ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ: ಮಗು ಸೇರಿದಂತೆ ಬಳ್ಳಾರಿ ಮೂಲದ ಐವರು ಸಾವು
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಮೂಲದ ಐವರು ದುರ್ಮರಣ ಹೊಂದಿರುವಂತಹ ಘಟನೆ ಆಂಧ್ರದ ಮೆಹಬೂಬನಗರ ಜಿಲ್ಲೆ ಕೊತಕೋಟ ಬೈಪಾಸ್‌ನಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದು, ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ. ಅಪಘಾತ ಸ್ಥಳಕ್ಕೆ ಆಂಧ್ರಪ್ರದೇಶ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಬಳ್ಳಾರಿ, ಮಾರ್ಚ್ 4: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ (accident) ಹೊಡೆದ ಪರಿಣಾಮ ಬಳ್ಳಾರಿ ಮೂಲದ ಐವರು ದುರ್ಮರಣ ಹೊಂದಿರುವಂತಹ ಘಟನೆ ಆಂಧ್ರದ ಮೆಹಬೂಬನಗರ ಜಿಲ್ಲೆ ಕೊತಕೋಟ ಬೈಪಾಸ್‌ನಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದು, ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ. ಫಾತೀಮಾ(50), ಅಬ್ದುಲ್ ರೆಹಮಾನ್(30), ಮಾರಿಯಾ(32), ವಾಸೀಂ(01), ಬುಸ್ರಾ(02) ಮೃತ ದುರ್ದೈವಿಗಳು. ಮತ್ತಿಬ್ಬರ ಸ್ಥಿತಿ ಚಿಂತಾಜನಕ, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರ್ಟಿಗಾ ಕಾರಿನಲ್ಲಿ ಹೈದರಾಬಾದ್ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ಆಂಧ್ರಪ್ರದೇಶ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿ ಸಾವು
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಮುಂಜಾನೆ ನಡೆದಿದೆ. ಕಾಪು ಪೊಲಿಪು ನಿವಾಸಿ ಕಿಶೋರ್ (29) ಮೃತ ದುರ್ದೈವಿ.
ಇದನ್ನೂ ಓದಿ: ಹೈದರಾಬಾದ್ನಲ್ಲಿ ಕುಳಿತು ಮೋದಿ, ಯೋಗಿಗೆ ನಿಂದನೆ, ಅನ್ಯಕೋಮಿನ ವ್ಯಕ್ತಿ ವಿರುದ್ಧ ಯಾದಗಿರಿಯಲ್ಲಿ ಎಫ್ಐಆರ್
ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್ ಮುಂಜಾನೆ ಕೂಡ ತೆರಳಿದ್ದು, ಮೀನುಗಾರಿಕಾ ಬಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಮತ್ತೊಂದು ಬೋಟಿನವರಿಗೆ ಮೃತದೇಹ ಪತ್ತೆಯಾಗಿದೆ. ನಂತರ ದಡಕ್ಕೆ ಕಯಾಕ್ ಹಾಗೂ ಮೃತದೇಹವನ್ನು ತಂದಿದ್ದಾರೆ.
ಹೋರಿ ತಿವಿದು ಯುವಕ ಸಾವು: ಹತ್ತಕ್ಕೂ ಹೆಚ್ಚು ಜನರಿಗೆ ಗಾಯ
ಹಾವೇರಿ: ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಜಿಲ್ಲಾಡಳಿತ ನಿಷೇಧ ಮತ್ತು ಬರಗಾಲದ ನಡುವೇಯು ಹಾವೇರಿ ಅನ್ನದಾತರು ತನ್ನ ಸಹಪಾಟಿ ಎತ್ತುಗಳನ್ನು ಶೃಂಗರಿಸಿ ಓಡಿಸುವುದರ ಮೂಲಕ ಸಂಭ್ರಮ ಪಟ್ಟರು. ಈ ಸಂಭ್ರಮ ಬಹಳ ಹೊತ್ತು ಉಳಿಯಲಿಲ್ಲ ಏಕೆಂದರೆ ಹೋರಿ ತಿವಿದು ಓರ್ವ ಯುವಕ ಸಾವನಪ್ಪಿದ್ದು ಹಲವರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:48 pm, Mon, 4 March 24