AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ತನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿದ ಮಗ

ಮನೆಯ ಹೆಣ್ಣುಮಕ್ಕಳನ್ನು ದುಷ್ಟರಿಂದ ರಕ್ಷಿಸಬೇಕಿದ್ದ ಮಗನೇ ತಾಯಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆರೋಪಿಯು ತನ್ನ 52 ವರ್ಷದ ತಾಯಿಯೊಂದಿಗೆ ಹಳ್ಳಿಯೊಂದರ ಮನೆಯಲ್ಲಿ ವಾಸಿಸುತ್ತಿದ್ದ. ಘಟನೆಯ ನಂತರ, ಸಂತ್ರಸ್ತೆ ತನ್ನ ಕಿರಿಯ ಮಗ ಮತ್ತು ಮಗಳೊಂದಿಗೆ ದಾಬಿ ಪೊಲೀಸ್ ಠಾಣೆಗೆ ಬಂದು ತನ್ನ ಮಗನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿದ ಮತ್ತಿನಲ್ಲಿ ತನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿದ ಮಗ
ಅಪರಾಧ
ನಯನಾ ರಾಜೀವ್
|

Updated on: Sep 05, 2024 | 7:58 AM

Share

ದಿನ ಕಳೆದಂತೆ ಸಂಬಂಧಗಳ ಬೆಲೆಯೂ ಕಡಿಮೆಯಾಗುತ್ತಿದೆ, ಅಮ್ಮ, ಅಕ್ಕ, ತಂಗಿ, ಮಗಳು ಇದ್ಯಾವ ಸಂಬಂಧಳಿಗೂ ಬೆಲೆ ಇಲ್ಲದಂತಾಗಿದೆ. ಇವರೆಲ್ಲರನ್ನೂ ಕಾಯಬೇಕಾದವರೇ ಅತ್ಯಾಚಾರದಂತಹ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ರಾಜಸ್ಥಾನದಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಯು ತನ್ನ 52 ವರ್ಷದ ತಾಯಿಯೊಂದಿಗೆ ಹಳ್ಳಿಯೊಂದರ ಮನೆಯಲ್ಲಿ ವಾಸಿಸುತ್ತಿದ್ದ. ಘಟನೆಯ ನಂತರ, ಸಂತ್ರಸ್ತೆ ತನ್ನ ಕಿರಿಯ ಮಗ ಮತ್ತು ಮಗಳೊಂದಿಗೆ ದಾಬಿ ಪೊಲೀಸ್ ಠಾಣೆಗೆ ಬಂದು ತನ್ನ ಮಗನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಯಿತು. ಸಂತ್ರಸ್ತೆ ತನ್ನ ಮಗನೊಂದಿಗೆ ತನ್ನ ಸಹೋದರನ ಮನೆಗೆ ಹೋಗಿದ್ದಳು. ಇಬ್ಬರೂ ಹಿಂತಿರುಗಿ ಹೋಗುತ್ತಿದ್ದಾಗ, ನಿರ್ಜನ ಪ್ರದೇಶದಲ್ಲಿ ತನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ನಾವು ಆರೋಪಿಯನ್ನು ಬಂಧಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ತರುಂಕಂತ್ ಸೋಮಾನಿ ತಿಳಿಸಿದ್ದಾರೆ. ಮತ್ತೊಂದು ಘಟನೆ

ಮತ್ತಷ್ಟು ಓದಿ: Shocking News: 10 ವರ್ಷದಿಂದ ಹೆಂಡತಿ ಮೇಲೆ ಗಂಡ, ಇತರೆ ಪುರುಷರಿಂದ ಡ್ರಗ್ಸ್ ನೀಡಿ ಅತ್ಯಾಚಾರ

ರಾತ್ರಿ ಮಲಗಿದ್ದ ಮಗಳ ಮೇಲೆ ಮೃಗದಂತೆ ದಾಳಿ ಮಾಡಿದ ಅಪ್ಪ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ತನ್ನ ಸ್ವಂತ ಮಗಳು ರಾತ್ರಿ ನಿದ್ರೆ ಮಾಡುವುದನ್ನು ನೋಡಿದ ನಂತರ ತಂದೆ ಆಕೆಯ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದಾನೆ. ಅವನ ಅಪ್ರಾಪ್ತ ಮಗಳು ಮಲಗಿದ್ದಾಗ ಈ ಕೊಳಕು ಕೆಲಸ ಮಾಡಿದ್ದಾನೆ. ಆ ಬಾಲಕಿ ಎಚ್ಚರಗೊಂಡಾಗ ಹಾಸಿಗೆಯ ಮೇಲೆ ತನ್ನ ತಂದೆಯನ್ನು ನೋಡಿ ಗಾಬರಿಯಾಗಿದ್ದಾಳೆ.

ಬರೇಲಿಯ ಥಾನಾ ಕ್ಯಾಂಟ್ ಪ್ರದೇಶದಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ತಂದೆಯ ವಿರುದ್ಧ ಅತ್ಯಾಚಾರ ಯತ್ನದ ಗಂಭೀರ ಆರೋಪ ಮಾಡಿದ್ದಾಳೆ. ವಿದ್ಯಾರ್ಥಿನಿಯ ದೂರಿನ ಪ್ರಕಾರ, ಆಕೆಯ ತಂದೆ ಆಗಾಗ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಬುಧವಾರ ರಾತ್ರಿ ಕುಡಿದು ಮನೆಗೆ ಬಂದು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ