ದಾಖಲೆರಹಿತ ಚಿನ್ನದೊಂದಿಗೆ ಸಿಕ್ಕಿಬಿದ್ದ ಕೃನಾಲ್ ಪಾಂಡ್ಯ | DRI detains Krunal Pandya for possessing unaccounted gold

ಇಂಡಿಯನ್ ಪ್ರಿಮೀಯರ್ ಲೀಗ್ 13 ನೇ ಅವೃತ್ತಿ ಗೆದ್ದ ಮುಂಬೈ ಟೀಮಿನ ಭಾಗವಾಗಿದ್ದ ಅಲ್​ರೌಂಡರ್ ಕೃನಾಲ್ ಪಾಂಡ್ಯ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಆಧಿಕಾರಿಗಳು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುದ್ದಿಸಂಸ್ಥೆಯೊಂದರ ಮೂಲಗಳ ಪ್ರಕಾರ, ದುಬೈನಿಂದ ಗುರುವಾರದಂದು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪಾಂಡ್ಯ ಅವರ ಬ್ಯಾಗಿನಲ್ಲಿ ದಾಖಲೆರಹಿತ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ.  ನವೆಂಬರ್ 10ರಂದು ದುಬೈ ಇಂಟರ್​ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ಡೆಲ್ಲ್ಲ […]

ದಾಖಲೆರಹಿತ ಚಿನ್ನದೊಂದಿಗೆ ಸಿಕ್ಕಿಬಿದ್ದ ಕೃನಾಲ್ ಪಾಂಡ್ಯ | DRI detains Krunal Pandya for possessing unaccounted gold
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 12, 2020 | 9:26 PM

ಇಂಡಿಯನ್ ಪ್ರಿಮೀಯರ್ ಲೀಗ್ 13 ನೇ ಅವೃತ್ತಿ ಗೆದ್ದ ಮುಂಬೈ ಟೀಮಿನ ಭಾಗವಾಗಿದ್ದ ಅಲ್​ರೌಂಡರ್ ಕೃನಾಲ್ ಪಾಂಡ್ಯ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಆಧಿಕಾರಿಗಳು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸುದ್ದಿಸಂಸ್ಥೆಯೊಂದರ ಮೂಲಗಳ ಪ್ರಕಾರ, ದುಬೈನಿಂದ ಗುರುವಾರದಂದು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪಾಂಡ್ಯ ಅವರ ಬ್ಯಾಗಿನಲ್ಲಿ ದಾಖಲೆರಹಿತ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. 

ನವೆಂಬರ್ 10ರಂದು ದುಬೈ ಇಂಟರ್​ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ಡೆಲ್ಲ್ಲ ಕ್ಯಾಪಿಟಲ್ಸ್ ಟೀಮನ್ನು 5 ವಿಕೆಟ್​ಗಳಿಂದ ಸೋಲಿಸಿ 5 ನೇ ಬಾರಿಗೆ ಪ್ರಶಸ್ತಿ ಬಾಚಿಕೊಂಡಾಗ ಕೃನಾಲ್ ವಿಜಯದ ರನ್ ಬಾರಿಸಿದ್ದರು. 

ಕಳೆದೆಲ್ಲ ಸೀಸನ್​ಗಳಲ್ಲಿ ಉಪಯುಕ್ತ ಮತ್ತು ಕೆಲವು ಬಾರಿ ಪಂದ್ಯ ಗೆದ್ದುಕೊಡುವ ಕಾಣಿಕೆಗಳನ್ನು ಮುಂಬೈ ಟೀಮಿಗೆ ನೀಡಿರುವ ಕೃನಾಲ್, ಐಪಿಎಲ್ 2020 ರಲ್ಲಿ ನೀರಸ ಪ್ರದರ್ಶನಗಳನ್ನು ನೀಡಿ ನಿರಾಸೆಗೊಳಿಸಿದರು. 13ನೇ ಅವೃತ್ತಿಯಲ್ಲಿ ಅವರು ಪಡೆದಿದ್ದು 6 ವಿಕೆಟ್ ಮತ್ತು ಗಳಿಸಿದ್ದು ಕೇವಲ 109 ರನ್ ಮಾತ್ರ.

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್