಗಾಗಿ ಸಂಬಂಧವನ್ನೇ ಮರೆತು ಹೋಗುತ್ತಿದ್ದೇವೆ. ಅದರಂತೆ ಧಾರವಾಡ(Dharwad) ತಾಲೂಕಿನ ತಲವಾಯಿ ಗ್ರಾಮದಲ್ಲಿ ಮನೆ, ಹೊಲದ ಆಸ್ತಿಗಾಗಿ ನಡೆದ ಅಣ್ಣ-ತಮ್ಮಂದಿರು ಜಗಳ, ಕೊಲೆಯಲ್ಲಿ ಅಂತ್ಯವಾಗಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿದೆ.

ಧಾರವಾಡ: ಆಸ್ತಿ ವಿವಾದ: ರಾಜಿ ಸಂಧಾನ ಮಾಡಿದ್ರೂ ತಮ್ಮನನ್ನೇ ಕೊಂದ ಅಣ್ಣ
ಮೃತ ವ್ಯಕ್ತಿ, ಕುಟುಂಬಸ್ಥರ ಗೋಳಾಟ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 21, 2024 | 6:34 PM

Share

ಧಾರವಾಡ, ಫೆ.21: ಆಸ್ತಿ ವಿವಾದ ಸಂಬಂಧ ಎರಡು ಗುಂಪುಗಳು ಬಡಿದಾಡಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಧಾರವಾಡ(Dharwad) ತಾಲೂಕಿನ ತಲವಾಯಿ ಗ್ರಾಮದಲ್ಲಿ ನಡೆದಿದೆ. ಆಶೋಕ ಕಮ್ಮಾರ್(45) ಮೃತ ವ್ಯಕ್ತಿ. ಇನ್ನೊಬ್ಬ ಫಕೀರಪ್ಪ(50) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆ ನಡೆದಿದೆ. ಇನ್ನು ಮೃತನ ಸಂಬಂಧಿಕರ ಗೋಳಾಟ ಮುಗಿಲುಮುಟ್ಟಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಆಸ್ತಿಗಾಗಿ ತಮ್ಮನನ್ನೇ ಕೊಂದು ಹಾಕಿದ ಅಣ್ಣ

ಮನೆ, ಹೊಲದ ಆಸ್ತಿಗಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಈ ಕುರಿತು ಅನೇಕ ಬಾರಿ ಸುತ್ತಮುತ್ತಲಿನ ಗ್ರಾಮಗಳ ಹಿರಿಯರ ಮಧ್ಯಸ್ಥಿಕೆಯಲ್ಲಿ ರಾಜಿ-ಸಂಧಾನ ನಡೆಸಲಾಗಿತ್ತು. ಆದರೂ ವಿವಾದ ತಣ್ಣಗಾಗಿರಲಿಲ್ಲ. ಇಬ್ಬರ ನಡುವೆ ನಿರಂತರ ಜಗಳ ಆಗುತ್ತಲೇ ಇತ್ತು. ಇಂದು ಜಗಳ ವಿಕೋಪಕ್ಕೆ ಹೋಗಿ ಆಸ್ತಿಗಾಗಿ ತಮ್ಮನನ್ನೇ ಅಣ್ಣ ಕೊಂದು ಹಾಕಿದ್ದಾನೆ.

ಇದನ್ನೂ ಓದಿ:ಕಲಬುರಗಿ: ಸಾಲ ಕೊಟ್ಟ ಹಣ ವಾಪಸ್ ಕೇಳಿದಕ್ಕೆ ಸ್ನೇಹಿತನ ಕೊಲೆ; ಮೂವರ ಬಂಧನ

ವಿದ್ಯುತ್ ಪ್ರವಹಿಸಿ ಕಂಬದ ಮೇಲೆ ಬೆಸ್ಕಾಂ ಗುತ್ತಿಗೆ ನೌಕರ ಸಾವು

ಕೋಲಾರ: ಜಿಲ್ಲೆ ಬಂಗಾರಪೇಟೆ ತಾಲೂಕಿನ ಮಾಗೇರಿ ಬಳಿ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಬೆಸ್ಕಾಂ ಗುತ್ತಿಗೆ ನೌಕರ ಕೊನೆಯುಸಿರೆಳೆದ ಘಟನೆ ನಡೆದಿದೆ. ಮರವಳ್ಳಿ ನಿವಾಸಿ ಮಂಜುನಾಥ(45) ಮೃತ ರ್ದುದೈವಿ. ವಿದ್ಯುತ್ ಲೈನ್ ದುರಸ್ತಿ ಮಾಡಲು ಕಂಬ ಹತ್ತಿದ್ದಾಗ ದುರ್ಘಟನೆ ನಡೆದಿದೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Wed, 21 February 24

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು