ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್​ಗೆ ಅಪಮಾನ: ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಎಫ್​ಐಆರ್​ ದಾಖಲು

| Updated By: ಗಂಗಾಧರ​ ಬ. ಸಾಬೋಜಿ

Updated on: Feb 11, 2023 | 9:27 PM

ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್​ಗೆ ಅಪಮಾನ ವಿಚಾರವಾಗಿ ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ.

ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್​ಗೆ ಅಪಮಾನ: ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಎಫ್​ಐಆರ್​ ದಾಖಲು
ಪ್ರಾತಿನಿಧಿಕ ಚಿತ್ರ
Image Credit source: abplive.com
Follow us on

ಬೆಂಗಳೂರು: ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್​ಗೆ (Ambedkar) ಅಪಮಾನ ವಿಚಾರವಾಗಿ ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR) ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣಾಧಿಕಾರಿ ದೂರು ಹಿನ್ನೆಲೆ ಎಫ್​ಐಆರ್​ ದಾಖಲಿಸಲಾಗಿದೆ. ಕಾರ್ಯಕ್ರಮ ಒಂದರಲ್ಲಿ ಅಂಬೇಡ್ಕರ್​ರ ಮೀಸಲಾತಿ ಬಗ್ಗೆ ಅವಹೇಳನ ಮಾಡಲಾಗಿದೆ ಎನ್ನಲಾಗಿದೆ. ಖಾಸಗಿ ಕಾಲೇಜು ಪ್ರಾಂಶುಪಾಲರು, ಡೀನ್, ಕಾರ್ಯಕ್ರಮ ಆಯೋಜಕರು, ವಿದ್ಯಾರ್ಥಿಗಳು, ಸ್ಕಿಟ್​ ಬರಹಗಾರರ ವಿರುದ್ಧ ಎಫ್​ಐಆರ್ ಹಾಕಲಾಗಿದೆ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಫೆಬ್ರವರಿ 8ರಂದು ಕಾರ್ಯಕ್ರಮ ನಡೆದಿತ್ತು.

ಕೆರೆ ಆವರಣದಲ್ಲಿ ಅಕ್ರಮ ಕಾಮಗಾರಿ ಆರೋಪ‌: ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ತಾಪ್ತಿಯ ಮಲ್ಲತ್ತಹಳ್ಳಿ ಕೆರೆ ಆವರಣದಲ್ಲಿ ಅಕ್ರಮ ಕಾಮಗಾರಿ ಆರೋಪಿಸಿ ಹೈಕೋರ್ಟ್​ಗೆ ಗೀತಾ ಮಿಶ್ರಾ ಎಂಬುವರಿಂದ ಅರ್ಜಿ ಸಲ್ಲಿಸಲಾಗಿದೆ. ಬಿಬಿಎಂಪಿ ಅಧಿಕಾರಿಗಳು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮನವಿ ಮಾಡಲಾಗಿದೆ. ಕೆರೆಗಳ‌ ಆವರಣದಲ್ಲಿ ಕಾಮಗಾರಿ ಕೈಗೊಳ್ಳದಂತೆ ನಿರ್ಬಂಧವಿದೆ‌. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸಿ ಕಾಂಕ್ರೀಟ್ ಕಾಮಗಾರಿ ಮಾಡಲಾಗುತ್ತಿದೆ. ಬಿಜೆಪಿ ಪಕ್ಷದಿಂದ ಶಿವರಾತ್ರಿ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದ್ದು, ಕೆರೆಗೆ ಧಕ್ಕೆ ಉಂಟುಮಾಡಿದ್ದಾರೆಂದು ಆರೋಪಿಸಲಾಗಿದೆ. ಪಿಐಎಲ್ ತುರ್ತು ವಿಚಾರಣೆಗೆ ವಕೀಲ ಜಿ.ಆರ್.ಮೋಹನ್ ಅರ್ಜಿ ನೀಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಲಂಚ ಪಡೆಯುವಾಗ ಸಿಬಿಐ ಬಲೆಗೆ ಬಿದ್ದ ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರಿಗಳು

ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮತ್ತೆ 8 ಸಹಶಿಕ್ಷಕರ ಬಂಧನ

ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮೀಷನ್ ವಿಚಾರ ಸೇರಿದಂತೆ ವಿವಿಧ ಭ್ರಷ್ಟಾಚಾರ ಆರೋಪ ಇಟ್ಟುಕೊಂಡು ಮುಗಿಬಿದ್ದ ಕಾಂಗ್ರೆಸ್ ಗೆ ಎದುರೇಟು ನೀಡಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿತ್ತು. ಇದರ ಭಾಗವಾಗಿ ಶಿಕ್ಷಕರ ನೇಮಕಾತಿ (Recruitment of Teachers) ಬಗ್ಗೆ ಬಿಜೆಪಿ ಕೆದಕಿದೆ. ಹೀಗೆ ಕೆದಕುವಾಗ ಹೊರಬಿದ್ದಿದ್ದೇ 2012-15ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ. ಸದ್ಯ ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಇಂದು ಮತ್ತೆ ಎಂಟು ಮಂದಿ ಸಹಶಿಕ್ಷಕರನ್ನು ಬಂಧಿಸಿದ್ದಾರೆ. ಈವರೆಗೆ ಒಟ್ಟು 69 ಆರೋಪಿತ ಶಿಕ್ಷಕರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ: ಅತ್ಯಾಚಾರಕ್ಕೆ ಯತ್ನ ಆರೋಪ, ಅವಳಿ ಸಹೋದರರ ತಲೆ ಬೋಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

2012-13ನೇ ಸಾಲಿನಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ನಾಲ್ವರು ಸೆರೆಯಾಗಿದ್ದಾರೆ. ಬಾಗಲಕೋಟಿ ಜಿಲ್ಲೆಯ ಮದನಬಾವಿ ಶಾಲೆಯ ಶಿಕ್ಷಕ ಶ್ರೀಕಾಂತ್‌, ವಿಜಯನಗರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕೊಲ್ಹಾರ ಪ್ರೌಢಶಾಲೆಯ ಸಹಶಿಕ್ಷಕನಾದ ನಾಯಕ ಪ್ರಕಾಶ್ ರತ್ನು, ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಮರೂರು ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಮಹಬೂಬ್ ಪಾಷ, ಬಿ.ಆರ್, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಳ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಹಶಿಕ್ಷಕ ಸುಜಾತ ಭಂಡಾರಿ ಬಂಧಿತರಾಗಿದ್ದಾರೆ.

ಮತ್ತಷ್ಟ ಕ್ರೆಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:20 pm, Sat, 11 February 23