AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಐಎಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ; ಸೈಬರ್ ಪೊಲೀಸರ ಮೊರೆ ಹೋದ ಮಣಿವಣ್ಣನ್!

ಹಿರಿಯ ಐಎಎಸ್ ಅಧಿಕಾರಿ ಮೇಜರ್ ಮಣಿವಣ್ಣನ್​ಗೆ ಸೈಬರ್ ಕ್ರೈಮ್ ಸಂಕಷ್ಟ ಎದುರಾಗಿದೆ. ಅವರ ಹೆಸರಿನಲ್ಲಿ ಫೇಸ್ ಬುಕ್ ಖಾತೆಯನ್ನು ತೆಗೆದು, ಫರ್ನಿಚರ್ ಮಾರಾಟದ ಹೆಸರಿನಲ್ಲಿ ಅವರ ಆಪ್ತರನ್ನು ವಂಚಿಸಲಾಗಿದೆ. ಆರೋಪಿಗಳ ಪತ್ತೆ ಮಾಡಿ ಅಕೌಂಟ್ ಡಿಆ್ಯಕ್ಟಿವೇಟ್ ಮಾಡುವಂತೆ ಪೊಲೀಸರಲ್ಲಿ ಮಣಿವಣ್ಣನ್ ಮನವಿಮಾಡಿಕೊಂಡಿದ್ದಾರೆ.

ಹಿರಿಯ ಐಎಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ; ಸೈಬರ್ ಪೊಲೀಸರ ಮೊರೆ ಹೋದ ಮಣಿವಣ್ಣನ್!
ಸೈಬರ್ ವಂಚಕರ ವಿರುದ್ಧ ಪೊಲೀಸಲಿರೆ ದೂರು ನೀಡಿದ ಮಣಿವಣ್ಣನ್
ಭಾವನಾ ಹೆಗಡೆ
|

Updated on:Sep 20, 2025 | 11:19 AM

Share

ಬೆಂಗಳೂರು, ಸೆಪ್ಟೆಂಬರ್ 20:  ಜಗತ್ತು ಹೆಚ್ಚಿನ ತಾಂತ್ರಿಕ ಪ್ರಗತಿ ಹೊಂದುತ್ತಿದ್ದಂತೆ ಅದನ್ನು ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇತ್ತೀಚಿಗಷ್ಟೆ ನಟ ಉಪೇಂದ್ರ ಮತ್ತು ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಸೈಬರ್ ಅಪರಾಧದ ಜಾಲಕ್ಕೆ ಸಿಲುಕಿದ್ದರು. ಆರ್ಡರ್​ ತಲುಪಿಸಲು ಒಂದು ಸಂಖ್ಯೆಗೆ ಕರೆ ಮಾಡಿ ಎಂದು ಹೇಳಿ ಅವರ ಫೋನ್ಗಳನ್ನು ಹ್ಯಾಕ್​ ಮಾಡಲಾಗಿತ್ತು. ಅವರ ಸಂಬಂಧಿಕರಿಂದ UPI ಮೂಲಕ ಹಣ ಪಡೆದು ವಂಚಿಸಿದ್ದರು. ಈಗ ಹಿರಿಯ ಐಎಎಸ್ ಅಧಿಕಾರಿ ಮೇಜರ್ ಮಣಿವಣ್ಣನ್​ಗೆ ಕೂಡ ಇದೇ ರೀತಿ ಸಂಕಷ್ಟ ಎದುರಾಗಿದೆ. ಅವರ ಹೆಸರಿನಲ್ಲಿ ಫೇಸ್ ಬುಕ್ ಖಾತೆಯನ್ನು ತೆಗೆದು, ಫರ್ನಿಚರ್ ಮಾರಾಟದ ಹೆಸರಿನಲ್ಲಿ ಅವರ ಆಪ್ತರನ್ನು ವಂಚಿಸಲಾಗಿದೆ.

ಏನಿದು ಫೇಸ್​ಬುಕ್ ಪ್ರಕರಣ?

ಬೆಂಗಳೂರಿನ ಹಿರಿಯ ಐಎಎಸ್ ಅಧಿಕಾರಿ  ಮತ್ತು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್​ಗೆ ನಕಲಿ  ಫೇಸ್​ಬುಕ್  ಅಕೌಂಟ್ ಕಾಟ ಶುರುವಾಗಿದೆ. ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಸೈಬರ್ ವಂಚನೆ ಮಾಡಲಾಗುತ್ತಿದೆ. ಒಂದಲ್ಲ, ಎರಡಲ್ಲ ,ನಾಲ್ಕಕ್ಕೂ ಹೆಚ್ಚು ನಕಲಿ ಖಾತೆಯನ್ನು ಈ ವಂಚಕರು ತೆರೆದಿದ್ದಾರೆ. ಎಲ್ಲಾ ಖಾತೆಗಳಲ್ಲಿಯೂ ಮಣಿವಣ್ಣನ್​ ಅವರ ಹೆಸರು, ಫೂಟೋ ಬಳಸಲಾಗಿದೆ. ಈ ಖಾತೆಗಳಿಂದ ಮಣಿವಣ್ಣನ್ ಹೆಸರಿನಲ್ಲಿ ಅವರ ಆಪ್ತರಿಗೆ , ಸ್ನೇಹಿತರಿಗೆ ಮೆಸೇಜ್ ಮಾಡುತ್ತಾರೆ. ನಮ್ಮ ಸ್ನೇಹಿತರು ಸಿ.ಆರ್.ಪಿ.ಎಫ್ ನಲ್ಲಿ ಕೆಲಸ ಮಾಡಯತ್ತಿದ್ದಾರೆ. ಅವರ ವರ್ಗಾವಣೆ ಆಗುತ್ತಿದೆ. ಹೀಗಾಗಿ ಅವರ ಮನೆಯ ಫರ್ನಿಚರ್ ಮಾರಾಟ ಮಾಡಬೇಕೆಂದಿದ್ದಾರೆ. ನಾನು ಒಮ್ಮೆ ನೋಡಿದ್ದೇನೆ. ನಿಮಗೆ ಬೇಕಾದರೆ ನೀವು ಖರೀದಿಸಬಹುದು ಎಂದು ತರಾವರಿ ಮಸೇಜ್​ಗಳನ್ನು ಕಳುಹಿಸುತ್ತಾರೆ. ನಿಮ್ಮ ನಂಬರ್ ಕಳುಹಿಸಿ ನನ್ನ ಸ್ನೇಹಿತರೇ ನಿಮಗೆ ಕರೆ ಮಾಡುತ್ತಾರೆ ಎಂದು ನಂಬಿಸಿ ಇಲ್ಲಿಯ ವರೆಗೂ ಇಬ್ಬರು ವ್ಯಕ್ತಿಗಳಿಗೆ ಮೋಸ ಮಾಡಿದ್ದಾರೆ. ಈ ಕುರಿತು ಕೇಸ್ ದಾಖಲಿಸಿಕೊಂಡ ಸೈಬರ್ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ ಹ್ಯಾಕರ್ ಜಾಲಕ್ಕೆ ಸಿಲುಕಿ ಉಪೇಂದ್ರ ಪುತ್ರ ಆಯುಷ್ ಕಳೆದುಕೊಂಡ ಹಣ ಎಷ್ಟು?

ಮಣಿವಣ್ಣನ್​ಗೆ ಸೈಬರ್ ಖದೀಮರ ಕಾಟ ಇದೇ ಮೊದಲೇನಲ್ಲ!

ಇದು ಇತ್ತೀಚಿಗೆ ನಡೆದ ಘಟನೆಯಾದರೂ ಮಣಿವಣ್ಣನ್ ಇಂತದ್ದೇ ಸಮಸ್ಯೆ ಮುಂಚೆಯೂ ಎದುರಿಸಿದ್ದಾರೆ. ಕಳೆದ 9 ತಿಂಗಳಿನಲ್ಲಿ ಇದು 2 ನೇ ಪ್ರಕರಣವಾಗಿದ್ದು, ಮೊದಲನೇ ಪ್ರಕರಣ 9 ತಿಂಗಳ ಹಿಂದೆಯೇ ಪೊಲೀಸರ ಗಮನಕ್ಕೆ ಬಂದಿತ್ತು. 9 ತಿಂಗಳ ಹಿಂದೆಯೂ ಖದೀಮರು ಹೀಗೆಯೇ ನಕಲಿ ಫೇಸ್​ಬುಕ್ ಖಾತೆ ತೆರೆದಿದ್ದರು. ಬೆಂಗಳೂರು ಸೆಂಟ್ರಲ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿತ್ತು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ಯಾವ ಕ್ರಮವೂ ಆಗಿರಲಿಲ್ಲ. ಆಗ ಕೇಸ್ ಆಗುತ್ತಿದ್ದಂತೆ ಅಕೌಂಟ್ ಡಿಆ್ಯಕ್ಟಿವೇಟ್ ಮಾಡಿದ್ದ ವಂಚಕರು ಈಗ ಮತ್ತೆ ಅದೇ ಹಾದಿ ಹಿಡಿದಿದ್ದಾರೆ. ಆರೋಪಿಗಳ ಪತ್ತೆ ಮಾಡಿ ಅಕೌಂಟ್ ಡಿಆ್ಯಕ್ಟಿವೇಟ್ ಮಾಡುವಂತೆ ಪೊಲೀಸರಲ್ಲಿ ಮಣಿವಣ್ಣನ್ ಮನವಿಮಾಡಿಕೊಂಡಿದ್ದಾರೆ.

ಪ್ರದೀಪ್ ಚಿಕ್ಕಾಟಿ, Tv9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:18 am, Sat, 20 September 25

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ