ಹಾಸನ, ಡಿ.19: ಆಸ್ತಿ ಮಾರಾಟ ಮಾಡುವಂತೆ ಒತ್ತಾಯಿಸಿ ಮಾಜಿ ಕಾರು ಚಾಲಕನನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ ಆರೋಪ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹಾಗೂ ಇವರ ತಾಯಿ ಭವಾನಿ ರೇವಣ್ಣ (Bhavani Revanna) ವಿರುದ್ಧ ಕೇಳಿಬಂದಿದೆ. ಅಲ್ಲದೆ, ತನಗೆ ನ್ಯಾಯ ನೀಡುವಂತೆ ಕಾರ್ತಿಕ್ ದಕ್ಷಿಣ ವಲಯ ಐಜಿಪಿಗೆ ದೂರು ನೀಡಿರುವುದು ಇದೀಗ ತಡವಾಗಿ ಬೆಳಿಕಿಗೆ ಬಂದಿದೆ.
ಕಾರ್ತಿಕ್ ದಶಕಗಳ ಕಾಲ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿದ್ದರು. ಆದರೆ, ಹೊಳೆನರಸೀಪುರ ತಾಲೂಕಿನಲ್ಲಿರುವ 13 ಎಕರೆ ಭೂಮಿಯನ್ನು ಮಾರಾಟ ಮಾಡುವಂತೆ ಒತ್ತಾಯಿಸಿ ತನ್ನನ್ನು ಹಾಗೂ ತನ್ನ ಪತ್ನಿಯನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಕಾರ್ತಿಕ್, ಪ್ರಜ್ವಲ್ ರೇವಣ್ಣ ಹಾಗೂ ಭವಾನಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಹಾಸನಕ್ಕೆ ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಎಂದ ದೇವೇಗೌಡ, ಮೈತ್ರಿ ಅಭ್ಯರ್ಥಿ ಅಲ್ಲ ಎಂದ ಬಿಜೆಪಿ ನಾಯಕ
2023 ರ ಮಾರ್ಚ್ 12 ರಂದು ಕಿಡ್ನಾಪ್ ಮಾಡಿದ್ದು, ಏಪ್ರಿಲ್ ತಿಂಗಳಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಸಹಿತ ಇನ್ನಿತರ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದರು. ಬಲವಂತವಾಗಿ ಕರೆದೊಯ್ದು ನನ್ನ 13 ಎಕರೆ ಭೂಮಿಯನ್ನು ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ನ್ಯಾಯ ಒದಗಿಸಿಕೊಡುವಂತೆ ಮಾಧ್ಯಮದ ಮುಂದೆ ಅಳಲುತೋಡಿಕೊಂಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:03 am, Tue, 19 December 23