ಲಾಕ್ಡೌನ್ ನಡುವೆಯೂ ಬೆಂಗಳೂರಿನಲ್ಲಿ ಗಾಂಜಾ ಸಾಗಾಟ, ಇಬ್ಬರ ಅರೆಸ್ಟ್
ಬೆಂಗಳೂರು: ಕೊರೊನಾ ಲಾಕ್ಡೌನ್ ನಡುವೆಯೂ ನಗರದಲ್ಲಿ ಅಕ್ರಮವಾಗಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮಹೀಂದ್ರಾ ಮ್ಯಾಕ್ಸ್ ಟ್ರಕ್‌ನಲ್ಲಿ ಗಾಂಜಾ ರವಾನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಅಬಕಾರಿ ಜಂಟಿ ಆಯುಕ್ತ ನಾಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 15 ಲಕ್ಷ ಮೌಲ್ಯದ 4.25 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಧಿತ ಆರೋಪಿಗಳ ಬಳಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಬೆಂಗಳೂರು: ಕೊರೊನಾ ಲಾಕ್ಡೌನ್ ನಡುವೆಯೂ ನಗರದಲ್ಲಿ ಅಕ್ರಮವಾಗಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮಹೀಂದ್ರಾ ಮ್ಯಾಕ್ಸ್ ಟ್ರಕ್‌ನಲ್ಲಿ ಗಾಂಜಾ ರವಾನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಅಬಕಾರಿ ಜಂಟಿ ಆಯುಕ್ತ ನಾಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 15 ಲಕ್ಷ ಮೌಲ್ಯದ 4.25 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಧಿತ ಆರೋಪಿಗಳ ಬಳಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
Published On - 12:06 pm, Sat, 16 May 20