ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ನಟಿ ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ವಿಚಾರಣಾಧೀನ ಕೈದಿಯಾಗಿ ರಾಗಿಣಿ ಇಂದು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಲಿದ್ದಾರೆ.
ಸಂಜನಾ ಇನ್ನೂ 3 ದಿನ ಸಿಸಿಬಿ ಪೊಲೀಸರ ವಶಕ್ಕೆ
ಆದೇಶ ಪ್ರತಿಗಾಗಿ ಕಾಯುತ್ತಿರುವ ಸಿಸಿಬಿ
ಸಿಸಿಬಿ ಪೊಲೀಸರು ನ್ಯಾಯಾಲಯದ ಆದೇಶ ಪ್ರತಿಗಾಗಿ ಕಾಯುತ್ತಿದ್ದು, ಅಧಿಕೃತ ಆದೇಶ ಪ್ರತಿ ಸಿಕ್ಕ ತಕ್ಷಣ ರಾಗಿಣಿಯವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಿದ್ದಾರೆ.
ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ರಾಗಿಣಿ ಮನವಿ, ಆದ್ರೆ..
ಇದಕ್ಕೂ ಮುನ್ನ ವಾದ-ಪ್ರತಿವಾದದ ವೇಳೆ.. ತನ್ನನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಬೇಕು ಎಂದು ನಟಿ ರಾಗಿಣಿ ದ್ವಿವೇದಿ ಮನವಿ ಮಾಡಿಕೊಂಡಿದ್ದರು. ಸ್ಲಿಪ್ ಡಿಸ್ಕ್, ಬೆನ್ನು ನೋವು, ಅಸ್ತಮಾದಿಂದ ಬಳಲುತ್ತಿರುವುದಾಗಿ ಹೇಳಿದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ನೀಡುವಂತೆ ತಮ್ಮ ಪರ ವಕೀಲರಿಂದ ಕೋರ್ಟ್ಗೆ ಮನವಿ ಮಾಡಿಕೊಂಡಿದ್ದರು. ಆದರೆ, ಜೈಲು ಆಸ್ಪತ್ರೆಯಲ್ಲಿಯೇ ರಾಗಿಣಿಗೆ ಅಗತ್ಯ ಚಿಕಿತ್ಸೆ ನೀಡಲು ಕೋರ್ಟ್ ಸೂಚನೆ ನೀಡಿದೆ.
Published On - 4:08 pm, Mon, 14 September 20