ಬಳ್ಳಾರಿ: ಸರಿಯಾಗಿ ಆರೈಕೆ ಮಾಡ್ತಿಲ್ಲ ಎಂದು ಪತ್ನಿಯನ್ನೇ ಕೊಚ್ಚಿ ಕೊಂದ ಪತಿ!

ಹೆಂಡತಿ ಸರಿಯಾಗಿ ಆರೈಕೆ ಮಾಡುತ್ತಿಲ್ಲವೆಂದು ಪತಿರಾಯನೋರ್ವ ಆಕೆಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಪೊಲೀಸರ ಮುಂದೆ ಶರಣಾಗಿದ್ದಾನೆ. ಆರೋಪಿ ಡಯಾಲಿಸಿಸ್ ರೋಗಿಯಾಗಿದ್ದು, ಪತ್ನಿ ಸರಿಯಾಗಿ ಕೇರ್ ಮಾಡುತ್ತಿಲ್ಲ ಎನ್ನುವ ಸಿಟ್ಟಿಗೆ ಕೊಡಲಿಯಿಂದ ಕೊಚ್ಚಿ ಕೊಂದಿದ್ದಾನೆ.

ಬಳ್ಳಾರಿ: ಸರಿಯಾಗಿ ಆರೈಕೆ ಮಾಡ್ತಿಲ್ಲ ಎಂದು ಪತ್ನಿಯನ್ನೇ ಕೊಚ್ಚಿ ಕೊಂದ ಪತಿ!
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 04, 2023 | 10:50 AM

ಬಳ್ಳಾರಿ, (ಡಿಸೆಂಬರ್ 04): ಸರಿಯಾಗಿ ಆರೈಕೆ ಮಾಡುತ್ತಿಲ್ಲ ಎಂದು ಕೋಪಗೊಂಡ ಪತಿರಾಯನೊಬ್ಬ(Husband) ಹೆಂಡತಿಯನ್ನು(Wife) ಕೊಚ್ಚಿ ಕೊಂದಿರುವ ಘಟನೆ ಬಳ್ಳಾರಿ(Bellary) ಜಿಲ್ಲೆಯ ಸಿರುಗುಪ್ಪದ ಬಲಕುಂದಿ ಗ್ರಾಮದಲ್ಲಿ ನಡೆದಿದೆ. ಮೈಬುನಾ ಬಿ. (35) ಕೊಲೆಯಾದ ಮಹಿಳೆ. ಡಯಾಲಿಸಿಸ್ ರೋಗಿಯಾಗಿರುವ ರಸೂಲ್ ಸಾಬ್, ಪತ್ನಿ ಸರಿಯಾಗಿ ಆರೈಕೆ ಮಾಡುತ್ತಿಲ್ಲ ಎಂದು ಮಲಗಿದ್ದ ಮೈಬುನಾಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ರಸೂಲ್ ಸಾಬ್ ತಾನೇ ಪೊಲೀಸರ ಮುಂದೆ ಶರಣಾಗಿದ್ದಾನೆ.

ನನಗೆ ಡಯಾಲಿಸಿಸ್ ಕಾಯಲೆ ಇದೆ. ಆದ್ರೆ, ಪತ್ನಿ ಸರಿಯಾಗಿ ಆರೈಕೆ ಮಾಡುತ್ತಿಲ್ಲ. ಹಿಗಾಗಿ ನಾನು ಬೇಗ ಸಾಯುತ್ತೇನೆ. ನನಗಿಂತ ಮೊದಲು ಪತ್ನಿ ಸಾಯಬೇಕು ಎಂದು ಕೊಲೆ ಮಾಡಿರುವುದಾಗಿ ಆರೋಪಿ ರಸೂಲ್ ಸಾಬ್ ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಅಪಘಾತದಲ್ಲಿ ತಂದೆ-ಮಗನ ಸಾವು, ನದಿಯಲ್ಲಿ ತಾಯಿ-ಮಕ್ಕಳ ಶವ ಪತ್ತೆ

ವ್ಯಕ್ತಿಯ ಬರ್ಬರ ಕೊಲೆ

ಮೈಸೂರು: ಅನೈತಿಕ ಸಂಬಂಧದ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಹದೇವಸ್ವಾಮಿ (39) ಕೊಲೆಯಾದ ವ್ಯಕ್ತಿ. ಸೋಮಯ್ಯ ಕೊಲೆ ಆರೋಪಿ. ಆರೋಪಿ ಸೋಮಯ್ಯ ಪತ್ನಿ ಜೊತೆ ಮಹದೇವಸ್ವಾಮಿ ಅನೈತಿಕ ಸಂಬಂಧ ಹೊಂದಿದ್ದ ಎನ್ನುವ ಆರೋಪವಿದೆ. ಈ ವಿಚಾರಕ್ಕೆ ಆರೋಪಿ ಸೋಮಯ್ಯ, ನಿನ್ನೆ (ಡಿ.04)ರ ರಾತ್ರಿ ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿಯನ್ನು ಕೊಲೆ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಸದ್ಯ ಆರೋಪಿ ಸೋಮಯ್ಯ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್