Uttar Pradesh: ಈಜುಕೊಳದ​ ಬಳಿ ಮಕ್ಕಳ ಎದುರೇ ಗುಂಡಿಕ್ಕಿ ತಂದೆಯ ಹತ್ಯೆ

ಸ್ವಿಮಿಂಗ್​ ಪೂಲ್​ ಬಳಿ ಮಕ್ಕಳ ಎದುರೇ ದುಷ್ಕರ್ಮಿಯೊಬ್ಬ ತಂದೆಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ.

Uttar Pradesh: ಈಜುಕೊಳದ​ ಬಳಿ ಮಕ್ಕಳ ಎದುರೇ ಗುಂಡಿಕ್ಕಿ ತಂದೆಯ ಹತ್ಯೆ

Updated on: Jun 05, 2024 | 2:52 PM

ಸಾರ್ವಜನಿಕ ಈಜುಕೊಳದ ಬಳಿ ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ವರದಿಗಳ ಪ್ರಕಾರ ಮೀರತ್​ನ ಲೋಹಿಯಾನಗರ ಪ್ರದೇಶದ ಸಾರ್ವಜನಿಕ ಈಜುಕೊಳದ ಬಳಿ ಘಟನೆ ನಡೆದಿದೆ.

ಅರ್ಷದ್ ಹಾಗೂ ಈಗ ತಲೆಮರೆಸಿಕೊಂಡಿರುವ ಆರೋಪಿಗಳಾದ ಬಿಲಾಲ್ ಹಾಗೂ ಡಾನಿಶ್ ನಡುವೆ ಜಗಳ ನಡೆದು ಎರಡು ದಿನಗಳ ಬಳಿಕ ಈ ಆಘಾತಕಾರಿ ಘಟನೆ ನಡೆದಿದೆ. ಭದನಾ ಸ್ವಿಮ್ಮಿಂಗ್​ಪೂಲ್​ನಲ್ಲಿ ಎಲ್ಲರೆದುರೇ ಕೊಲೆ ನಡೆದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ. ಅರ್ಷದ್ ಮಕ್ಕಳೊಂದಿಗೆ ಈಜಾಡುತ್ತಿದ್ದ ವೇಳೆ ಈತನನ್ನು ಗುರಿಯಾಗಿಸಿ ಹತ್ಯೆ ಮಾಡಲಾಗಿದೆ.

ಅಪರಾಧದ ಹಿಂದಿನ ಉದ್ದೇಶದ ಬಗ್ಗೆ ಪೊಲೀಸ್​ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ವಿಡಿಯೋ:


ಮೃತ ವ್ಯಕ್ತಿ ಹಾಗೂ ಆರೋಪಿಯ ನಡುವೆ ಇತ್ತೀಚೆಗೆ ನಡೆದಿದ್ದ ಜಗಳವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ. ತಲೆಗೆ ಗುರಿಯಿಟ್ಟ ಕಾರಣ ಅರ್ಷದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us