AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ವೃದ್ಧ ದಂಪತಿಯ ಕೊಲೆ, ಮಗ ನಾಪತ್ತೆ

ಬೆಂಗಳೂರು: ಲಾಕ್​ಡೌನ್​ ಸಡಿಲಿಕೆಯಾಗುತ್ತಿದ್ದಂತೆ ಬೆಂಗಳೂರಿನಲ್ಲೂ ಕ್ರೈಂಗಳು ಹೆಚ್ಚಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. ವೃದ್ಧ ದಂಪತಿಯನ್ನು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನರಸಿಂಹ ರಾಜು(70), ಸರಸ್ವತಿ(60) ಹತ್ಯೆಯಾದ ದುರ್ದೈವಿಗಳು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಮೈಸೂರು ಮೂಲದ ದಂಪತಿ: ಮೂಲತಃ ಮೈಸೂರಿನವರಾದ ವೃದ್ಧ ದಂಪತಿ ಕಳೆದ ಒಂದು ವರ್ಷದಿಂದ ಕಾವೇರಿಪುರದ ನಿವಾಸದಲ್ಲಿ ವಾಸವಿದ್ದರು. ಹತ್ಯೆಯಾದ ನರಸಿಂಹರಾಜು ಮದುವೆ ಬ್ರೋಕರ್ ಆಗಿದ್ದರು. ಕಳೆದ 10 ವರ್ಷಗಳ ಹಿಂದೆ ಕೆಲಸ […]

ಸಿಲಿಕಾನ್ ಸಿಟಿಯಲ್ಲಿ ವೃದ್ಧ ದಂಪತಿಯ ಕೊಲೆ, ಮಗ ನಾಪತ್ತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 10, 2020 | 2:28 PM

Share

ಬೆಂಗಳೂರು: ಲಾಕ್​ಡೌನ್​ ಸಡಿಲಿಕೆಯಾಗುತ್ತಿದ್ದಂತೆ ಬೆಂಗಳೂರಿನಲ್ಲೂ ಕ್ರೈಂಗಳು ಹೆಚ್ಚಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. ವೃದ್ಧ ದಂಪತಿಯನ್ನು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನರಸಿಂಹ ರಾಜು(70), ಸರಸ್ವತಿ(60) ಹತ್ಯೆಯಾದ ದುರ್ದೈವಿಗಳು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ.

ಮೈಸೂರು ಮೂಲದ ದಂಪತಿ: ಮೂಲತಃ ಮೈಸೂರಿನವರಾದ ವೃದ್ಧ ದಂಪತಿ ಕಳೆದ ಒಂದು ವರ್ಷದಿಂದ ಕಾವೇರಿಪುರದ ನಿವಾಸದಲ್ಲಿ ವಾಸವಿದ್ದರು. ಹತ್ಯೆಯಾದ ನರಸಿಂಹರಾಜು ಮದುವೆ ಬ್ರೋಕರ್ ಆಗಿದ್ದರು. ಕಳೆದ 10 ವರ್ಷಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲೇ ಇದ್ದರು. ಮೃತ ಸರಸ್ವತಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿ ಕೆಲಸ ಮಾಡುತ್ತಿದ್ದರು. ಇವರೂ ಸಹ ಕಳೆದ 5 ವರ್ಷಗಳಿಂದ ಕೆಲಸ ಬಿಟ್ಟು ಮನೆಯಲ್ಲೇ ಇದ್ದರು.

ಘಟನೆ ಬಳಿಕ ಮಗ ನಾಪತ್ತೆ: ಘಟನೆ ಬಳಿಕ ನಿನ್ನೆ ರಾತ್ರಿಯಿಂದ ವೃದ್ಧ ದಂಪತಿ ಪುತ್ರ ಸಂತೋಷ್ ನಾಪತ್ತೆಯಾಗಿದ್ದಾರೆ. ತಾಯಿ-ತಂದೆ ಜೊತೆ ಕಾಮಾಕ್ಷಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಿದ್ದ. ಸಂತೋಷ್ ವೃತ್ತಿಯಲ್ಲಿ ಆಡಿಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅಲ್ಲದೆ ಕಾಮಾಕ್ಷಿಪಾಳ್ಯದಲ್ಲೇ ತನ್ನ ಸ್ವಂತ ಕಚೇರಿ ಹೊಂದಿದ್ದಾನೆ. ಗರ್ಭಿಣಿ ಹಿನ್ನೆಲೆಯಲ್ಲಿ ಪತ್ನಿಯನ್ನು ಸಂತೋಷ್ ಊರಿಗೆ ಬಿಟ್ಟುಬಂದಿದ್ದ.

ಕೆಲಸದಾಕೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ: ಇಂದು ಬೆಳಗ್ಗೆ 8.30ರ ಸುಮಾರಿಗೆ ಕೆಲಸದಾಕೆ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಒಳಗೆ ಬಂದು ನೋಡಿದಾಗ‌ ಹಾಲ್​ನಲ್ಲಿ ನರಸಿಂಹ ರಾಜು ಮೃತದೇಹ ಬಿದ್ದಿತ್ತು. ಬಳಿಕ ರೂಂಗೆ ತೆರಳಿದಾಗ ಅಲ್ಲಿ ಸರಸ್ವತಿ ಮೃತ ದೇಹವಿತ್ತು. ಸರಸ್ವತಿ ಬಾಯಿನಲ್ಲಿ ಬಟ್ಟೆ ತುರುಕಿರುವುದು ಪತ್ತೆಯಾಗಿದೆ. ಕೂಡಲೇ 100ಗೆ ಕರೆ ಮಾಡಿ ಮನೆ ಕೆಲಸದಾಕೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ವಿಚಾರ ತಿಳಿದು ತಕ್ಷಣ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

Published On - 11:21 am, Wed, 10 June 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ