ಲಾಕ್​ಡೌನ್ ನಡುವೆಯೂ ಬೆಂಗಳೂರಿನಲ್ಲಿ ಗಾಂಜಾ ಸಾಗಾಟ, ಇಬ್ಬರ ಅರೆಸ್ಟ್​

ಬೆಂಗಳೂರು: ಕೊರೊನಾ ಲಾಕ್​ಡೌನ್ ನಡುವೆಯೂ ನಗರದಲ್ಲಿ ಅಕ್ರಮವಾಗಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮಹೀಂದ್ರಾ ಮ್ಯಾಕ್ಸ್ ಟ್ರಕ್​ನಲ್ಲಿ ಗಾಂಜಾ ರವಾನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಅಬಕಾರಿ ಜಂಟಿ ಆಯುಕ್ತ ನಾಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 15 ಲಕ್ಷ ಮೌಲ್ಯದ 4.25 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಧಿತ ಆರೋಪಿಗಳ ಬಳಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಲಾಕ್​ಡೌನ್ ನಡುವೆಯೂ ಬೆಂಗಳೂರಿನಲ್ಲಿ ಗಾಂಜಾ ಸಾಗಾಟ, ಇಬ್ಬರ ಅರೆಸ್ಟ್​
ಸಾಧು ಶ್ರೀನಾಥ್​

Updated on: May 16, 2020 | 5:43 PM

ಬೆಂಗಳೂರು: ಕೊರೊನಾ ಲಾಕ್​ಡೌನ್ ನಡುವೆಯೂ ನಗರದಲ್ಲಿ ಅಕ್ರಮವಾಗಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮಹೀಂದ್ರಾ ಮ್ಯಾಕ್ಸ್ ಟ್ರಕ್​ನಲ್ಲಿ ಗಾಂಜಾ ರವಾನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಅಬಕಾರಿ ಜಂಟಿ ಆಯುಕ್ತ ನಾಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 15 ಲಕ್ಷ ಮೌಲ್ಯದ 4.25 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಧಿತ ಆರೋಪಿಗಳ ಬಳಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Published On - 12:06 pm, Sat, 16 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us