Bengaluru News: ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರ ಸೆರೆ

ಬೆಂಗಳೂರು ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ಐದು ಮಂದಿಯನ್ನು ಸೆರೆ ಹಿಡಿದಿದ್ದಾರೆ. ಕೆಂಗೇರಿ, ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕೆಂಗೇರಿ 4, ಬ್ಯಾಟರಾಯನಪುರ ಠಾಣೆಯಲ್ಲಿ 1 ಕೇಸ್ ದಾಖಲು ಮಾಡಲಾಗಿದೆ.

Bengaluru News: ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರ ಸೆರೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Jul 25, 2021 | 8:58 PM

ಬೆಂಗಳೂರು: ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ಐದು ಮಂದಿಯನ್ನು ಸೆರೆ ಹಿಡಿದಿದ್ದಾರೆ. ಕೆಂಗೇರಿ, ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕೆಂಗೇರಿ 4, ಬ್ಯಾಟರಾಯನಪುರ ಠಾಣೆಯಲ್ಲಿ 1 ಕೇಸ್ ದಾಖಲು ಮಾಡಲಾಗಿದೆ.

ಯುವಜನರು ದ್ವಿಚಕ್ರ ವಾಹನಗಳನ್ನು ಹಿಡಿದು ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುವುದು, ವ್ಹೀಲಿಂಗ್ ನಡೆಸುವುದು ಕೆಲವೆಡೆ ಕಂಡುಬಂದಿತ್ತು. ವಾರಾಂತ್ಯಗಳಲ್ಲಿ, ಫ್ಲೈ ಓವರ್ ರಸ್ತೆ ಮೇಲೆ, ಅಷ್ಟೇ ಅಲ್ಲದೆ ಸಹಜ ಟ್ರಾಫಿಕ್ ಇರುವ ಸಂದರ್ಭದಲ್ಲಿ ನಗರದ ರಸ್ತೆಗಳಲ್ಲೂ ಹೀಗೆ ಕೆಲ ಯುವಕರು ಬೇಜಾವಾಬ್ದಾರಿಯುತ ನಡವಳಿಕೆ ತೋರುತ್ತಿದ್ದರು. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪೊಲೀಸರು ಮುಂದಾಗಿದ್ದಾರೆ. ಇದೀಗ ಐದು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ದಂಪತಿ ದುರ್ಮರಣ ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ದಂಪತಿ ದುರ್ಮರಣವನ್ನಪ್ಪಿದ ಘಟನೆ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಭದ್ರಪ್ಪ ಲೇಔಟ್​ನಲ್ಲಿ ಈ ಅಪಘಾತ ಸಂಭವಿಸಿದೆ. ಬಿಡದಿ ಮೂಲದ 40 ವರ್ಷ ವಯಸ್ಸಿನ ಹರೀಶ್ ಹಾಗೂ 30 ವರ್ಷದ ಮಂಗಳಾ ಮೃತರು. ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ದಂಪತಿ ತಳ್ಳುವಗಾಡಿಯಲ್ಲಿ ಫ್ಯಾನ್ಸಿ ವಸ್ತುಗಳ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ಹರೀಶ್ ಅಂಗವಿಕಲರಾಗಿದ್ದಾರೆ. ರೈಲ್ವೇ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ರೈಲು ಬರುವುದು ಗಮನಿಸದೆ ಟ್ರಾಕ್ ದಾಟಿರುವುದರಿಂದ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಎರಡು ಮೃತದೇಹಗಳನ್ನು ಬೋರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ದಂಪತಿ ದುರ್ಮರಣ; ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್

Landslide in Himachal Pradesh ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ, ಮುರಿದು ಬಿತ್ತು ಸೇತುವೆ: 9 ಪ್ರವಾಸಿಗರು ಸಾವು

(Five persons Arrested for Wheeling Dangerous Driving in Bangalore)

Published On - 8:38 pm, Sun, 25 July 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ