AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ನಿಗೂಢ ಕೆಲಸಕ್ಕಾಗಿ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡ ಸೆರೆ

ಮಂಗಳೂರಿನಿಂದ ಬೆಂಗಳೂರಿಗೆ ನಿಗೂಢ ಕೆಲಸಕ್ಕಾಗಿ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಧರ್ಮಸ್ಥಳ ಪೊಲೀಸರು ಯುವಕರನ್ನು ತಪಾಸಣೆ ನಡೆಸಿದಾಗ 40ಕ್ಕೂ ಹೆಚ್ಚು ಅಕ್ರಮ ಸಿಮ್​ಗಳು ಪತ್ತೆಯಾಗಿದೆ. ಹೀಗಾಗಿ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರಿಗೆ ಮತ್ತಷ್ಟು ಮಾಹಿತಿಗಳು ತಿಳಿದುಬಂದಿದೆ. ಹಾಗಾದರೆ ಬೆಂಗಳೂರಿನಲ್ಲಿರುವ ಆಗಂತುಕರ ಕೈ ಸೇರುತ್ತಿತ್ತಾ ಈ ಸಿಮ್? ಈ ಬಗ್ಗೆ ವರದಿ ಇಲ್ಲಿದೆ ನೋಡಿ.

ಮಂಗಳೂರು: ನಿಗೂಢ ಕೆಲಸಕ್ಕಾಗಿ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡ ಸೆರೆ
ಬೆಂಗಳೂರಿಗೆ ಅಕ್ರಮ ಸಿಮ್ ಸಾಗಿಸುತ್ತಿದ್ದ ಐವರ ಬಂಧನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Feb 04, 2024 | 12:03 PM

Share

ಮಂಗಳೂರು, ಫೆ.4: ನಿಗೂಢ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ (Bengaluru) ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ (Dharmasthala) ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ.

ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರ ಬಲೆಗೆ ಬಿದಿದೆ. ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್​ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22) ಮೊಹಮ್ಮದ್ ಸಾಧಿಕ್ (27) ಬಂಧಿತ ಆರೋಪಿಯಾಗಿದ್ದು, ಪ್ರಕರಣದಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೂ ಸಿಲುಕಿದ್ದಾನೆ.

ಇದನ್ನೂ ಓದಿ: ಪಂಜಾಬ್: ಮೂಸೆವಾಲಾ ಹಂತಕರಿಗೆ ಸಹಾಯ ಮಾಡಿದ್ದ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ಆಪ್ತನ ಬಂಧನ

ಆರೋಪಿ ಅಕ್ಬರ್​ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್​ ಖರೀದಿ ಮಾಡಿದ್ದ. ಎರಡು ವರ್ಷಗಳ ಕಾಲ ದುಬೈನಲ್ಲಿದ್ದ ಈತ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದ. ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿರುವ ಆಗಂತುಕರ ಕೈ ಸೇರುತ್ತಿತ್ತಾ ನಕಲಿ ಸಿಮ್

ಮಂಗಳೂರಿನಿಂದ ಬೆಂಗಳೂರಿಗೆ ಆರೋಪಿಗಳು ಸಾಗಿಸುತ್ತಿದ್ದ ನಿಕಲಿ ಸಿಮ್​ಗಳು ಬೆಂಗಳೂರಿನಲ್ಲಿರುವ ಆಗಂತುಕರ ಕೈ ಸೇರುತ್ತಿತ್ತಾ ಎನ್ನುವ ಶಂಕೆ ವ್ಯಕ್ತವಾಗಿದೆ. ಅಕ್ಬರ್ ಆಲಿ ಮೊದಲಿನಿಂದಲೂ ದುಬೈನಲ್ಲಿ ಇದ್ದುಕೊಂಡೇ ಸಿಮ್ ಕಾರ್ಡ್ ಸಂಗ್ರಹಿಸುತ್ತಿದ್ದನು. ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನ ಮೂಲಕ ಸಿಮ್​ಗಳನ್ನು ಕಲೆಕ್ಟ್​ ಮಾಡುತ್ತಿದ್ದನು.

ಮೊಹಮ್ಮದ್ ಮುಸ್ತಫಾ ತನ್ನ ಸ್ನೇಹಿತರಾಗಿರುವ ರಮೀಝ್ ಮತ್ತು ಮಹಮ್ಮದ್ ಸಾಧಿಕ್​ಗೆ ಸಿಮ್​ಗಳ ವ್ಯವಸ್ಥೆಗೆ ಸೂಚನೆ ನೀಡುತ್ತಿದ್ದನು. ಎಷ್ಟು ಸಿಮ್ ಕಾರ್ಡ್ ಬೇಕು ಅಷ್ಟುನ್ನು ತಮ್ಮ ಅತ್ಮಿಯರಿಂದ ಕಮಿಷನ್ ಕೊಡಿಸಿ ಕಲೆಕ್ಟ್ ಮಾಡಿ ಮುಸ್ತಫಾನಿಗೆ ನೀಡುತ್ತಿದ್ದರು. ನಂತರ ಅಕ್ಬರ್ ಅಲಿ ಹೇಳಿದಂತೆ ಸಿಮ್ ಕಾರ್ಡ್ ಮಹಮ್ಮದ್ ಮುಸ್ತಫಾ ಪಡೆದುಕೊಂಡು ಬೆಂಗಳೂರು ವ್ಯಕ್ತಿಗಳಿಗೆ ಖಾಸಗಿ ಬಸ್ ಮೂಲಕ ಕಳುಹಿಸುವ ಕೆಲಸ ಮಾಡುತ್ತಿದ್ದ ಎಂಬ ವಿಚಾರ ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್