ಧಾರವಾಡ, ಫೆ.21: ಆಸ್ತಿ ವಿವಾದ ಸಂಬಂಧ ಎರಡು ಗುಂಪುಗಳು ಬಡಿದಾಡಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಧಾರವಾಡ(Dharwad) ತಾಲೂಕಿನ ತಲವಾಯಿ ಗ್ರಾಮದಲ್ಲಿ ನಡೆದಿದೆ. ಆಶೋಕ ಕಮ್ಮಾರ್(45) ಮೃತ ವ್ಯಕ್ತಿ. ಇನ್ನೊಬ್ಬ ಫಕೀರಪ್ಪ(50) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನಡೆದಿದೆ. ಇನ್ನು ಮೃತನ ಸಂಬಂಧಿಕರ ಗೋಳಾಟ ಮುಗಿಲುಮುಟ್ಟಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮನೆ, ಹೊಲದ ಆಸ್ತಿಗಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಈ ಕುರಿತು ಅನೇಕ ಬಾರಿ ಸುತ್ತಮುತ್ತಲಿನ ಗ್ರಾಮಗಳ ಹಿರಿಯರ ಮಧ್ಯಸ್ಥಿಕೆಯಲ್ಲಿ ರಾಜಿ-ಸಂಧಾನ ನಡೆಸಲಾಗಿತ್ತು. ಆದರೂ ವಿವಾದ ತಣ್ಣಗಾಗಿರಲಿಲ್ಲ. ಇಬ್ಬರ ನಡುವೆ ನಿರಂತರ ಜಗಳ ಆಗುತ್ತಲೇ ಇತ್ತು. ಇಂದು ಜಗಳ ವಿಕೋಪಕ್ಕೆ ಹೋಗಿ ಆಸ್ತಿಗಾಗಿ ತಮ್ಮನನ್ನೇ ಅಣ್ಣ ಕೊಂದು ಹಾಕಿದ್ದಾನೆ.
ಇದನ್ನೂ ಓದಿ:ಕಲಬುರಗಿ: ಸಾಲ ಕೊಟ್ಟ ಹಣ ವಾಪಸ್ ಕೇಳಿದಕ್ಕೆ ಸ್ನೇಹಿತನ ಕೊಲೆ; ಮೂವರ ಬಂಧನ
ಕೋಲಾರ: ಜಿಲ್ಲೆ ಬಂಗಾರಪೇಟೆ ತಾಲೂಕಿನ ಮಾಗೇರಿ ಬಳಿ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಬೆಸ್ಕಾಂ ಗುತ್ತಿಗೆ ನೌಕರ ಕೊನೆಯುಸಿರೆಳೆದ ಘಟನೆ ನಡೆದಿದೆ. ಮರವಳ್ಳಿ ನಿವಾಸಿ ಮಂಜುನಾಥ(45) ಮೃತ ರ್ದುದೈವಿ. ವಿದ್ಯುತ್ ಲೈನ್ ದುರಸ್ತಿ ಮಾಡಲು ಕಂಬ ಹತ್ತಿದ್ದಾಗ ದುರ್ಘಟನೆ ನಡೆದಿದೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:31 pm, Wed, 21 February 24