AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಸ್ಟ್‌ಟ್ಯಾಗ್ ರೀಚಾರ್ಜ್‌ ಹೆಸರಿನಲ್ಲಿ ವಂಚನೆ: ಬೆಂಗಳೂರಿನಲ್ಲಿ ಮೊದಲ ದೂರು ದಾಖಲು

ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಹುಲ್ ಎಂಬುವರು ಫಾಸ್ಟ್‌ಟ್ಯಾಗ್ ರೀಚಾರ್ಜ್​ನಲ್ಲಿ ತಾಂತ್ರಿಕ ದೋಷ ಎದುರಿಸಿದ್ದರು. ಈ ಬಗ್ಗೆ ಬ್ಯಾಂಕ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ‌ ಸಮಸ್ಯೆ ಕುರಿತು ದೂರು ನೀಡಿದ್ರು. ಟ್ವೀಟ್ ನೋಡಿ‌ ಕಸ್ಟಮರ್ ಕೇರ್ ಹೆಸರಿನಲ್ಲಿ ರಾಹುಲ್​ಗೆ ಕರೆ ಮಾಡಿದ್ದ ವಂಚಕರು, ತಾವು ಕಳುಹಿಸಿರುವ ರಿಚಾರ್ಜ್ ಲಿಂಕ್​ಗೆ ಭೇಟಿ […]

ಫಾಸ್ಟ್‌ಟ್ಯಾಗ್ ರೀಚಾರ್ಜ್‌ ಹೆಸರಿನಲ್ಲಿ ವಂಚನೆ: ಬೆಂಗಳೂರಿನಲ್ಲಿ ಮೊದಲ ದೂರು ದಾಖಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 19, 2020 | 1:16 PM

Share

ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಹುಲ್ ಎಂಬುವರು ಫಾಸ್ಟ್‌ಟ್ಯಾಗ್ ರೀಚಾರ್ಜ್​ನಲ್ಲಿ ತಾಂತ್ರಿಕ ದೋಷ ಎದುರಿಸಿದ್ದರು. ಈ ಬಗ್ಗೆ ಬ್ಯಾಂಕ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ‌ ಸಮಸ್ಯೆ ಕುರಿತು ದೂರು ನೀಡಿದ್ರು. ಟ್ವೀಟ್ ನೋಡಿ‌ ಕಸ್ಟಮರ್ ಕೇರ್ ಹೆಸರಿನಲ್ಲಿ ರಾಹುಲ್​ಗೆ ಕರೆ ಮಾಡಿದ್ದ ವಂಚಕರು, ತಾವು ಕಳುಹಿಸಿರುವ ರಿಚಾರ್ಜ್ ಲಿಂಕ್​ಗೆ ಭೇಟಿ ನೀಡಿ ಯುಪಿಐ ಪಿನ್ ದಾಖಲಿಸಲು ಹೇಳಿದ್ದರು. ಯುಪಿಐ ಪಿನ್ ದಾಖಲಿಸುತ್ತಿದ್ದಂತೆ ಹಂತ ಹಂತವಾಗಿ 50 ಸಾವಿರ ರೂಪಾಯಿ ಅಪರಿಚಿತರ ಖಾತೆಗೆ ವರ್ಗಾವಣೆಯಾಗಿದೆ.

ಫಾಸ್ಟ್‌ಟ್ಯಾಗ್ ರೀಚಾರ್ಜ್ ವೇಳೆ 50 ಸಾವಿರ ರೂ. ಡೆಬಿಟ್ ಆಗಿದೆ ಎಂದು ಮೋಸ ಹೋದ ರಾಹುಲ್ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹೆಣ್ಣೂರು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 1:55 pm, Sat, 18 January 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ