AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಿಯರ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಡ್ರಗ್ಸ್​ ವಶ: 89.92 ಲಕ್ಷ ರೂಪಾಯಿ ಮೌಲ್ಯದ 4.5 ಕೆಜಿ ಎಫಿಡ್ರಿನ್ ಜಪ್ತಿ

ಲಾರಿ‌ ಹಾಗೂ ಕಾರು‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾದಂತಹ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಅರಮನೆ ಹೊನ್ನಮಾಚನಹಳ್ಳಿ ಬಳಿ ನಡೆದಿದೆ.

ಕೊರಿಯರ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಡ್ರಗ್ಸ್​ ವಶ: 89.92 ಲಕ್ಷ ರೂಪಾಯಿ ಮೌಲ್ಯದ 4.5 ಕೆಜಿ ಎಫಿಡ್ರಿನ್ ಜಪ್ತಿ
ಕೊರಿಯರ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಡ್ರಗ್ಸ್​ ವಶ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: May 03, 2022 | 10:13 PM

Share

ದೇವನಹಳ್ಳಿ: ಆಸ್ಟ್ರೇಲಿಯಾದಿಂದ ಕೊರಿಯರ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ 89.92 ಲಕ್ಷ ರೂಪಾಯಿ ಮೌಲ್ಯದ 4.5 ಕೆಜಿ ಡ್ರಗ್ಸ್ (Drugs) ಮತ್ತು ಎಫಿಡ್ರಿನ್​ನ್ನು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ದಾಳಿ ಮೂಲಕ ಜಪ್ತಿ ಮಾಡಿದ್ದಾರೆ. ದೇವನಹಳ್ಳಿ ಸಮೀಪ ಇರುವ ಕೆಂಪೇಗೌಡ ವಿಮಾನ ನಿಲ್ದಾಣ ಘಟನೆ ನಡೆದಿದೆ. ಕಳೆದ 29 ರಂದು ಕೊರಿಯರ್ ಮೂಲಕ ಏರ್ಪೋಟ್​ಗೆ ಬಂದಿದ್ದ ಪಾರ್ಸಲ್, ಲೋ ಬ್ಲಡ್ ಪ್ರೇಸರ್ ಸೇರಿದಂತೆ ಮೆಡಿಕಲ್​ನಲ್ಲಿ‌ ಉಪಯೋಗಿಸುವ ಎಫಿಡ್ರೀನ್ ಬಟ್ಟೆಗಳಲ್ಲಿ ಮರೆಮಾಚಿ ಖದೀಮರು ಕೋರಿಯರ್ ಮಾಡಿದ್ದರು. ಅನುಮಾನಗೊಂಡು ಪರಿಶೀಲಿಸಿದಾಗ ಎಫಿಡ್ರೀನ್ ಪತ್ತೆಯಾಗಿದ್ದು, ಕೊರಿಯರ್ ಪಾರ್ಸಲ್ ಕೊಡಲು ಕಳಿಸಿ ಇಂದು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳಿಂದ ಆರೋಪಿಯ ಬಂಧನ ಮಾಡಲಾಗಿದೆ.

ಲಾರಿ‌ ಹಾಗೂ ಕಾರು‌ ಮುಖಾಮುಖಿ ಡಿಕ್ಕಿ; 3 ಸಾವು

ತುಮಕೂರು: ಲಾರಿ‌ ಹಾಗೂ ಕಾರು‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾದಂತಹ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಅರಮನೆ ಹೊನ್ನಮಾಚನಹಳ್ಳಿ ಬಳಿ ನಡೆದಿದೆ. ಸೈಯದ್ ಮಹಮ್ಮದ್ ನಿಜಾಂ 40 ಮೃತ ದುರ್ದೈವಿ. ಹುಲಿಯೂರುದುರ್ಗದಿಂದ ಮದ್ದೂರು ಕಡೆ ಕಾರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಾಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸೈಯದ್ ಮಹಮ್ಮದ್ ನಿಜಾಂ ಪತ್ನಿ ನಾಜಿಯಾ (30) ಮತ್ತು 8 ವರ್ಷದ ಮಗ ಸೈಯದ್ ಹಸ್ಸಿ ಕೂಡ ಮೃತಪಟ್ಟಿದ್ದಾರೆ. ಒಟ್ಟಾರೆ ಮೂವರು ಸಾವನ್ನಪ್ಪಿದ್ದು, ಚನ್ನಪಟ್ಟಣ ಮೂಲದವರು ಎನ್ನಲಾಗಿದೆ. ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್ ಟ್ರಕ್ ಮುಖಾಮುಖಿ ಡಿಕ್ಕಿ; ಬೈಕ್​ ಸವಾರ ಸಾವು

ಚಿಕ್ಕೋಡಿ: ಬೈಕ್ ಟ್ರಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ. ಮುತ್ತಪ್ಪ ನಾವಿ (30) ಸಾವನ್ನಪ್ಪಿದ ದುರ್ದೈವಿ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಸತ್ತಿಯಿಂದ ಜಮಖಂಡಿಗೆ ಹೊರಟಿದ್ದು, ಅಥಣಿ-ಜಮುಖಂಡಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

ಗದಗ: ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧನ ಮಾಡಿದ್ದು, 3 ಲಕ್ಷ 56 ಸಾವಿರ ರೂಪಾಯಿ ಮೌಲ್ಯದ ವಿವಿಧ ಕಂಪನಿಯ ಆರು ಬೈಕ್ ವಶಕ್ಕೆ ಪಡೆಯಲಾಗಿದೆ. ರವಿಚಂದ್ರ ಮಾದರ ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆ ರೋಣ ತಾಲುಕಿನ ಜಿಗಳೂರು ಗ್ರಾಮದ ನಿವಾಸಿಯಾಗಿದ್ದು, ಗದಗ ಶಹರ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಗದಗ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ಕೊಡಗು: ತೋಟದಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿ ನಡೆದಿದೆ. ಪಣಿಯರವರ ತೋಲ(38) ಮೃತ ದುರ್ದೈವಿ. ಕೆ. ಅಯ್ಯಪ್ಪ ಎಂಬವರ ಕಾಫಿ ತೋಟದಲ್ಲಿ ದುರ್ಘಟನೆ ಸಂಭವಿಸಿದ್ದು, ವೀರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್