ತಾಯಿಗೆ ಸಮರ್ಪಕ ಚಿಕಿತ್ಸೆ ನೀಡಿಲ್ಲವೆಂದು ವೈದ್ಯನಿಗೆ ಏಳು ಬಾರಿ ಚಾಕುವಿನಿಂದ ಇರಿದ ಮಗ

ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ವ್ಯಕ್ತಿಯೊಬ್ಬ ವೈದ್ಯರಿರಿಗೆ ಚಾಕುವಿನಿಂದ ಇರಿದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಏಳು ಬಾರಿ ವೈದ್ಯರಿಗೆ ಇರಿದಿದ್ದಾನೆ, ವೈದ್ಯರನ್ನು ಐಸಿಯುನಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಗಂಭೀರವಾಗಿದೆ. ಪೊಲೀಸರ ಪ್ರಕಾರ ದಾಳಿಕೋರ ವಿಘ್ನೇಶ್ ಮತ್ತು ಆತನ ಸಹಚರರಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ತಾಯಿಗೆ ಸಮರ್ಪಕ ಚಿಕಿತ್ಸೆ ನೀಡಿಲ್ಲವೆಂದು ವೈದ್ಯನಿಗೆ ಏಳು ಬಾರಿ ಚಾಕುವಿನಿಂದ ಇರಿದ ಮಗ
ವೈದ್ಯImage Credit source: India TV
Follow us
ನಯನಾ ರಾಜೀವ್
|

Updated on: Nov 13, 2024 | 2:05 PM

ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ವ್ಯಕ್ತಿಯೊಬ್ಬ ವೈದ್ಯರಿಗೆ ಚಾಕುವಿನಿಂದ ಇರಿದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಏಳು ಬಾರಿ ವೈದ್ಯರಿಗೆ ಇರಿದಿದ್ದಾನೆ, ವೈದ್ಯರನ್ನು ಐಸಿಯುನಲ್ಲಿ ದಾಖಲಿಸಲಾಗಿದ್ದು, ಆರೋಗ್ಯ ಗಂಭೀರವಾಗಿದೆ. ಪೊಲೀಸರ ಪ್ರಕಾರ ದಾಳಿಕೋರ ವಿಘ್ನೇಶ್ ಮತ್ತು ಆತನ ಸಹಚರರಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ಘಟನೆ ಏನು? ಪೆರುಂಗಲತ್ತೂರಿನ ವಿಘ್ನೇಶ್ ಎಂದು ಗುರುತಿಸಲಾದ ಶಂಕಿತ ವ್ಯಕ್ತಿ ಹೊರರೋಗಿ ಪ್ರವೇಶ ಪಾಸ್ ತೆಗೆದುಕೊಂಡು ಆಂಕೊಲಾಜಿ ವಿಭಾಗಕ್ಕೆ ಪ್ರವೇಶಿಸಿದ್ದ, ಡಾ ಬಾಲಾಜಿ ಜಗನ್ನಾಥ್ ಅವರು ಕರ್ತವ್ಯದಲ್ಲಿದ್ದರು.

ಬೆಳಗ್ಗೆ 10.30ರ ಸುಮಾರಿಗೆ ಘಟನೆ ನಡೆದಿದೆ, ಆರೋಪಿ ವಿಘ್ನೇಶ್ ಜೊತೆಗೆ ಇನ್ನೂ ಕೆಲವರು ಇದ್ದರು. ವರದಿಗಳ ಪ್ರಕಾರ, ವಿಘ್ನೇಶ್ ಅವರ ತಾಯಿ ಪ್ರೇಮಾ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರ ಫಹೀಮ್ ಉತ್ತರ ಪ್ರದೇಶದಲ್ಲಿ ಬಂಧನ: ಮನೆ ಬುಲ್ಡೋಜರ್​ನಿಂದ ನೆಲಸಮ

ಚಿಕಿತ್ಸೆಯ ಬಗ್ಗೆ ವೈದ್ಯರೊಂದಿಗೆ ತೀವ್ರ ವಾಗ್ವಾದ ನಡೆಸಿದರು ಮತ್ತು ಪ್ರೇಮಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ಆರೋಪಿಸಿದರು. ಕೆಲ ಕಾಲ ವಾಗ್ವಾದದ ನಂತರ ಕೋಪಗೊಂಡ ವಿಘ್ನೇಶ್ ಚಾಕು ತೆಗೆದು ವೈದ್ಯರ ಕುತ್ತಿಗೆಗೆ ಇರಿದಿದ್ದಾನೆ. ಅಲ್ಲಿದ್ದ ಜನರು ಕೂಡಲೇ ವೈದ್ಯರಿಗೆ ಸಹಾಯ ಮಾಡಲು ಓಡಿ ಬಂದರು, ಅವರನ್ನು ಐಸಿಯುಗೆ ಕರೆದೊಯ್ದರು. ದಾಳಿಯ ನಂತರ ಆರೋಪಿ ಪರಾರಿಯಾಗಲು ಯತ್ನಿಸಿದ್ದು ಭದ್ರತಾ ಸಿಬ್ಬಂದಿ ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾನೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಲೈಂಜರ್ ಸೆಂಟಿನರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವುದು ಆಘಾತಕಾರಿ ಸಂಗತಿಯಾಗಿದೆ. ಈ ಬಗ್ಗೆ ಕೂಲಂಕುಷ ತನಿಖೆ ನಡೆಸಿ ಅಗತ್ಯ ಚಿಕಿತ್ಸೆಗೆ ಆದೇಶಿಸಿದ್ದೇನೆ ಎಂದರು.

ನಿಸ್ವಾರ್ಥ ಸೇವೆ ಮಾಡುವ ನಮ್ಮ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ