ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಬಂಧನ
Bengaluru Crime: ಇದೀಗ ತಬ್ರೇಜ್ನನ್ನು ಬಂಧಿಸಲಾಗಿದೆ. ಎಸ್ಡಿಪಿಐ, ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ತಬ್ರೇಜ್, ವಾಟ್ಸಪ್ ಗ್ರೂಪ್ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಷ್ಟೇ ಅಲ್ಲದೆ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪ ತಬ್ರೇಜ್ ಮೇಲಿತ್ತು.
ಬೆಂಗಳೂರು: ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಎಂಬಾತನನ್ನು ಬಂಧಿಸಲಾಗಿದೆ. ಎನ್ಐಎ, ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಬ್ರೇಜ್ ಬಂಧನ ಮಾಡಲಾಗಿದೆ. 2020 ರ ಆಗಸ್ಟ್ 12 ರಂದು ನಡೆದಿದ್ದ ಗಲಭೆ ಪ್ರಕರಣದಲ್ಲಿ ತಬ್ರೇಜ್ ಆರೋಪಿ ಆಗಿದ್ದ. ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಆ ಬಗ್ಗೆ ಪ್ರಕರಣ ದಾಖಲಾಗಿತ್ತು. ಗಲಭೆ ನಂತರ ತಬ್ರೇಜ್ (35) ತಲೆ ಮರೆಸಿಕೊಂಡಿದ್ದ.
ಇದೀಗ ತಬ್ರೇಜ್ನನ್ನು ಬಂಧಿಸಲಾಗಿದೆ. ಎಸ್ಡಿಪಿಐ, ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ತಬ್ರೇಜ್, ವಾಟ್ಸಪ್ ಗ್ರೂಪ್ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಷ್ಟೇ ಅಲ್ಲದೆ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪ ತಬ್ರೇಜ್ ಮೇಲಿತ್ತು.
ಹಾಡಹಗಲೇ ಕಾರಿನಲ್ಲಿಟ್ಟಿದ್ದ 2 ಲಕ್ಷ ರೂಪಾಯಿ ಕಳ್ಳತನ ಹಾಡಹಗಲೇ ಕಾರಿನಲ್ಲಿಟ್ಟಿದ್ದ 2 ಲಕ್ಷ ರೂಪಾಯಿ ಕಳ್ಳತನ ಮಾಡಿದ ಘಟನೆ ಬೀದರ್ ನಗರಸಭೆ ಆವರಣದಲ್ಲಿ ನಡೆದಿದೆ. ನಗರಸಭೆಯ ಆವರಣದಲ್ಲಿ ನಿಲ್ಲಿಸಿದ್ದ ಕಾರಿನಿಂದ ಹಣ ಕಳವು ಮಾಡಲಾಗಿದೆ. ಬೀದರ್ ನಿವಾಸಿ ರಾಮೇಶ್ವರ್ ಎಂಬುವರಿಗೆ ಸೇರಿದ ಹಣ ಕಳ್ಳತನವಾಗಿದೆ. ಸ್ಥಳಕ್ಕೆ ನ್ಯೂ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ತನ್ನ ಅಕೌಂಟ್ನಲ್ಲಿ ಏಕಾಏಕಿ ಲಕ್ಷಾಂತರ ರೂ. ನೋಡಿ ಫುಲ್ ಖುಷಿಯಾದ ವ್ಯಕ್ತಿ; ಕಳ್ಳತನ ಮಾಡದೆ ಇದ್ರೂ ಜೈಲುಪಾಲು !
ಇದನ್ನೂ ಓದಿ: ಲಂಚಾವತಾರ: ಪ್ರತ್ಯೇಕ ಪ್ರಕರಣಗಳಲ್ಲಿ 2.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಎಸಿಬಿ ಬಲೆಗೆ