ಬೆಂಗಳೂರು: ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು (Bangalore) ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಪಾಷಾ ಅಲಿಯಾಸ್ ಪಿಲ್ಲು ಬಂಧಿತ ಡ್ರಗ್ ಪೆಡ್ಲರ್ (Drug Peddler). ಗುಬ್ಬಲಾಳ ಬಳಿಯ ಖಾಲಿ ಜಾಗವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ತಲಘಟ್ಟಪುರ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಪಿಲ್ಲುನಿಂದ 10.50 ಲಕ್ಷ ಮೌಲ್ಯದ 15 ಕೆಜಿ ಗಾಂಜಾ, ನಗದು ಮತ್ತು ಬೈಕ್ ಜಪ್ತಿ ಮಾಡಿದ್ದಾರೆ. ಆರೋಪಿ ವಿರುದ್ಧ ಬನಶಂಕರಿ, ಜಯನಗರ, ಕೋರಮಂಗಲ, ಕೆ.ಎಸ್.ಲೇಔಟ್ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಸದ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಶವಗಳನ್ನೂ ಬಿಡುತ್ತಿಲ್ಲ ಕಾಮುಕರು! ಮೃತದೇಹದ ಮೇಲೆ ಅತ್ಯಾಚಾರ ತಡೆಗೆ ಕಾನೂನು ರೂಪಿಸಲು ಕರ್ನಾಟಕ ಹೈಕೋರ್ಟ್ ಶಿಫಾರಸು
ಕಾರವಾರ: ಎಲೆಕ್ಟ್ರಿಕ್ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ ಖದೀಮರನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಪಟ್ಟಣದ ಕಲಾಲ್ ಓಣಿಯಲ್ಲಿ ಮೇ 16ರಂದು ಹಿರೋ ಸ್ಪೆಂಡರ್ ಪ್ಲಸ್ ಬೈಕ್ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ರಮೇಶ ಗಂಗಪ್ಪ ಮುಗಳಕಟ್ಟಿ (26), ಮಂಜುನಾಥ ಸೋಮನಕೊಪ್ಪ (32) ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಡಸ್ ಗ್ರಾಮದವರು ಎಂದು ತಿಳಿದುಬಂದಿದೆ.
ಕ್ರೈಂ ನ್ಯೂಸ್ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ