ನವದೆಹಲಿ: ಕಳೆದ ಎಂಟು ದಿನಗಳಲ್ಲಿ ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿನಲ್ಲಿ ಐವರು ಕೈದಿಗಳು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಲ್ಲಾ ಸಾವುಗಳು ಸ್ವಾಭಾವಿಕ ಕಾರಣಗಳಿಂದ ಕಂಡುಬಂದರೂ ಸಹ ಮುನ್ನೆಚ್ಚರಿಕಾ ಕ್ರಮವಾಗಿ CrPCಯ ಸೆಕ್ಷನ್ 176ರ ಅಡಿಯಲ್ಲಿ ಮ್ಯಾಜಿಸ್ಟ್ರಿಯಲ್ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಶುಕ್ರವಾರವೂ ತಿಹಾರ್ ಜೈಲು ಸಂಖ್ಯೆ 3ರಲ್ಲಿ ಕೈದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಆ ಕೈದಿ ತನ್ನ ಸೆಲ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆತ ಸತ್ತಿದ್ದಾನೆ ಎಂದು ಘೋಷಿಸಿದರು ಎಂದು ಅಧಿಕಾರಿ ಹೇಳಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತ ಕೈದಿಯನ್ನು ವಿಕ್ರಮ್ ಅಲಿಯಾಸ್ ವಿಕ್ಕಿ ಎಂದು ಗುರುತಿಸಲಾಗಿದೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಮಹಾನಿರ್ದೇಶಕ ಸಂದೀಪ್ ಗೋಯೆಲ್, ಕೈದಿಗಳ ಮೇಲೆ ಯಾವುದೇ ಹಲ್ಲೆಗಳನ್ನು ಮಾಡಲಾಗಿಲ್ಲ. ಅವರಿಗೆ ಎಲ್ಲ ರೀತಿಯ ಭದ್ರತೆಯನ್ನು ನೀಡಲಾಗಿತ್ತು. ಹಳೆಯ ರೋಗದ ಕಾರಣದಿಂದ ಆ ಕೈದಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪಂಜಾಬ್ ಜೈಲಿನಲ್ಲಿರುವ ಕೈದಿಯ ಬೆನ್ನಮೇಲೆ ಭಯೋತ್ಪಾದಕ ಎಂದು ಬರೆದು ಚಿತ್ರಹಿಂಸೆ; ತನಿಖೆಗೆ ಆದೇಶ
ಹೆಂಡತಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು!