AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗಿ ಭದ್ರತೆಯಿದ್ದ ತಿಹಾರ್ ಜೈಲಿನೊಳಗೆ ಎಂಟೇ ದಿನದಲ್ಲಿ ಐವರು ಕೈದಿಗಳ ಸಾವು; ತನಿಖೆಗೆ ಆದೇಶ

ಶುಕ್ರವಾರವೂ ತಿಹಾರ್ ಜೈಲು ಸಂಖ್ಯೆ 3ರಲ್ಲಿ ಕೈದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಆ ಕೈದಿ ತನ್ನ ಸೆಲ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಬಿಗಿ ಭದ್ರತೆಯಿದ್ದ ತಿಹಾರ್ ಜೈಲಿನೊಳಗೆ ಎಂಟೇ ದಿನದಲ್ಲಿ ಐವರು ಕೈದಿಗಳ ಸಾವು; ತನಿಖೆಗೆ ಆದೇಶ
ತಿಹಾರ್ ಜೈಲು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 25, 2021 | 6:28 PM

ನವದೆಹಲಿ: ಕಳೆದ ಎಂಟು ದಿನಗಳಲ್ಲಿ ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿನಲ್ಲಿ ಐವರು ಕೈದಿಗಳು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಲ್ಲಾ ಸಾವುಗಳು ಸ್ವಾಭಾವಿಕ ಕಾರಣಗಳಿಂದ ಕಂಡುಬಂದರೂ ಸಹ ಮುನ್ನೆಚ್ಚರಿಕಾ ಕ್ರಮವಾಗಿ CrPCಯ ಸೆಕ್ಷನ್ 176ರ ಅಡಿಯಲ್ಲಿ ಮ್ಯಾಜಿಸ್ಟ್ರಿಯಲ್ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಶುಕ್ರವಾರವೂ ತಿಹಾರ್ ಜೈಲು ಸಂಖ್ಯೆ 3ರಲ್ಲಿ ಕೈದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಆ ಕೈದಿ ತನ್ನ ಸೆಲ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆತ ಸತ್ತಿದ್ದಾನೆ ಎಂದು ಘೋಷಿಸಿದರು ಎಂದು ಅಧಿಕಾರಿ ಹೇಳಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಮೃತ ಕೈದಿಯನ್ನು ವಿಕ್ರಮ್ ಅಲಿಯಾಸ್ ವಿಕ್ಕಿ ಎಂದು ಗುರುತಿಸಲಾಗಿದೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಮಹಾನಿರ್ದೇಶಕ ಸಂದೀಪ್ ಗೋಯೆಲ್, ಕೈದಿಗಳ ಮೇಲೆ ಯಾವುದೇ ಹಲ್ಲೆಗಳನ್ನು ಮಾಡಲಾಗಿಲ್ಲ. ಅವರಿಗೆ ಎಲ್ಲ ರೀತಿಯ ಭದ್ರತೆಯನ್ನು ನೀಡಲಾಗಿತ್ತು. ಹಳೆಯ ರೋಗದ ಕಾರಣದಿಂದ ಆ ಕೈದಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್ ಜೈಲಿನಲ್ಲಿರುವ ಕೈದಿಯ ಬೆನ್ನಮೇಲೆ ಭಯೋತ್ಪಾದಕ ಎಂದು ಬರೆದು ಚಿತ್ರಹಿಂಸೆ; ತನಿಖೆಗೆ ಆದೇಶ

ಹೆಂಡತಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು!

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ