ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಶವ ಪತ್ತೆ

ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಶವ ಪತ್ತೆ
ಮೃತ ಗ್ರಾಮ ಲೆಕ್ಕಾಧಿಕಾರಿ ಕೃಷ್ಣಬಾಯಿ
Follow us
ವಿವೇಕ ಬಿರಾದಾರ
|

Updated on:Mar 12, 2023 | 7:25 AM

ಮೈಸೂರು: ಮಹಿಳಾ ಗ್ರಾಮ ಲೆಕ್ಕಾಧಿಕಾರಿ (Village Accountant) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹುಣಸೂರು (Hunasuru) ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ. ಬಿಳಿಕೆರೆ ಹೋಬಳಿಯ ಶ್ಯಾನುಬೋಗನಹಳ್ಳಿ ವಲಯದ ಗ್ರಾಮ ಲೆಕ್ಕಾಧಿಕಾರಿ ಕೃಷ್ಣಾಬಾಯಿ ತುಕಾರಾಂ ಪಡ್ಕೆ (25) ಮೃತ ದುರ್ದೈವಿ. ಕೃಷ್ಣಾಬಾಯಿ ತುಕಾರಾಂ ಪಡ್ಕೆ ಮೂಲತಃ ಬೆಳಗಾವಿ (Belagavi) ಜಿಲ್ಲೆ ಅಥಣಿ (Athani) ತಾಲೂಕಿನ ಎಸ್‌ಗಳ್ಳಿ ಗ್ರಾಮದವರು. ಕೃಷ್ಣಾಬಾಯಿ 1 ತಿಂಗಳ ಹಿಂದಷ್ಟೆ ಬೆಳಗಾವಿಯ ಸುಬಾಸ್ ಬೋಸ್ಲೆಯವರನ್ನು ವಿವಾಹವಾಗಿದ್ದರು. ಸುಬಾಸ್ ಬೋಸ್ಲೆ ಹನೂರಿನ ಅರಣ್ಯ ಇಲಾಖೆಯ ಫಾರೆಸ್ಟ್ ಗಾರ್ಡ್​ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಇನ್ನು ಕೃಷ್ಣಾಬಾಯಿ, 4 ದಿನಗಳ ಹಿಂದಷ್ಟೆ ಕರ್ತವ್ಯಕ್ಕೆ ಹಾಜರಾಗಿದ್ದು, ಸಹೋದ್ಯೋಗಿ ಗ್ರಾಮ ಲೆಕ್ಕಾಧಿಕಾರಿ ಚೈತ್ರ ಮತ್ತು ಅವರ ತಾಯಿಯೊಂದಿಗೆ ಬಿಳಿಕೆರೆಯ ಎಸ್.ಬಿ.ಐ.ಹಿಂಬಾಗದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು (ಮಾ.12) ನೇಣು ಬಿಗಿದ ಸ್ಥಿಯಲ್ಲಿ ಪತ್ತೆಯಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಾಲ್ಕು ಮದುವೆಯಾಗಿ ವಂಚಿಸಿದ್ದ ಆರೋಪಿ ಮೇಲೆ ಮತ್ತೊಂದು ಆರೋಪ, ಠಾಣೆ ಮೆಟ್ಟಿಲೇರಿದ ಮತ್ತೋರ್ವ ಮಹಿಳೆ

ವಕೀಲರ ಮೇಲೆ ಹಲ್ಲೆ ಮಾಡಲು ಯತ್ನ

ಬೆಂಗಳೂರು: ವಕೀಲರ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಮಾರ್ಚ್ 11 ರ ಸಂಜೆ 4 ಗಂಟೆ ಸುಮಾರಿಗೆ ವಕೀಲ ಹುಸೇನ್ ಎಂಬುವವರು ನಾಗವಾರ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಎರಡು ಬೈಕ್​ನಲ್ಲಿ ನಾಲ್ವರು ಹಿಂಬಾಲಿಸಿಕೊಂಡು ಬಂದು, ಕಾರ್​ಗೆ ಬೈಕ್​ನಿಂದ ಅಡ್ಡಗಟ್ಟಿದ್ದಾರೆ. ನಂತರ ಕಾರಿನ ಬಳಿ ಬಂದು ಕಾರಿನ ಗಾಜು ಇಳಿಸುವಂತೆ ಬೆದರಿಕೆ ಹಾಕಿದ್ದಾರೆ. ಆಗ ವಕೀಲ ಹುಸೇನ್​ ಕಾರಿನ ಗಾಜು ಇಳಿಸದೆ ಇದ್ದಾಗ, ಕಬ್ಬಿಣದ ರಾಡ್​ನಿಂದ ಕಾರಿನ ಗಾಜನ್ನು ಒಡೆದು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ‌ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 am, Sun, 12 March 23

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ