ದೊಡ್ಡಬಳ್ಳಾಪುರ: ಕೊಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಮೇಲೆ ಪೊಲೀಸ್​​ ಫೈರಿಂಗ್​

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 19, 2023 | 9:32 AM

ಶಿವರಾತ್ರಿ ಪ್ರಯುಕ್ತ ಬಿಜೆಪಿ ಮುಖಂಡ ಆಯೋಜಿಸಿದ್ದ ಕ್ರಿಕೆಟ್(Cricket Tournament) ಟೂರ್ನಮೆಂಟ್​ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಕೊಲೆ ಮಾಡಿ ಎಸ್ಕೇಪ್​ ಆಗಿದ್ದರು. ಇದೀಗ ಪೊಲೀಸರು ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ: ಕೊಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಮೇಲೆ ಪೊಲೀಸ್​​ ಫೈರಿಂಗ್​
ದೊಡ್ಡಬಳ್ಳಾಪುರ ಪೊಲೀಸರಿಂದ ಗುಂಡಿನ ದಾಳಿ ಆರೋಪಿಗಳ ಬಂಧನ
Follow us on

ದೊಡ್ಡಬಳ್ಳಾಪುರ: ಶಿವರಾತ್ರಿ ಪ್ರಯುಕ್ತ ಬಿಜೆಪಿ ಮುಖಂಡ ಆಯೋಜಿಸಿದ್ದ ಕ್ರಿಕೆಟ್(Cricket Tournament) ಟೂರ್ನಮೆಂಟ್​ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿತ್ತು. ಇಬ್ಬರು ಯುವಕರನ್ನ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರ ಪೊಲೀಸರು ನಗರದ ಹೊರವಲಯದ ರೈಲ್ವೆ ಕ್ರಾಸ್ ಬಳಿ ಇಂದು ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದು, ಆರೋಪಿಗಳಾದ ವಿನಯ್ ಮತ್ತು ತ್ರೀಮೂರ್ತಿ ಕಾಲಿಗೆ ಶೂಟ್​ ಮಾಡಿದ್ದಾರೆ. ಇನ್ನು ಕೊಲೆ ಮಾಡಿ ಓಡಿಹೋಗಿದ್ದ ಆರೋಪಿಗಳನ್ನ ಮುಂಜಾನೆ ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ, ಇಬ್ಬರು ಪೇದೆಗಳ ಮೇಲೆ ಅಟ್ಯಾಕ್ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಹೀಗಾಗಿ ಆತ್ಮ ರಕ್ಷಣೆಗಾಗಿ ಇನ್ಸ್​ಪೆಕ್ಟರ್ ಹರೀಶ್​ರವರು ಪೈರಿಂಗ್ ಮಾಡಿದ್ದಾರೆ.

ಇನ್ನು ಫೆ.17 ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಬಿಜೆಪಿ ಮುಖಂಡ ಧೀರಜ್​ ಅವರು ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದ್ದು, ಈ ವೇಳೆ ಮೈದಾನದಲ್ಲಿ ಕಾರು ನಿಲ್ಲಿಸಿದ್ದನ್ನು ಭರತ್ ಹಾಗೂ ಪ್ರತೀಕ್ ಪ್ರಶ್ನಿಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಮಾರಾಮಾರಿಯಾಗಿದೆ.  ಗ್ರಾಮಸ್ಥರು, ಇತರೆ ಆಟಗಾರರು ಜಗಳ ಬಿಡಿಸಿ ಕಳುಹಿಸಿದ್ದರು. ಇನ್ನೇನು ಎಲ್ಲಾ ಮುಗಿತು ಎನ್ನುವಷ್ಟರಲ್ಲೇ ಭರತ್, ಪ್ರತೀಕ್ ಬಸ್​ ಸ್ಟ್ಯಾಂಡ್​ಗೆ ಬಂದಾಗ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆ ನಂತರ ಆರೋಪಿಗಳು ಪರಾರಿಯಾಗಿದ್ದರು. ಸ್ಥಳಕ್ಕೆ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ, ಪರಿಶೀಲನೆ ನಡೆಸಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಟೂರ್ನಿಗಳಿಗೆ ನಿರ್ಬಂಧ

ಕ್ರಿಕೇಟ್ ಟೂರ್ನಿಮೆಂಟ್ ವೇಳೆ ಇಬ್ಬರ ಕೊಲೆ ಹಿನ್ನೆಲೆ, ಚುನಾವಣೆ ಮುಗಿಯುವವರೆಗೂ ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಟೂರ್ನಿಗಳಿಗೆ ನಿರ್ಬಂಧಿಸಲಾಗಿದೆ. ಯಾವುದೇ ಪದ್ಯಾವಳಿಗೆ ಅವಕಾಶ ನೀಡಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಅಕ್ರಮವಾಗಿ ಪಂದ್ಯಾವಳಿ ಆಯೋಜನೆ ಮಾಡಿದ್ರೆ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ. ಇನ್ನು ಈ ಮುಂಜಾನೆ ಆದ ಫೈರಿಂಗ್​ ಬಗ್ಗೆ ಮಾಹಿತಿ ನೀಡುವಾಗ ಈ ಕುರಿತು ಹೇಳಿದ್ದಾರೆ. ಕಳೆದ ರಾತ್ರಿ ಸ್ನೇಹಿತರಿಂದ ಹಣ ಪಡೆದುಕೊಳ್ಳಲು ವಿನಯ್ ಮತ್ತು ತ್ರೀಮೂರ್ತಿ ಬರ್ತಿರುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ನಮ್ಮ‌ತಂಡ ಅವರನ್ನ ಸುತ್ತುವರೆದು ಬಂಧಿಸಲು ಮುಂದಾಗಿದ್ರು. ಆದ್ರೆ ಈ ವೇಳೆ ಎಷ್ಟೆ ಎಚ್ಚರಿಕೆ ನೀಡಿದ್ರು ಅವರು ಕೇಳದೆ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ರು. ಹೀಗಾಗಿ ಆರೋಪಿಗಳ ಮೇಲೆ ನಮ್ಮ ತಂಡ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ಟಿವಿನೈನ್ ಗೆ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:23 am, Sun, 19 February 23