ವರದಕ್ಷಿಣೆ ಬೇಡಿಕೆಯನ್ನು ಈಡೇರಿಸಲಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ಪತ್ನಿಯನ್ನು ಪೋಷಕರ ಮನೆಯಿಂದ ಕರೆತಂದು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಆಮ್ರೋಹಾದಲ್ಲಿ ನಡೆದಿದೆ.
ಆತ ಟಿವಿಎಸ್ ಅಪಾಚೆ ಹಾಗೂ 3 ಲಕ್ಷ ರೂ. ನಗದು ನೀಡುವಂತೆ ಬೇಡಿಕೆ ಇಟ್ಟಿದ್ದ, ಹೆಣ್ಣಿನ ಮನೆಯವರು ಇದೆಲ್ಲವನ್ನೂ ಕೊಡಲು ವಿಫಲವಾದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ.
ಬೈಖೇಡ ಗ್ರಾಮದ ಸುಂದರ್ ಎಂಬಾತ ಎರಡು ವರ್ಷಗಳ ಹಿಂದೆ ಮೀನಾ ಎಂಬಾಕೆಯನ್ನು ಮದುವೆಯಾಗಿದ್ದು, ಅಂದಿನಿಂದ ವರದಕ್ಷಿಣೆಗಾಗಿ ಒತ್ತಾಯಿಸುತ್ತಿದ್ದ. ಈ ವಿಚಾರವಾಗಿ ಆತ ಕಿರುಕುಳ ನೀಡುತ್ತಿದ್ದ ಎಂದು ತಂದೆಗೆ ತಿಳಿಸಿದ್ದಳು.
ರಕ್ಷಾಬಂಧನದಿಂದ ಮೀನಾ ಸೋಹರ್ಕಾದಲ್ಲಿರುವ ತನ್ನ ತಂದೆಯ ಮನೆಯಲ್ಲಿಯೇ ಇದ್ದಳು. ಸುಂದರ್ ಪ್ರತಿದಿನ ಅವಳನ್ನು ಭೇಟಿಯಾಗುತ್ತಿದ್ದ. ಭಾನುವಾರ ರಾತ್ರಿಯೂ ಅವರನ್ನು ಭೇಟಿ ಮಾಡಿ ತನ್ನ ಮನೆಗೆ ಕರೆತಂದಿದ್ದಾನೆ.
ಮತ್ತಷ್ಟು ಓದಿ: ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ವೈದ್ಯನ ಖಾಸಗಿ ಅಂಗವನ್ನೇ ಕತ್ತರಿಸಿದ ನರ್ಸ್
ವರದಕ್ಷಿಣೆ ಕೊಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆಕೆಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳೀಯರು ಕೊಲೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಮಹಿಳೆಯ ಕುಟುಂಬ ಸದಸ್ಯರು ಪೊಲೀಸ್ ಠಾಣೆಗೆ ಬಂದು ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದರು.
ನಂತರ ಆಕೆಯ ತಂದೆ ವಿಜಯ್ ಖಡಕ್ ಬನ್ಶಿ ಪತಿ, ಆತನ ತಾಯಿ, ಸಹೋದರಿ ಮತ್ತು ಇತರ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಆಕೆಯ ಕುಟುಂಬದವರ ದೂರಿನ ಆಧಾರದ ಮೇಲೆ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಗಾಗಿ ಶೋಧ ನಡೆಯುತ್ತಿದೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ