ಶಿವಮೊಗ್ಗ, ನವೆಂಬರ್ 10: ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವಂತಹ ಘಟನೆ ವಿನೋಬ ನಗರದ ಸವಿ ಬೇಕರಿ ಬಳಿ ನಡೆದಿದೆ. ತಾಯಿ ಉಮಾ ಹಾಗೂ ಮಗ ಶ್ರೇಯಸ್‌ಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗದಲ್ಲಿ ನಿನ್ನೆ ದಂತ ವೈದ್ಯರ ಕ್ರಿಕೆಟ್ ಪಂದ್ಯಾವಳಿ ನಡೆದಿತ್ತು. ಪಂದ್ಯಾವಳಿಯಲ್ಲಿ ರಾಜ್ಯಾದ್ಯಂತ 18 ದಂತ ವೈದ್ಯರ ತಂಡಗಳು ಭಾಗಿಯಾಗಿದ್ದರು. ಕ್ರಿಕೆಟ್ ಪಂದ್ಯಾವಳಿ ಬಳಿಕ ಕಾಸ್ಮೋ ಕ್ಲಬ್‌ನಲ್ಲಿ ಪಾರ್ಟಿ ಮಾಡಲಾಗಿದ್ದು, ಪಾರ್ಟಿ ಮುಗಿಸಿ ತೆರಳುವಾಗ ಮದ್ಯದ ಅಮಲಿನಲ್ಲಿ ಕಾರು ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಉಡುಪಿ: ಲೈಂಗಿಕ ಕಿರುಕುಳ ಆರೋಪದಡಿ ವಶಕ್ಕೆ ಪಡೆದಿದ್ದ ವ್ಯಕ್ತಿ ಪೊಲೀಸ್ ಠಾಣೆಯಲ್ಲೇ ಸಾವು
ಡಾ.ಅಲ್ವಿನ್ ಅಂಥೋನಿ ಸವಿ ಬೇಕರಿ ಎದುರು ಅಪಘಾತವೆಸಗಿ ಪರಾರಿಯಾಗುತ್ತಿದ್ದು, ಸ್ಥಳೀಯರು ಅಡ್ಡ ಹಾಕಿ ನಿಲ್ಲಿಸಿದ್ದಾರೆ. ಬಳಿಕ ಕಾರಿನಲ್ಲಿ ಗಾಯಾಳುಗಳನ್ನು ಡಾ.ಅಲ್ವಿನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಚಿತ್ರದುರ್ಗ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಕಳ್ಳತನ: ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ದಂಪತಿ ಅರೆಸ್ಟ್
ಚಾಲಕನ ಅಜಾಗರೂಕತೆಯಿಂದ ರಸ್ತೆ ವಿಭಜಕಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪಲ್ಟಿ ಆಗಿದೆ. ಗಾಯಾಳುಗಳಿಗೆ ಚಳ್ಳಕೆರೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಂಗಳೂರು: ಪ್ರೇಯಸಿ ಮನೆಗೆ ಬಂದಿದ್ದ ಯುವಕನನ್ನ ಕಟ್ಟಿಹಾಕಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆ ಬಂಟ್ವಾಳ ತಾಲೂಕಿನ ಸಜಿಪನಡು ಎಂಬಲ್ಲಿ 2 ದಿನದ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಬೆಂಗರೆ ನಿವಾಸಿ ಮುಸ್ತಫಾ ಮೇಲೆ ಹಲ್ಲೆ ಮಾಡಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.