AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಕ್ಲಿನಿಕ್​ನಲ್ಲಿ ವೈದ್ಯೆ ಮೇಲೆ ಚಾಕುವಿನಿಂದ ಹಲ್ಲೆ

ಪಶ್ಚಿಮ ದೆಹಲಿಯ ಟ್ಯಾಗೋರ್​ ಗಾರ್ಡನ್​ ಎಕ್ಸ್​ಟೆನ್ಷನ್ ಪ್ರದೇಶದಲ್ಲಿರುವ ಕ್ಲಿನಿಕ್​ನಲ್ಲಿ 40 ವರ್ಷದ ವೈದ್ಯೆ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಧ್ಯಾಹ್ನ, ವ್ಯಕ್ತಿಯೊಬ್ಬ ಡಾ ಸಾಂಗಯ್ ಭುಟಿಯಾ ಅವರ ಕ್ಲಿನಿಕ್‌ಗೆ ಬಂದು ಕಟ್ಟಡದ ಮೆಟ್ಟಿಲಲ್ಲಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ವಿಚಿತ್ರಾ ವೀರ್ ಹೇಳಿದ್ದಾರೆ.

ದೆಹಲಿ: ಕ್ಲಿನಿಕ್​ನಲ್ಲಿ ವೈದ್ಯೆ ಮೇಲೆ ಚಾಕುವಿನಿಂದ ಹಲ್ಲೆ
ವೈದ್ಯೆImage Credit source: NDTV
ನಯನಾ ರಾಜೀವ್
|

Updated on: Oct 01, 2023 | 10:13 AM

Share

ಪಶ್ಚಿಮ ದೆಹಲಿಯ ಟ್ಯಾಗೋರ್​ ಗಾರ್ಡನ್​ ಎಕ್ಸ್​ಟೆನ್ಷನ್ ಪ್ರದೇಶದಲ್ಲಿರುವ ಕ್ಲಿನಿಕ್​ನಲ್ಲಿ 40 ವರ್ಷದ ವೈದ್ಯೆ ಮೇಲೆ ದುಷ್ಕರ್ಮಿ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಧ್ಯಾಹ್ನ, ವ್ಯಕ್ತಿಯೊಬ್ಬ ಡಾ ಸಾಂಗಯ್ ಭುಟಿಯಾ ಅವರ ಕ್ಲಿನಿಕ್‌ಗೆ ಬಂದು ಕಟ್ಟಡದ ಮೆಟ್ಟಿಲಲ್ಲಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ವಿಚಿತ್ರಾ ವೀರ್ ಹೇಳಿದ್ದಾರೆ.

ಡಾ ಭುಟಿಯಾ ಅವರು ಕಟ್ಟಡದ ನೆಲ ಮಹಡಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ ಮತ್ತು ಮೇಲಿನ ಮಹಡಿಗಳಲ್ಲಿ ವಾಸವಾಗಿದ್ದಾರೆ ಎಂದು ಅವರು ಹೇಳಿದರು. ಘಟನೆ ಬಳಿಕ ದಾಳಿಕೋರ ಸ್ಥಳದಿಂದ ಪರಾರಿಯಾಗಿದ್ದಾನೆ. ಸಂತ್ರಸ್ತೆಗೆ ಅನೇಕ ಇರಿತ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದರು. ಮೇಲ್ನೋಟಕ್ಕೆ, ದರೋಡೆಯ ಯಾವುದೇ ಕೋನ ಪತ್ತೆಯಾಗಿಲ್ಲ ಮತ್ತು ದಾಳಿಕೋರರು ಯಾರೋ ತಿಳಿದಿರುವಂತೆ ಪರಿಚಯವಿರುವಂತೆ ತೋರುತ್ತದೆ, ಆದರೆ, ಇದು ಇನ್ನೂ ದೃಢಪಟ್ಟಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೇರಳ: ಜನರನ್ನು ಕೊಲ್ಲುವ ಉದ್ದೇಶದಿಂದಲೇ ಶಾರೂಖ್ ರೈಲಿಗೆ ಬೆಂಕಿ ಹಚ್ಚಿದ್ದ: ಎನ್​ಐಎ

ಹಲ್ಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ, ವೈದ್ಯರಿಂದ ಈ ಕುರಿತು ಹೇಳಿಕೆ ಪಡೆಯಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ