ದೇವನಹಳ್ಳಿ: ಆಸ್ಟ್ರೇಲಿಯಾದಿಂದ ಕೊರಿಯರ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ 89.92 ಲಕ್ಷ ರೂಪಾಯಿ ಮೌಲ್ಯದ 4.5 ಕೆಜಿ ಡ್ರಗ್ಸ್ (Drugs) ಮತ್ತು ಎಫಿಡ್ರಿನ್ನ್ನು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ದಾಳಿ ಮೂಲಕ ಜಪ್ತಿ ಮಾಡಿದ್ದಾರೆ. ದೇವನಹಳ್ಳಿ ಸಮೀಪ ಇರುವ ಕೆಂಪೇಗೌಡ ವಿಮಾನ ನಿಲ್ದಾಣ ಘಟನೆ ನಡೆದಿದೆ. ಕಳೆದ 29 ರಂದು ಕೊರಿಯರ್ ಮೂಲಕ ಏರ್ಪೋಟ್ಗೆ ಬಂದಿದ್ದ ಪಾರ್ಸಲ್, ಲೋ ಬ್ಲಡ್ ಪ್ರೇಸರ್ ಸೇರಿದಂತೆ ಮೆಡಿಕಲ್ನಲ್ಲಿ ಉಪಯೋಗಿಸುವ ಎಫಿಡ್ರೀನ್ ಬಟ್ಟೆಗಳಲ್ಲಿ ಮರೆಮಾಚಿ ಖದೀಮರು ಕೋರಿಯರ್ ಮಾಡಿದ್ದರು. ಅನುಮಾನಗೊಂಡು ಪರಿಶೀಲಿಸಿದಾಗ ಎಫಿಡ್ರೀನ್ ಪತ್ತೆಯಾಗಿದ್ದು, ಕೊರಿಯರ್ ಪಾರ್ಸಲ್ ಕೊಡಲು ಕಳಿಸಿ ಇಂದು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳಿಂದ ಆರೋಪಿಯ ಬಂಧನ ಮಾಡಲಾಗಿದೆ.
ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ; 3 ಸಾವು
ತುಮಕೂರು: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾದಂತಹ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಅರಮನೆ ಹೊನ್ನಮಾಚನಹಳ್ಳಿ ಬಳಿ ನಡೆದಿದೆ. ಸೈಯದ್ ಮಹಮ್ಮದ್ ನಿಜಾಂ 40 ಮೃತ ದುರ್ದೈವಿ. ಹುಲಿಯೂರುದುರ್ಗದಿಂದ ಮದ್ದೂರು ಕಡೆ ಕಾರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಾಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸೈಯದ್ ಮಹಮ್ಮದ್ ನಿಜಾಂ ಪತ್ನಿ ನಾಜಿಯಾ (30) ಮತ್ತು 8 ವರ್ಷದ ಮಗ ಸೈಯದ್ ಹಸ್ಸಿ ಕೂಡ ಮೃತಪಟ್ಟಿದ್ದಾರೆ. ಒಟ್ಟಾರೆ ಮೂವರು ಸಾವನ್ನಪ್ಪಿದ್ದು, ಚನ್ನಪಟ್ಟಣ ಮೂಲದವರು ಎನ್ನಲಾಗಿದೆ. ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೈಕ್ ಟ್ರಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು
ಚಿಕ್ಕೋಡಿ: ಬೈಕ್ ಟ್ರಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ. ಮುತ್ತಪ್ಪ ನಾವಿ (30) ಸಾವನ್ನಪ್ಪಿದ ದುರ್ದೈವಿ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಸತ್ತಿಯಿಂದ ಜಮಖಂಡಿಗೆ ಹೊರಟಿದ್ದು, ಅಥಣಿ-ಜಮುಖಂಡಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ
ಗದಗ: ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧನ ಮಾಡಿದ್ದು, 3 ಲಕ್ಷ 56 ಸಾವಿರ ರೂಪಾಯಿ ಮೌಲ್ಯದ ವಿವಿಧ ಕಂಪನಿಯ ಆರು ಬೈಕ್ ವಶಕ್ಕೆ ಪಡೆಯಲಾಗಿದೆ. ರವಿಚಂದ್ರ ಮಾದರ ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆ ರೋಣ ತಾಲುಕಿನ ಜಿಗಳೂರು ಗ್ರಾಮದ ನಿವಾಸಿಯಾಗಿದ್ದು, ಗದಗ ಶಹರ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಗದಗ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
ಕೊಡಗು: ತೋಟದಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿ ನಡೆದಿದೆ. ಪಣಿಯರವರ ತೋಲ(38) ಮೃತ ದುರ್ದೈವಿ. ಕೆ. ಅಯ್ಯಪ್ಪ ಎಂಬವರ ಕಾಫಿ ತೋಟದಲ್ಲಿ ದುರ್ಘಟನೆ ಸಂಭವಿಸಿದ್ದು, ವೀರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.