AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳು ತುಂಬುವ ಎರಡು ಗುಂಪುಗಳ ನಡುವೆ ಮಾರಾಮಾರಿ: 10ಕ್ಕೂ ಹೆಚ್ಚು ಜನರಿಗೆ ಗಾಯ, 16 ಜನರ ಬಂಧನ

ಒಂದು ಗುಂಪಿನ ಚಾಲಕ ಸರತಿ ಬಿಟ್ಟು ಮರಳು ತುಂಬಲು ಹೊರಟಿದ್ದಕ್ಕೆ ಮಾತಿನ ಚಕಮಕಿ ಉಂಟಾಗಿದೆ. ಬಳಿಕ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಸಿನಿಮೀಯ ರೀತಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.

ಮರಳು ತುಂಬುವ ಎರಡು ಗುಂಪುಗಳ ನಡುವೆ ಮಾರಾಮಾರಿ: 10ಕ್ಕೂ ಹೆಚ್ಚು ಜನರಿಗೆ ಗಾಯ, 16 ಜನರ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 22, 2022 | 10:09 AM

Share

ಕೊಪ್ಪಳ: ಮರಳು ತುಂಬುವ ಎರಡು ಗುಂಪುಗಳ ಮದ್ಯೆ ಗಲಾಟೆಯಾಗಿದ್ದು, 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆ ಕಾರಟಗಿ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಳು ತುಂಬ ವಿಚಾರಕ್ಕೆ ರಾತ್ರಿ ವೇಳೆ ನಡೆದ ಗಲಾಟೆಯಾಗಿದ್ದು, ನಂದಿಹಳ್ಳಿ ಗ್ರಾಮದಲ್ಲಿ ಸದ್ಯಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಬಡಿಗೆ, ಮಾರಕಾಸ್ತ್ರಗಳಿಂದ ಒಂದು ಗುಂಪಿನ ಮೇಲೆ ಮತ್ತೊಂದು ಗುಂಪು ಹಲ್ಲೆ ನಡೆಸಿದೆ. ಮರಳು ತುಂಬಲು ಸರತಿ ನಿಂತಿದ್ದ ಟ್ರ್ಯಾಕ್ಟರ್​ಗಳು, ಈ ವೇಳೆ ಒಂದು ಗುಂಪಿನ ಚಾಲಕ ಸರತಿ ಬಿಟ್ಟು ಮರಳು ತುಂಬಲು ಹೊರಟಿದ್ದಕ್ಕೆ ಮಾತಿನ ಚಕಮಕಿ ಉಂಟಾಗಿದೆ. ಬಳಿಕ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಸಿನಿಮೀಯ ರೀತಿಯಲ್ಲಿ ಹೊಡೆದಾಡಿಕೊಂಡಿದ್ದಾರೆ. 16 ಜನರನ್ನು ಬಂಧಿಸಿರಯವ ಕಾರಟಗಿ ಪೊಲೀಸರು, 50 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

ಕೊಲೆಯಲ್ಲಿ ಅಂತ್ಯವಾದ ಗೆಳೆಯರ ಗಲಾಟೆ

ಚಿತ್ರದುರ್ಗ: ಕೂಲಿ ಹಣದ ವಿಚಾರದಲ್ಲಿ ಗೆಳೆಯರಿಬ್ಬರ ನಡುವೆ ಗಲಾಟೆಯಾಗಿದ್ದು, ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಕಾಮನಬಾವಿ ಬಡಾವಣೆಯಲ್ಲಿ ನಡೆದಿದೆ. ಮಹ್ಮದ್ ಅಲಿ(30) ಮೇಲೆ ಇಟ್ಟಿಗೆಯಿಂದ ತೀವ್ರ ಹಲ್ಲೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹ್ಮದ್ ಅಲಿ ಸಾವನ್ನಪ್ಪಿದ್ದಾನೆ. ನಾಪತ್ತೆಯಾದ ಆರೋಪಿ ಖಾದರ್ ಭಾಷಾ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ. ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Tim David: ಪಂದ್ಯ ಆರಂಭಕ್ಕೂ ಮುನ್ನ ಟಿಮ್ ಡೇವಿಡ್​ಗೆ ಡುಪ್ಲೆಸಿಸ್​ರಿಂದ ಮೆಸೇಜ್: ಏನಿತ್ತು ಅದರಲ್ಲಿ ಗೊತ್ತೇ?

ಮಾರಕಾಸ್ತ್ರ ತೋರಿಸಿ ಬೆದರಿಸಿ ಹಣ, ಒಡವೆ ದರೋಡೆ

ಚಿತ್ರದುರ್ಗ: ಮದ್ಯರಾತ್ರಿ ಮಾರಕಾಸ್ತ್ರ ತೋರಿಸಿ ಬೆದರಿಸಿ ಹಣ, ಒಡವೆ ದರೋಡೆ ಮಾಡಿರುವಂತಹ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಕರ್ಪೂರದ ಕಟ್ಟೆ ಗ್ರಾಮದಲ್ಲಿ ನಡೆದಿದೆ. ನಾಲ್ಕು ಜನ ದರೋಡೆಕೋರರಿಂದ ಚಂದ್ರಶೇಖರ್ ಎಂಬುವರ ಮನೆಗೆ ನುಗ್ಗಿ ದರೋಡೆ ಮಾಡಲಾಗಿದೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ