AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ಡೋಸ್​ನಿಂದ ಗ್ರಾಮ ಲೆಕ್ಕಾಧಿಕಾರಿ ಬಲಿ, ವೈದ್ಯರ ನಿರ್ಲಕ್ಷ್ಯವೆಂದ ಕುಟುಂಬಸ್ಥರು

ಕಲಬುರಗಿ: ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿ ಇಡೀ ಕುಟುಂಬ ಕಣ್ಣೀರು ಹಾಕಿದೆ. ಪ್ರಾಣ ಉಳಿಸಬೇಕಿದ್ದ ವೈದ್ಯರೇ ಇಲ್ಲಿ ಈತನ ಸಾವಿಗೆ ಕಾರಣರಾಗಿದ್ದಾರಂತೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದರಾ ಗ್ರಾಮ ಲೆಕ್ಕಾಧಿಕಾರಿ..? ಕಲಬುರಗಿ ತಾಲೂಕಿನ ನಂದೂರು ಗ್ರಾಮ ನಿವಾಸಿ ಅಣವೀರಪ್ಪ ಮೃತ ವ್ಯಕ್ತಿ. ಇವರು ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡ್ತಿದ್ರು. 4 ದಿನದ ಹಿಂದೆ ರಕ್ತ ವಾಂತಿ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂಬಂಧಿಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಜಿಲ್ಲಾಸ್ಪತ್ರೆಗೆ ದಾಖಲಿಸಿದ ನಂತರವೂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಯಾಕಂದ್ರೆ, ವೈದ್ಯರು […]

ಹೈ ಡೋಸ್​ನಿಂದ ಗ್ರಾಮ ಲೆಕ್ಕಾಧಿಕಾರಿ ಬಲಿ,  ವೈದ್ಯರ ನಿರ್ಲಕ್ಷ್ಯವೆಂದ ಕುಟುಂಬಸ್ಥರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 21, 2019 | 10:56 AM

Share

ಕಲಬುರಗಿ: ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿ ಇಡೀ ಕುಟುಂಬ ಕಣ್ಣೀರು ಹಾಕಿದೆ. ಪ್ರಾಣ ಉಳಿಸಬೇಕಿದ್ದ ವೈದ್ಯರೇ ಇಲ್ಲಿ ಈತನ ಸಾವಿಗೆ ಕಾರಣರಾಗಿದ್ದಾರಂತೆ.

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದರಾ ಗ್ರಾಮ ಲೆಕ್ಕಾಧಿಕಾರಿ..? ಕಲಬುರಗಿ ತಾಲೂಕಿನ ನಂದೂರು ಗ್ರಾಮ ನಿವಾಸಿ ಅಣವೀರಪ್ಪ ಮೃತ ವ್ಯಕ್ತಿ. ಇವರು ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡ್ತಿದ್ರು. 4 ದಿನದ ಹಿಂದೆ ರಕ್ತ ವಾಂತಿ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂಬಂಧಿಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಜಿಲ್ಲಾಸ್ಪತ್ರೆಗೆ ದಾಖಲಿಸಿದ ನಂತರವೂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಯಾಕಂದ್ರೆ, ವೈದ್ಯರು ಸರಿಯಾಗಿ ಟ್ರೀಟ್ಮೇಂಟೇ ನೀಡಿಲ್ವಂತೆ.

ಒಂದು ವಾರ್ಡ್​ನಿಂದ ಮತ್ತೊಂದು ವಾರ್ಡ್​ಗೆ ಬದಲಾಯಿಸಿದ್ದು ಬಿಟ್ಟರೆ ಸರಿಯಾಗಿ ಟ್ರೀಟ್ಮೇಂಟೇ ಕೊಟ್ಟಿಲ್ಲ ಎಂದು ಹೇಳಲಾಗುತ್ತಿದೆ. ನಿನ್ನೆ ಮಧ್ಯಾಹ್ನ ಹೈ ಡೋಸ್ ಇಂಜೆಕ್ಷನ್ ನೀಡಿದ್ರಿಂದ ಮೃತಪಟ್ಟಿದ್ದಾನೆ ಅಂತಾ ಮೃತನ ಪತ್ನಿ ಆರೋಪಿಸುತ್ತಿದ್ದಾರೆ.

ಕಲಬುರಗಿ ಜಿಲ್ಲಾಸ್ಪತ್ರೆ ಅವ್ಯವಸ್ಥೆ ಆಗರವಾಗಿದೆ. ಬಹುತೇಕ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದೆ ಉದಾಸೀನತೆ ತೋರ್ತಾಯಿದ್ದಾರೆ. ಡ್ಯೂಟಿ ಡಾಕ್ಟರ್ ಬದ್ಲಾಗಿ ಸ್ಟೂಡೆಂಟ್ಸೇ ರೋಗಿಗಳಿಗೆ ಚಿಕಿತ್ಸೆ ನೀಡ್ತಿದ್ದಾರೆ. ಇದ್ರಿಂದಲೇ ಅನೇಕರು ಮೃತಟ್ಟಿದ್ದಾರೆ ಅನ್ನೋ ಆರೋಪಗಳು ಕೇಳಿಬರ್ತಿವೆ. ಈ ಬಗ್ಗೆ ಜಿಮ್ಸ್ ನಿರ್ದೇಶಕರು, ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿ ಮೃತಪಟ್ಟಿದ್ರೆ, ಖಂಡಿತವಾಗಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Published On - 8:47 am, Thu, 21 November 19

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ