ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿಗಳಿಗೆ ಆರ್ಥಿಕ ಸಂಕಷ್ಟ? ಹಣ ಬಿಡುಗಡೆ ಮಾಡುವಂತೆ‌‌ ಪತ್ರ ಬರೆದು ಮನವಿ

ಕಳೆದ ಎರಡೂವರೆ ತಿಂಗಳಿಂದ ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆಯನ್ನು ಪೊಲೀಸರು ನಡೆಸುತ್ತಾ ಇದ್ದಾರೆ. ಹತ್ತಾರು ಕಡೆಗಳಲ್ಲಿ ಹೋಗಿ ಸಾಕ್ಷ್ಯಗಳನ್ನು ಸಂಗ್ರಹ ಮಾಡಿದ್ದಾರೆ. ನೂರಾರು ಸಾಕ್ಷ್ಯಗಳನ್ನು ಸಂಗ್ರಹ ಮಾಡಿದ್ದು, ಅವುಗಳನ್ನು ಹಾರ್ಡ್ ಡಿಸ್ಕ್ ಹಾಗೂ ಪೆನ್ ಡ್ರೈವ್​​ಗಳಲ್ಲಿ ಭದ್ರ ಮಾಡಿದ್ದಾರೆ. ಸದ್ಯ ಎಲ್ಲಾ ಕಡೆ ಓಡಾಟ ಮಾಡಿರುವ ಪೊಲೀಸರಿಗೆ ಈಗ ಆರ್ಥಿಕ ಸಂಕಷ್ಟ ಎದುರಾಗಿದಾಯಾ ಎಂಬ ಪ್ರಶ್ನೆ ಮೂಡಿದೆ. ಬಿಲ್​ಗಳ ಸಮೇತ ಖರ್ಚಾಗಿರುವ ಹಣ ಮಂಜೂರು ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿರುವುದೇ ಇದಕ್ಕೆ ಕಾರಣ.

ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿಗಳಿಗೆ ಆರ್ಥಿಕ ಸಂಕಷ್ಟ? ಹಣ ಬಿಡುಗಡೆ ಮಾಡುವಂತೆ‌‌ ಪತ್ರ ಬರೆದು ಮನವಿ
ರೇಣುಕಾಸ್ವಾಮಿ & ದರ್ಶನ್
Follow us
| Updated By: ಗಣಪತಿ ಶರ್ಮ

Updated on: Aug 19, 2024 | 4:02 PM

ಬೆಂಗಳೂರು, ಆಗಸ್ಟ್ 19: ರೇಣುಕಾಸ್ವಾಮಿ ಕೊಲೆ ಕೇಸನ್ನು ಪೊಲೀಸರು ಬಹಳ ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡುತ್ತಾ ಇದ್ದಾರೆ. ತನಿಖೆ ವೇಳೆ ಹತ್ತಾರು ಕಡೆಗಳಲ್ಲಿ ಸುತ್ತಾಟ ಮಾಡಿದ್ದಾರೆ. ಇದುವರೆಗೂ ಸುಮಾರು 200ಕ್ಕೂ ಹೆಚ್ಚು ಸಾಕ್ಷ್ಯಗಳ ಜೊತೆಗೆ ಸುಮಾರು 300ಕ್ಕೂ ಹೆಚ್ಚು ವ್ಯಕ್ತಿಗಳನ್ನು ವಿಚಾರಣೆ ಮಾಡಿದ್ದಾರೆ. ಇನ್ನು‌ ಸಾಕ್ಷ್ಯ ಸಂಗ್ರಹ ಮಾಡಿದ ಎಲ್ಲಾ ಕಡೆಗಳಲ್ಲೂ ಹೋಗಿ ಪೊಲೀಸರು ಮಹಜರು ಕೂಡ ನಡೆಸಿದ್ದಾರೆ. ಹೀಗಾಗಿ ಕಳೆದ ಎರಡೂವರೆ ತಿಂಗಳಿಂದ ಲಕ್ಷಾಂತರ ರೂಪಾಯಿ ಹಣ ಖರ್ಚಾಗಿದ್ದು ಈ ಎಲ್ಲಾ ಹಣವನ್ನು ಪೊಲೀಸರು ತಮ್ಮ ಜೇಬಿನಿಂದಲೇ ಹಾಕಿದ್ದು, ಬಿಲ್ ಸಂಗ್ರಹ ಮಾಡಿದ್ದಾರೆ. ಈಗ ಆ ಎಲ್ಲಾ ಬಿಲ್​ಗಳನ್ನು ಹಿರಿಯ ಅಧಿಕಾರಿಗಳಿಗೆ ಕಳುಹಿಸಿದ್ದು ಹಣವನ್ನು ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.

ತನಿಖೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಹಾರ್ಡ್ ಡಿಸ್ಕ್‌, ಪೆನ್ ಡ್ರೈವ್ ಖರೀದಿ

ಇನ್ನು ಪೊಲೀಸರು ತನಿಖೆಯ ಭಾಗವಾಗಿ ಹಲವು ಕಡೆಗಳಲ್ಲಿ ಮಹಜರು ಮಾಡಿದ್ದಾರೆ. ಅದರಲ್ಲೂ ಬೆಂಗಳೂರು ಅಲ್ಲದೆ ಚಿತ್ರದುರ್ಗದಲ್ಲೂ ಮಹಜರು ಮಾಡಿದ್ದಾರೆ. ‌ಕಿಡ್ನಾಪ್ ಮಾಡಿದ ಸ್ಥಳ, ಆರೋಪಿಗಳ ಮನೆ ಸೇರಿ ಹತ್ತಾರು ಕಡೆಗಳಲ್ಲಿ ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸಿದ್ದಾರೆ. ಹೀಗೆ ಆರೋಪಿಯನ್ನು ಕರೆದೊಯ್ಯವಾಗ ಊಟದ ಖರ್ಚಿನ ಜೊತೆಗೆ ದೈನಂದಿನ ಖರ್ಚನ್ನು ತನಿಖಾಧಿಕಾರಿಗಳೇ ಭರಿಸಿದ್ದಾರೆ. ಜೊತೆಗೆ ಸಂಗ್ರಹ ಮಾಡಿದ ಸಾಕ್ಷ್ಯಗಳನ್ನು ಹಾರ್ಡ್ ಡಿಸ್ಕ್ ಹಾಗೂ ಪೆನ್ ಡ್ರೈವ್​​ಗಳನ್ನು ಅಧಿಕ ಸಂಖ್ಯೆಯಲ್ಲಿ ಖರೀದಿ ಮಾಡಿದ್ದು, ದಾಖಲೆಗಳನ್ನು ಸುರಕ್ಷಿತವಾಗಿ ಇಟ್ಟಿದ್ದಾರೆ. ಇದುವರೆಗೂ ಲಕ್ಷಾಂತರ ರೂಪಾಯಿ ಖರ್ಚಾಗಿದ್ದು ಆ ಹಣವನ್ನು ತಮ್ಮ ಕೈಯಿಂದ ಅಧಿಕಾರಿಗಳು ಹಾಕಿದ್ದು ಈಗ ಅದನ್ನು ಮಂಜೂರು ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಬಿಲ್ ಸಮೇತ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದರ್ಶನ್ ಹೆಸರು ಹೇಳುತ್ತಿದ್ದಂತೆ ಹೇಗಿತ್ತು ನೋಡಿ ದುನಿಯಾ ವಿಜಯ್ ಪ್ರತಿಕ್ರಿಯೆ

ಸದ್ಯ ಈ ವಿಚಾರವನ್ನು ಪೊಲೀಸರು ರಿಮಾಂಡ್​​ನಲ್ಲಿ ಸಹ ಉಲ್ಲೇಖಿಸಿದ್ದಾರೆ. ಈ ಮೂಲಕ ಸತತ 60 ದಿನಗಳಿಗೂ ಅಧಿಕ ಅವಧಿಯಿಂದ ನಡೆಯುತ್ತಿರುವ ತನಿಖೆ ನಡುವೆ ಪೊಲೀಸರು ಮಾಡಿದ ವೆಚ್ಚದ ಸಂಪೂರ್ಣ ಮಾಹಿತಿ ಉಲ್ಲೇಖ ಮಾಡಿದ್ದು, ಇದರ ನಡುವೆ ತನಿಖೆ ಹೊಣೆ ಹೊತ್ತ ಪೊಲೀಸರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ