AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ನೋಡ್ತಿದ್ದ, ಹುಡುಗಿಯರನ್ನು ಚುಡಾಯಿಸುತ್ತಿದ್ದ ಎಂಬ ಕಾರಣಕ್ಕೆ ಮಗನನ್ನು ಕೊಂದ ತಂದೆ

ಮಗ ದಾರಿ ತಪ್ಪುತ್ತಿದ್ದಾನೆ, ಎಷ್ಟು ಹೇಳಿದರೂ ಕೇಳುವ ಸ್ಥಿತಿಯಲ್ಲಿಲ್ಲ, ನಿತ್ಯ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ, ಹುಡುಗಿಯರನ್ನು ಚುಡಾಯಿಸುತ್ತಿದ್ದ ಎನ್ನುವ ಕಾರಣಕ್ಕೆ ಕೋಪಗೊಂಡ ತಂದೆ ಮಗನನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಪಾನೀಯಕ್ಕೆ ವಿಷ ಹಾಕಿ ಮಗನನ್ನು ಹತ್ಯೆ ಮಾಡಿದ್ದಾರೆ, ಈ ಘಟನೆಗೆ ಸಂಬಂಧಿಸಿದಂತೆ ಜಯ್ ಬಟ್ಟು ಎಂಬಾತನನ್ನು ಬಂಧಿಸಲಾಗಿದೆ.

ಅಶ್ಲೀಲ ವಿಡಿಯೋ ನೋಡ್ತಿದ್ದ, ಹುಡುಗಿಯರನ್ನು ಚುಡಾಯಿಸುತ್ತಿದ್ದ ಎಂಬ ಕಾರಣಕ್ಕೆ ಮಗನನ್ನು ಕೊಂದ ತಂದೆ
ವಿಜಯ್​Image Credit source: NDTV
ನಯನಾ ರಾಜೀವ್
|

Updated on: Feb 02, 2024 | 8:59 AM

Share

ಮಗ ದಾರಿ ತಪ್ಪುತ್ತಿದ್ದಾನೆ, ಎಷ್ಟು ಹೇಳಿದರೂ ಕೇಳುವ ಸ್ಥಿತಿಯಲ್ಲಿಲ್ಲ, ನಿತ್ಯ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ, ಹುಡುಗಿಯರನ್ನು ಚುಡಾಯಿಸುತ್ತಿದ್ದ ಎನ್ನುವ ಕಾರಣಕ್ಕೆ ಕೋಪಗೊಂಡ ತಂದೆ ಮಗನನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಪಾನೀಯಕ್ಕೆ ವಿಷ ಹಾಕಿ ಮಗನನ್ನು ಹತ್ಯೆ ಮಾಡಿದ್ದಾರೆ, ಈ ಘಟನೆಗೆ ಸಂಬಂಧಿಸಿದಂತೆ ವಿಜಯ್ ಬಟ್ಟು ಎಂಬಾತನನ್ನು ಬಂಧಿಸಲಾಗಿದೆ.

ಜನವರಿ 13ರಂದು ಬಾಲಕನೊಬ್ಬ ಕಾಣೆಯಾಗಿದ್ದ ಎನ್ನುವ ದೂರನ್ನು ಪೊಲೀಸರು ಸ್ವೀಕರಿಸಿದ್ದರು. ಇದಾದ ಬಳಿಕ ಬಾಲಕನ ಶವವೂ ಪತ್ತೆಯಾಗಿತ್ತು. ಕುಟುಂಬದವರು ಶವವನ್ನು ತಮ್ಮ ಕಾಣೆಯಾದ ಮಗ ವಿಶಾಲ್ ಎಂದು ಗುರುತಿಸಿದ್ದಾರೆ ಮತ್ತು ನಂತರದ ಮರಣೋತ್ತರ ಪರೀಕ್ಷೆಯಲ್ಲಿ ಆತ ವಿಷ ಸೇವಿಸಿದ್ದಾನೆ ಎಂದು ತಿಳಿದುಬಂದಿದೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ತಂದೆಯ ಹಾವ ಭಾವದಲ್ಲಿ ವ್ಯತ್ಯಾದವನ್ನು ಗುರುತಿಸಿದ ಪೊಲೀಸರು ಅವರನ್ನು ವಿಚಾರಿಸಿದ್ದಾರೆ. ಆಗ ತಾನೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಮತ್ತಷ್ಟು ಓದಿ: ಶಿವಮೊಗ್ಗದಿಂದ ರಾತ್ರಿ ವೇಳೆ ರೈಲಿನಲ್ಲಿ ಬರುತ್ತಿದ್ದ ಬೆಂಗಳೂರಿನ ಗೃಹಿಣಿ ಸಾವು, ಚಿನ್ನಾಭರಣಕ್ಕಾಗಿ ಕೊಲೆಯಾಗಿರುವ ಶಂಕೆ

ಮಗ ಓದುತ್ತಿರಲಿಲ್ಲ, ಶಾಲೆಯಲ್ಲಿ ಹೆಣ್ಣುಮಕ್ಕಳನ್ನು ಚುಡಾಯಿಸುತ್ತಿದ್ದ, ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ, ಹಲವು ಬಾರಿ ಮಗನಿಗೆ ಬುದ್ಧಿವಾದ ಹೇಳಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಹಾಗಾಗಿ ಈ ನಿರ್ಧಾರಕ್ಕೆ ಬಂದಿದ್ದಾಗಿ ತಂದೆ ಒಪ್ಪಿಕೊಂಡಿದ್ದಾರೆ.

ಶಾಲೆಗಳಿಂದಲೂ ನಿತ್ಯ ದೂರುಗಳು ಬರುತ್ತಿದ್ದವು,ಜನವರಿ 13 ರಂದು 14 ವರ್ಷದ ವಿಶಾಲ್‌ನನ್ನು ತನ್ನ ದ್ವಿಚಕ್ರ ವಾಹನದಲ್ಲಿ ತುಳಜಾಪುರ ರಸ್ತೆಗೆ ಕರೆದೊಯದಿದ್ದರು, ತಂಪಾದ ಪಾನೀಯ ಖರೀದಿಸಿ ಅದರಲ್ಲಿ ವಿಷ ಹಾಕಿ ಮಗನಿಗೆ ನೀಡಿದ್ದರು. ಶೀಘ್ರದಲ್ಲೇ ವಿಶಾಲ್ ಪ್ರಜ್ಞೆ ಕಳೆದುಕೊಂಡಿದ್ದ ಮತ್ತು ಬಟ್ಟು ಒಬ್ಬನೇ ಮನೆಗೆ ಮರಳಿದರು ಎಂದು ಪೊಲೀಸರು ತಿಳಿಸಿದ್ದಾರೆ.  ವಿಜಯ್ ಪತ್ನಿ ಜತೆಗೆ ಹೋಗಿ ಪೊಲೀಸರಿಗೆ ಮಗ ಕಾಣೆಯಾಗಿದ್ದಾನೆ ಎಂದು ದೂರು ನೀಡಲಾಗಿತ್ತು. ಬಳಿಕ ಸಿಕ್ಕಿಬಿದ್ದಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?