Crime News: 9 ವರ್ಷದ ಮಗಳ ಮೇಲೆ ತಂದೆಯಿಂದ ಅತ್ಯಾಚಾರ; ಪೊಲೀಸರೆದುರು ದಾರುಣ ಕತೆ ಬಿಚ್ಚಿಟ್ಟ ತಾಯಿ

ತಂದೆ-ಮಗಳ ಬಾಂಧವ್ಯ ಬಹಳ ಪವಿತ್ರವಾದುದು. ಆದರೆ, ಮುಂಬೈನಲ್ಲಿ ತಂದೆಯೊಬ್ಬ ತನ್ನ ಒಂಬತ್ತು ವರ್ಷದ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ. ಇದನ್ನು ಸಹಿಸಲಾರದ ತಾಯಿ ಪೊಲೀಸ್ ಠಾಣೆಗೆ ಹೋಗಿ ಈ ನಾಚಿಕೆಗೇಡಿನ ಕಥೆಯನ್ನು ಹೇಳಿದ್ದಾರೆ. ತನ್ನ ಗಂಡನೇ ಮಗಳ ಮೇಲೆ ಅತ್ಯಾಚಾರವೆಸಗುತ್ತಿದ್ದಾನೆ ಎಂದು ಆಕೆ ದೂರು ನೀಡಿದ್ದಾರೆ.

Crime News: 9 ವರ್ಷದ ಮಗಳ ಮೇಲೆ ತಂದೆಯಿಂದ ಅತ್ಯಾಚಾರ; ಪೊಲೀಸರೆದುರು ದಾರುಣ ಕತೆ ಬಿಚ್ಚಿಟ್ಟ ತಾಯಿ
ಅತ್ಯಾಚಾರ
Follow us
|

Updated on: Aug 30, 2024 | 6:43 PM

ಮುಂಬೈ: ತಂದೆ-ಮಗಳ ನಡುವಿನ ಪವಿತ್ರ ಸಂಬಂಧಕ್ಕೆ ಕಳಂಕ ತರುವಂತಹ ಘಟನೆಯೊಂದು ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಇಲ್ಲಿ ತಂದೆಯೊಬ್ಬ ತನ್ನ 9 ವರ್ಷದ ಮಗಳನ್ನು ಬೆದರಿಸಿ ಅತ್ಯಾಚಾರ ಮಾಡುತ್ತಿದ್ದ. ಆ ಬಾಲಕಿ ಇದಾಗಿ 2 ತಿಂಗಳ ನಂತರ ತನ್ನ ತಾಯಿಗೆ ಈ ಘಟನೆಯನ್ನು ಬಹಿರಂಗಪಡಿಸಿದ್ದಾಳೆ. ಬಳಿಕ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಮುಂಬೈನ ದಿಂಡೋಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 3 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಜೂನ್ ತಿಂಗಳಲ್ಲಿ ಒಂದು ದಿನ ನಾನು ಮನೆಯಲ್ಲಿ ಇರಲಿಲ್ಲ. ಆಗ ನನ್ನ ಗಂಡ ನಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ನಂತರ ಇದೇ ಕೃತ್ಯ ಹಲವು ಬಾರಿ ನಡೆದಿದೆ. ಆದರೆ, ಅಪ್ಪ ಬೆದರಿಕೆ ಹಾಕಿದ್ದರಿಂದ ನಮ್ಮ ಮಗಳು ಈ ವಿಷಯವನ್ನು ಯಾರಿಗೂ ಹೇಳಿರಲಿಲ್ಲ ಎಂದು ಆ ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಅಪ್ಪನ ರೋಗ ಗುಣಪಡಿಸುತ್ತೇನೆಂದು ಕರೆಸಿ ಸ್ಮಶಾನದಲ್ಲೇ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಮಂತ್ರವಾದಿ

ನಾನು ಮನೆಯಲ್ಲಿ ಇಲ್ಲದಿದ್ದಾಗ ಮಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನನ್ನ ಗಂಡನಿಗೆ ಕೊಡುತ್ತಿದ್ದೆ. ಈ ವೇಳೆ ಅವಕಾಶ ನೋಡಿದ ನನ್ನ ಪತಿ ಮಗಳನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ಆ ಸಮಯದಲ್ಲಿ ನಮ್ಮ ಮಗಳು ಘಟನೆಯನ್ನು ಯಾರ ಬಳಿಯೂ ಹೇಳದ ಕಾರಣ ನನ್ನ ಗಂಡನಿಗೆ ಧೈರ್ಯ ಮತ್ತಷ್ಟು ಹೆಚ್ಚಾಯಿತು. ನಂತರ ಈ ಅಪರಾಧವನ್ನು ಮತ್ತೆ ಮತ್ತೆ ಮಾಡಿದ್ದಾನೆ ಎಂದು ಆಕೆ ದೂರಿನಲ್ಲಿ ವಿವರಿಸಿದ್ದಾರೆ.

ಸಂತ್ರಸ್ತೆಯ ತಾಯಿಯ ಪ್ರಕಾರ, ಇದಾದ 2 ತಿಂಗಳ ನಂತರ ಈಗ ನಮ್ಮ ಮಗಳು ಈ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಅಮಾಯಕ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಲ್ಲಿಂದ ಆತನನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Crime News: 2ನೇ ಕ್ಲಾಸ್ ಬಾಲಕಿಗೆ ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ

ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್‌ಗಳ ಜೊತೆಗೆ ಹೊಸ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗತ್ಯ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಿಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?