ವೈದ್ಯನ ಕಾರು ಗುದ್ದಿದ ರಭಸಕ್ಕೆ 200 ಮೀಟರ್ ದೂರ ಬಿದ್ದ ತಾಯಿ-ಮಗ

ಶಿವಮೊಗ್ಗದಲ್ಲಿ ಮದ್ಯಪಾನ ಮಾಡಿದ ದಂತ ವೈದ್ಯರು ಕಾರು ಚಾಲನೆ ಮಾಡುವಾಗ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿದ್ದ ತಾಯಿ ಮತ್ತು ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿನೋಬ ನಗರದಲ್ಲಿ ಘಟನೆ ನಡೆದಿದೆ. ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ ಚಿತ್ರದುರ್ಗದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವಂತಹ ಘಟನೆ ನಡೆದಿದೆ.

ವೈದ್ಯನ ಕಾರು ಗುದ್ದಿದ ರಭಸಕ್ಕೆ 200 ಮೀಟರ್ ದೂರ ಬಿದ್ದ ತಾಯಿ-ಮಗ
ವೈದ್ಯನ ಕಾರು ಗುದ್ದಿದ ರಭಸಕ್ಕೆ 200 ಮೀಟರ್ ದೂರ ಬಿದ್ದ ತಾಯಿ-ಮಗ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Nov 10, 2024 | 5:46 PM

ಶಿವಮೊಗ್ಗ, ನವೆಂಬರ್​ 10: ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವಂತಹ ಘಟನೆ ವಿನೋಬ ನಗರದ ಸವಿ ಬೇಕರಿ ಬಳಿ ನಡೆದಿದೆ. ತಾಯಿ ಉಮಾ ಹಾಗೂ ಮಗ ಶ್ರೇಯಸ್‌ಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗದಲ್ಲಿ ನಿನ್ನೆ ದಂತ ವೈದ್ಯರ ಕ್ರಿಕೆಟ್ ಪಂದ್ಯಾವಳಿ ನಡೆದಿತ್ತು. ಪಂದ್ಯಾವಳಿಯಲ್ಲಿ ರಾಜ್ಯಾದ್ಯಂತ 18 ದಂತ ವೈದ್ಯರ ತಂಡಗಳು ಭಾಗಿಯಾಗಿದ್ದರು. ಕ್ರಿಕೆಟ್ ಪಂದ್ಯಾವಳಿ ಬಳಿಕ ಕಾಸ್ಮೋ ಕ್ಲಬ್‌ನಲ್ಲಿ ಪಾರ್ಟಿ ಮಾಡಲಾಗಿದ್ದು, ಪಾರ್ಟಿ ಮುಗಿಸಿ ತೆರಳುವಾಗ ಮದ್ಯದ ಅಮಲಿನಲ್ಲಿ ಕಾರು ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಉಡುಪಿ: ಲೈಂಗಿಕ‌ ಕಿರುಕುಳ ಆರೋಪದಡಿ ವಶಕ್ಕೆ ಪಡೆದಿದ್ದ ವ್ಯಕ್ತಿ ಪೊಲೀಸ್​ ಠಾಣೆಯಲ್ಲೇ ಸಾವು

ಡಾ.ಅಲ್ವಿನ್ ಅಂಥೋನಿ ಸವಿ ಬೇಕರಿ ಎದುರು ಅಪಘಾತವೆಸಗಿ ಪರಾರಿಯಾಗುತ್ತಿದ್ದು, ಸ್ಥಳೀಯರು ಅಡ್ಡ ಹಾಕಿ ನಿಲ್ಲಿಸಿದ್ದಾರೆ. ಬಳಿಕ ಕಾರಿನಲ್ಲಿ ಗಾಯಾಳುಗಳನ್ನು ಡಾ.ಅಲ್ವಿನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಖಾಸಗಿ ಬಸ್ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಕಳ್ಳತನ: ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ದಂಪತಿ ಅರೆಸ್ಟ್

ಚಾಲಕನ ಅಜಾಗರೂಕತೆಯಿಂದ ರಸ್ತೆ ವಿಭಜಕಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪಲ್ಟಿ ಆಗಿದೆ. ಗಾಯಾಳುಗಳಿಗೆ ಚಳ್ಳಕೆರೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರೇಯಸಿ ಮನೆಗೆ ಬಂದಿದ್ದ ಯುವಕನನ್ನ ಕಟ್ಟಿಹಾಕಿ ಹಲ್ಲೆ

ಮಂಗಳೂರು: ಪ್ರೇಯಸಿ ಮನೆಗೆ ಬಂದಿದ್ದ ಯುವಕನನ್ನ ಕಟ್ಟಿಹಾಕಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆ ಬಂಟ್ವಾಳ ತಾಲೂಕಿನ ಸಜಿಪನಡು ಎಂಬಲ್ಲಿ 2 ದಿನದ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಬೆಂಗರೆ ನಿವಾಸಿ ಮುಸ್ತಫಾ ಮೇಲೆ ಹಲ್ಲೆ ಮಾಡಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?