ವಿಜಯಪುರ: ಕೌಟುಂಬಿಕ ಕಲಹ, ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆಗೆ ಯತ್ನ; ಇಬ್ಬರು ಮಕ್ಕಳು ಸಾವು

ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಧಾರುಣ ಘಟನೆಯೊಂದು ನಡೆದಿದೆ. ತಂದೆಯೇ ತನ್ನ ಮೂವರು ಮಕ್ಕಳಿಗೆ ವಿಷ ಹಾಕಿ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೇ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಮಕ್ಕಳು ಮೃತರಾಗಿದ್ದಾರೆ.

ವಿಜಯಪುರ: ಕೌಟುಂಬಿಕ ಕಲಹ, ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆಗೆ ಯತ್ನ; ಇಬ್ಬರು ಮಕ್ಕಳು ಸಾವು
ಆತ್ಮಹತ್ಯೆಗೆ ಯತ್ನಿಸಿದ ತಂದೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 02, 2023 | 4:21 PM

ವಿಜಯಪುರ, ಸೆ.02: ಕೌಟುಂಬಿಕ ಕಲಹ ಹಿನ್ನಲೆ ಕಲಹ ಹಿನ್ನೆಲೆ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನಿಸಿದ ಘಟನೆ ವಿಜಯಪುರ (Vijayapura) ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಕೂಡಲೇ ತಂದೆ ಸೇರಿ ನಾಲ್ವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಿಸದೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಶಾಂತಾ ಹಾಗೂ ರಾಯಣ್ಣ ಮೃತ ದುರ್ದೈವಿಗಳು. ತಂದೆ ಭೀರಣ್ಣ ಹಾಗೂ ಮಗ ಸಂಗಮೇಶ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇನ್ನು ತಂದೆ ಭೀರಣ್ಣ ಅವರ ಪತ್ನಿ ಮನೆ ಬಿಟ್ಟು ಹೋಗಿದ್ದಾರೆ. ಇದೇ ಕಾರಣಕ್ಕೆ ತನ್ನ ಮೂವರು ಮಕ್ಳಳಿಗೆ ವಿಷ ಹಾಕಿದ್ದಾನೆ. ಈ ಕುರಿತು ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಸ್ತೆ ದಾಟುವಾಗ ಕಾರು ಡಿಕ್ಕಿ; ಓರ್ವ ವ್ಯಕ್ತಿ ಸ್ಥಲದಲ್ಲೇ ಸಾವು

ಬೆಂಗಳೂರು: ರಸ್ತೆ ದಾಟುವ ವೇಳೆ ಇನ್ನೋವ ಕಾರು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ಕಾರು ಡಿಕ್ಕಿಯಾಗಿ ರಘು(28) ಸ್ಥಳದಲ್ಲೇ ದುರ್ಮರಣ. ಇನ್ನು ಅಪಘಾತ ಬಳಿಕ ಕಾರು ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಮಂಗಳೂರಿನಲ್ಲಿ ಪ್ರಸಿದ್ಧ ಕಬಡ್ಡಿ ಆಟಗಾರ ಆತ್ಮಹತ್ಯೆ, ಬೆಂಗಳೂರಿನಲ್ಲಿ ಉದ್ಯಮಿ ಅನುಮಾನಾಸ್ಪದ ಸಾವು

ಗುಜರಿ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ; ದ್ವಿಚಕ್ರ ವಾಹನಗಳು ಬೆಂಕಿಗಾಹುತಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರದ ಕುಂಬಾರಪೇಟೆಯಲ್ಲಿರುವ ಗುಜರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಗೋದಾಮಿನಲ್ಲಿದ್ದ ವಸ್ತುಗಳು, ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿದೆ. ಇನ್ನು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us