Shocking News: ರಾತ್ರಿ ಮಲಗಿದ್ದ ಮಗಳ ಮೇಲೆ ಮೃಗದಂತೆ ದಾಳಿ ಮಾಡಿದ ಅಪ್ಪ

ತನ್ನ ಅಪ್ರಾಪ್ತ ಮಗಳು ರಾತ್ರಿ ವೇಳೆ ಮಲಗಿದ್ದಾಗ ಆಕೆಯನ್ನು ಕಂಡು ಅಪ್ಪನ ಮನಸು ಚಂಚಲಗೊಂಡಿತು. ಆಕೆಯ ಮೇಲೆ ಮೃಗದಂತೆ ದಾಳಿ ನಡೆಸಿದ ಅಪ್ಪ ತನ್ನ ಮಗಳ ಮೇಲೇ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಕಣ್ಣು ಬಿಟ್ಟು ನೋಡಿದ ಮಗಳು ಹಾಸಿಗೆ ಮೇಲೆ ಅಪ್ಪನನ್ನು ನೋಡಿ ಆಘಾತಗೊಂಡಿದ್ದಾಳೆ.

Shocking News: ರಾತ್ರಿ ಮಲಗಿದ್ದ ಮಗಳ ಮೇಲೆ ಮೃಗದಂತೆ ದಾಳಿ ಮಾಡಿದ ಅಪ್ಪ
ಮಗಳ ಮೇಲೆ ಮೃಗದಂತೆ ದಾಳಿ ಮಾಡಿದ ಅಪ್ಪ
Follow us
|

Updated on: Sep 03, 2024 | 7:51 PM

ರಾಯ್​ಬರೇಲಿ: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ತನ್ನ ಸ್ವಂತ ಮಗಳು ರಾತ್ರಿ ನಿದ್ರೆ ಮಾಡುವುದನ್ನು ನೋಡಿದ ನಂತರ ತಂದೆ ಆಕೆಯ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದಾನೆ. ಅವನ ಅಪ್ರಾಪ್ತ ಮಗಳು ಮಲಗಿದ್ದಾಗ ಈ ಕೊಳಕು ಕೆಲಸ ಮಾಡಿದ್ದಾನೆ. ಆ ಬಾಲಕಿ ಎಚ್ಚರಗೊಂಡಾಗ ಹಾಸಿಗೆಯ ಮೇಲೆ ತನ್ನ ತಂದೆಯನ್ನು ನೋಡಿ ಗಾಬರಿಯಾಗಿದ್ದಾಳೆ.

ಬರೇಲಿಯ ಥಾನಾ ಕ್ಯಾಂಟ್ ಪ್ರದೇಶದಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ತಂದೆಯ ವಿರುದ್ಧ ಅತ್ಯಾಚಾರ ಯತ್ನದ ಗಂಭೀರ ಆರೋಪ ಮಾಡಿದ್ದಾಳೆ. ವಿದ್ಯಾರ್ಥಿನಿಯ ದೂರಿನ ಪ್ರಕಾರ, ಆಕೆಯ ತಂದೆ ಆಗಾಗ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಬುಧವಾರ ರಾತ್ರಿ ಕುಡಿದು ಮನೆಗೆ ಬಂದು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ.

ಇದನ್ನೂ ಓದಿ: Shocking News: ಪತಿಯನ್ನು ಕೊಂದು ಬಾತ್ ರೂಂನಲ್ಲಿ ಶವ ಹೂತಿಟ್ಟ ಹೆಂಡತಿ; ಕೊಲೆಯ ರಹಸ್ಯ ಬಯಲಾಗಿದ್ದು ಹೇಗೆ?

ಆಕೆಯ ತಾಯಿ ತನ್ನ ತಂದೆಗೆ ವಿಚ್ಛೇದನ ನೀಡಿಲ್ಲ. ಆದರೆ ಅವಳು ಇನ್ನೊಬ್ಬ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದಾಳೆ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ. ತನ್ನ ತಾಯಿ ಇತರ ಜನರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಬುಧವಾರ ರಾತ್ರಿ ಆಕೆಯ ತಂದೆ ಮದ್ಯದ ಅಮಲಿನಲ್ಲಿ ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದು, ಆಕೆ ವಿರೋಧಿಸಿದಾಗ ಆಕೆಗೆ ಥಳಿಸಿದ್ದಾರೆ.

ಈ ಘಟನೆ ಬಳಿಕ ಬಾಲಕಿ ತನ್ನ ಸೋದರ ಸಂಬಂಧಿಯನ್ನು ಕರೆದುಕೊಂಡು ಚಿಕ್ಕಮ್ಮನ ಮನೆಗೆ ಹೋಗಿದ್ದಳು. ಅಲ್ಲಿಂದ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ವಿದ್ಯಾರ್ಥಿಯ ದೂರಿನ ಮೇರೆಗೆ ಆರೋಪಿಯ ವಿರುದ್ಧ ವರದಿ ಸಲ್ಲಿಸಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್