ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟು: ದಿ. ಜೀವರಾಜ್ ಆಳ್ವ ಪುತ್ರ A6 ನಾಪತ್ತೆ, A5ಗೆ ಕೊರೊನಾ!

ಬೆಂಗಳೂರು: ಸ್ಯಾಂಡಲ್​ವುಡ್‌ಗೆ ಡ್ರಗ್ಸ್ ನಂಟು ಪ್ರಕರಣವು ದಿನೇ ದಿನೇ ರೋಚಕ ತಿರುವುಗಳನ್ನ ಪಡೆಯುತ್ತಿದೆ. ಇಂದು ಪ್ರಕರಣಕ್ಕೆ ಸಂಬಂಧಿಸಿ 12 ಜನರ ವಿರುದ್ಧ FIR ದಾಖಲಾಗಿತ್ತು. ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ Drugs: 12 ಮಂದಿ ಹಳ್ಳಕ್ಕೆ ಬಿದ್ರು! ಈ ನಡುವೆ ಪ್ರಕರಣದ A6 ಆರೋಪಿ ಆದಿತ್ಯ ಆಳ್ವ ಬಂಧನಕ್ಕೆ ತೆರಳಿದ CCB ತಂಡಕ್ಕೆ ಶಾಕ್​ ಎದುರಾಯಿತು. ಮಾಜಿ ಸಚಿವ ದಿ. ಜೀವರಾಜ್ ಆಳ್ವ ಪುತ್ರನಾಗಿರುವ ಆದಿತ್ಯ ಆಳ್ವ CCB ತನಿಖೆ ಆರಂಭವಾದ ಕೂಡಲೇ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. […]

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟು: ದಿ. ಜೀವರಾಜ್ ಆಳ್ವ ಪುತ್ರ A6 ನಾಪತ್ತೆ, A5ಗೆ ಕೊರೊನಾ!
ಆದಿತ್ಯ ಆಳ್ವಾ
Follow us
KUSHAL V
|

Updated on:Sep 05, 2020 | 5:17 PM

ಬೆಂಗಳೂರು: ಸ್ಯಾಂಡಲ್​ವುಡ್‌ಗೆ ಡ್ರಗ್ಸ್ ನಂಟು ಪ್ರಕರಣವು ದಿನೇ ದಿನೇ ರೋಚಕ ತಿರುವುಗಳನ್ನ ಪಡೆಯುತ್ತಿದೆ. ಇಂದು ಪ್ರಕರಣಕ್ಕೆ ಸಂಬಂಧಿಸಿ 12 ಜನರ ವಿರುದ್ಧ FIR ದಾಖಲಾಗಿತ್ತು.

ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ Drugs: 12 ಮಂದಿ ಹಳ್ಳಕ್ಕೆ ಬಿದ್ರು!

ಈ ನಡುವೆ ಪ್ರಕರಣದ A6 ಆರೋಪಿ ಆದಿತ್ಯ ಆಳ್ವ ಬಂಧನಕ್ಕೆ ತೆರಳಿದ CCB ತಂಡಕ್ಕೆ ಶಾಕ್​ ಎದುರಾಯಿತು. ಮಾಜಿ ಸಚಿವ ದಿ. ಜೀವರಾಜ್ ಆಳ್ವ ಪುತ್ರನಾಗಿರುವ ಆದಿತ್ಯ ಆಳ್ವ CCB ತನಿಖೆ ಆರಂಭವಾದ ಕೂಡಲೇ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಆದ್ದರಿಂದ, ಆದಿತ್ಯಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇನ್ನುಳಿದ ಆರೋಪಿಗಳ ಬಂಧನಕ್ಕೂ CCB ಅಧಿಕಾರಿಗಳು ಬಲೆ‌ ಬೀಸಿದ್ದಾರೆ.

A5 ವೈಭವ್​ ಜೈನ್​ಗೆ ಕೊರೊನಾ ಪಾಸಿಟಿವ್​ ಪ್ರಕರಣದ ಮತ್ತೊಬ್ಬ ಆರೋಪಿಗೆ ಕೊರೊನಾ ಸೋಂಕು ತಗಲಿದೆ ಎಂದು ಟಿವಿ9ಗೆ CCB ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ. FIRನಲ್ಲಿ A5 ಆರೋಪಿ ಎಂದು ಉಲ್ಲೇಖಿಸಲಾಗಿರುವ ವೈಭವ್​ ಜೈನ್​ಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ.

ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವೈಭವ್ ಜೈನ್ ಬಂಧನಕ್ಕೆ ತೆರಳಿದ್ದ ಸಿಸಿಬಿ ಪೊಲೀಸರ ತಂಡಕ್ಕೆ ಆತನಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಹೋಮ್ ಕ್ವಾರಂಟೈನ್ ಆಗಿರುವ ಮಾಹಿತಿ ದೊರೆತಿದೆ. ಹೀಗಾಗಿ, ವೈಭವ್ ಜೈನ್ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಆತನನ್ನ CCB ಅಧಿಕಾರಿಗಳು ಬಂಧಿಸಲಿದ್ದಾರೆ.

Published On - 5:00 pm, Sat, 5 September 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ