ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ಕೊಂದ ತಮ್ಮ

ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ತಮ್ಮ ಕೊಲೆ ಮಾಡಿರುವ ಘಟನೆ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ (ಜು.28)ರ ತಡರಾತ್ರಿ ನಡೆದಿದೆ.

ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ಕೊಂದ ತಮ್ಮ
ಮೃತ ಸಂದೀಪ್​ (ಎಡಚಿತ್ರಿ) ಆರೋಪಿ ಶುಬೋದ್​ (ಬಲಚಿತ್ರ)
Follow us
Jagadisha B
| Updated By: ವಿವೇಕ ಬಿರಾದಾರ

Updated on: Aug 01, 2023 | 8:06 AM

ಬೆಂಗಳೂರು: ನನ್ನ ಪತ್ನಿಯೊಂದಿಗೆ (Wife) ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ತಮ್ಮ ಕೊಲೆ ಮಾಡಿರುವ ಘಟನೆ ಚಿಕ್ಕಜಾಲ ಪೊಲೀಸ್​ (Police) ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ (ಜು.28)ರ ತಡರಾತ್ರಿ ನಡೆದಿದೆ. ಸಂದೀಪ್ ಕುಮಾರ್ ಕೊಲೆಯಾದ ವ್ಯಕ್ತಿ. ಸಹೋದರ ಶುಭೋದ್ ಮಂಡಲ್ ಕೊಲೆ ಆರೋಪಿ. ಇವರಿಬ್ಬರು ಬಿಹಾರ ಮೂಲದವರಾಗಿದ್ದು, ಕೆಲಸಕ್ಕಾಗಿ ಬೆಂಗಳೂರಿಗೆ (Bengaluru) ಬಂದಿರುತ್ತಾರೆ. ಸಂದೀಪ್ ಕೆಲಸಕ್ಕಾಗಿ ಹಲವು ವರ್ಷಗಳ ಹಿಂದೆಯೇ ಪತ್ನಿಯನ್ನು ಊರಲ್ಲೇ ಬಿಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದನು.

ನಗರದ ಚಿಕ್ಕಜಾಲದಲ್ಲಿ ರೂಂ ಮಾಡಿಕೊಂಡು ಸ್ನೇಹಿತರ ಜೊತೆ ವಾಸವಾಗಿದ್ದನು. ಕಳೆದ ಮೂರು ತಿಂಗಳ ಹಿಂದಷ್ಟೇ ಸಹೋದರ ಶುಭೋದ್ ಮಂಡಲ್ ಕೂಡ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದನು. ಸಹೋದರನಿಗಾಗಿ ಸಂದೀಪ ಕೆಲಸ ಹುಡುಕುತ್ತಿದ್ದನು. ಈ ಮಧ್ಯೆ ಸಂದೀಪ್ ಪತ್ನಿ ಜೊತೆ ಶುಬೋದ್ ಹೆಚ್ಚು ಸಂಪರ್ಕ ಹೊಂದಿದ್ದು, ಸದಾ ಅತ್ತಿಗೆಯೊಂದಿಗೆ ಫೋನ್​​ಲ್ಲಿ ಮಾತನಾಡುತಿದ್ದನು. ಇದನ್ನು ಗಮನಿಸಿದ ಸಂದೀಪ್​ಗೆ ಈತ ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಮೂಡಿತ್ತು.

ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕ ಯುವಕನ ಪ್ರೀತಿ ಬಲೆಗೆ ಬಿದ್ದ ಯುವತಿ: ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ 

ಶುಕ್ರವಾರ ರಾತ್ರಿ ರೂಂನಲ್ಲಿ ಸಂದೀಪ್​ ಹಾಗೂ ಶುಬೋದ್​ ಮದ್ಯ ಸೇವಿಸುವಾಗ ಇದೇ ವಿಚಾರಕ್ಕೆ ಜಗಳ ನಡೆದಿದೆ. ಜಗಳದ ನಂತರ ಇಬ್ಬರು ಶಾಂತವಾಗಿದ್ದು, ಸಂದೀಪ್​ ನಶೆಯಲ್ಲೇ ಮಲಗಿದ್ದಾನೆ. ಈ ವೇಳೆ ಸುಬೋದ್​ ಸಂದೀಪ್​ ಮೇಲೆ ಹಲ್ಲೆ ಮಾಡಿ ಕೊಲೆಗೈದು ಪರಾರಿಯಾಗಿದ್ದಾನೆ. 24 ಗಂಟೆ ಬಳಿಕ ಅಂದರೇ ಶನಿವಾರ ರಾತ್ರಿ ಸಂದೀಪ್​ ಸ್ನೇಹಿತ ರೂಂಗೆ ಬಂದು ನೋಡಿದಾಗ, ಸಂದೀಪ ಸಾವನಪ್ಪಿರುವುದು ತಿಳಿದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಚಿಕ್ಕಜಾಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ನಾಪತ್ತೆಯಾಗಿದ್ದ ಆರೋಪಿ ಶುಬೋದ್ ಮಂಡಲ್​ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್