ದೆಹಲಿಯಲ್ಲಿ ಅಗ್ನಿ ದುರಂತ: ಐವರು ಸಜೀವದಹನ, 7 ಜನರಿಗೆ ಗಂಭೀರ ಗಾಯ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಐವರು ಸಜೀವದಹನವಾಗಿರುವಂತಹ ಘಟನೆ ಪಿತಾಂಪುರಿಯಲ್ಲಿ ಮನೆಯೊಂದರಲ್ಲಿ ನಡೆದಿದೆ. 7 ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ.
ದೆಹಲಿ, ಜನವರಿ 18: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಅಗ್ನಿ (fire) ದುರಂತ ಸಂಭವಿಸಿದ್ದು, ಐವರು ಸಜೀವದಹನವಾಗಿರುವಂತಹ ಘಟನೆ ಪಿತಾಂಪುರಿಯಲ್ಲಿ ಮನೆಯೊಂದರಲ್ಲಿ ನಡೆದಿದೆ. 7 ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಹುಡುಕಾಟ ಮುಂದುವರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದು, ಆದರೆ ಕಟ್ಟಡದಲ್ಲಿ ಸಾಕಷ್ಟು ಹೊಗೆ ತುಂಬಿಕೊಂಡಿದೆ ಎನ್ನಲಾಗುತ್ತಿದೆ.
#WATCH | Delhi | Three people died in a fire that broke out at a house in Pitampura area this evening. A total of 8 fire tenders were rushed to the spot and fire was brought under control. Search continues. pic.twitter.com/KgdXyhLnbR
— ANI (@ANI) January 18, 2024
ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್ ಗರ್ಗ್ ಪ್ರಕಾರ, ಘಟನೆ ನಡೆದ ಸ್ಥಳದಿಂದ ಸುಮಾರು ರಾತ್ರಿ 8:07ರ ಸಮಯಕ್ಕೆ ಮನೆಗೆ ಬೆಂಕಿ ಬಿದ್ದಿರುವುದಾಗಿ ಕರೆ ಬಂದಿದೆ. ಬಳಿಕ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಭೇಟಿ ನೀಡುವಷ್ಟರಲ್ಲಿ ಮೂವರು ಸಾವನ್ನಪ್ಪಿದ್ದರು. ಸದ್ಯ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದ್ದು, ಶೋಧ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
Published On - 10:21 pm, Thu, 18 January 24