ದೆಹಲಿಯಲ್ಲಿ ಅಗ್ನಿ ದುರಂತ: ಐವರು ಸಜೀವದಹನ, 7 ಜನರಿಗೆ ಗಂಭೀರ ಗಾಯ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಐವರು ಸಜೀವದಹನವಾಗಿರುವಂತಹ ಘಟನೆ ಪಿತಾಂಪುರಿಯಲ್ಲಿ ಮನೆಯೊಂದರಲ್ಲಿ ನಡೆದಿದೆ. 7 ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ.

ದೆಹಲಿಯಲ್ಲಿ ಅಗ್ನಿ ದುರಂತ: ಐವರು ಸಜೀವದಹನ, 7 ಜನರಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ

Updated on: Jan 18, 2024 | 10:36 PM

ದೆಹಲಿ, ಜನವರಿ 18: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಅಗ್ನಿ (fire) ದುರಂತ ಸಂಭವಿಸಿದ್ದು, ಐವರು ಸಜೀವದಹನವಾಗಿರುವಂತಹ ಘಟನೆ ಪಿತಾಂಪುರಿಯಲ್ಲಿ ಮನೆಯೊಂದರಲ್ಲಿ ನಡೆದಿದೆ. 7 ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಹುಡುಕಾಟ ಮುಂದುವರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದು, ಆದರೆ ಕಟ್ಟಡದಲ್ಲಿ ಸಾಕಷ್ಟು ಹೊಗೆ ತುಂಬಿಕೊಂಡಿದೆ ಎನ್ನಲಾಗುತ್ತಿದೆ.

ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್​ ಗರ್ಗ್​ ಪ್ರಕಾರ, ಘಟನೆ ನಡೆದ ಸ್ಥಳದಿಂದ ಸುಮಾರು ರಾತ್ರಿ
8:07ರ ಸಮಯಕ್ಕೆ ಮನೆಗೆ ಬೆಂಕಿ ಬಿದ್ದಿರುವುದಾಗಿ ಕರೆ ಬಂದಿದೆ. ಬಳಿಕ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಭೇಟಿ ನೀಡುವಷ್ಟರಲ್ಲಿ ಮೂವರು ಸಾವನ್ನಪ್ಪಿದ್ದರು. ಸದ್ಯ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದ್ದು, ಶೋಧ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ.

Published On - 10:21 pm, Thu, 18 January 24

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us