ಮಹಾರಾಷ್ಟ್ರ: ಕೇವಲ 300 ರೂ.ಗಾಗಿ ಅಪ್ರಾಪ್ತ ಬಾಲಕನನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ

|

Updated on: Nov 24, 2023 | 2:36 PM

ಕಳ್ಳತನದ ಆರೋಪ ಹೊರಿಸಿ ಅಪ್ರಾಪ್ತ ಬಾಲಕನನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕನ ವಿಡಿಯೋ ವೈರಲ್ ಆದ ನಂತರ ಇದೀಗ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಪ್ರಕರಣ ಥಾಣೆಯ ಕಲ್ವಾ ಪ್ರದೇಶದಲ್ಲಿ ನಡೆದಿದೆ. 17 ವರ್ಷದ ಅಪ್ರಾಪ್ತ ಬಾಲಕನನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದ ಕೂಡಲೇ ಸಂತ್ರಸ್ತ ಅಪ್ರಾಪ್ತ ಬಾಲಕ ಕಲ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾರಾಷ್ಟ್ರ: ಕೇವಲ 300 ರೂ.ಗಾಗಿ ಅಪ್ರಾಪ್ತ ಬಾಲಕನನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ
ಅಪರಾಧ
Image Credit source: ABP Live
Follow us on

ಕಳ್ಳತನದ ಆರೋಪ ಹೊರಿಸಿ ಅಪ್ರಾಪ್ತ ಬಾಲಕನನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಘಟನೆ ಮಹಾರಾಷ್ಟ್ರ(Maharashtra)ದ ಥಾಣೆಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕನ ವಿಡಿಯೋ ವೈರಲ್ ಆದ ನಂತರ ಇದೀಗ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುತ್ತಿದ್ದಾರೆ.
ಪ್ರಕರಣ ಥಾಣೆಯ ಕಲ್ವಾ ಪ್ರದೇಶದಲ್ಲಿ ನಡೆದಿದೆ. 17 ವರ್ಷದ ಅಪ್ರಾಪ್ತ ಬಾಲಕನನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದ ಕೂಡಲೇ ಸಂತ್ರಸ್ತ ಅಪ್ರಾಪ್ತ ಬಾಲಕ ಕಲ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಾಲಕನನ್ನು ಬಟ್ಟೆ ಬಿಚ್ಚಿ ಥಳಿಸಿದ ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಕಲ್ವಾ ಪೊಲೀಸರು ಬಂಧಿಸಿದ್ದು, ಇತರ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮೊದಲು ಅವರು ಅಪ್ರಾಪ್ತರನ್ನು ತೀವ್ರವಾಗಿ ಥಳಿಸಿದ್ದಾರೆ ಅದಕ್ಕೂ ತೃಪ್ತಿಯಾಗದೆ ಬಟ್ಟೆಯನ್ನು ಬಲವಂತವಾಗಿ ತೆಗೆಸಿ ಮೆರವಣಿಗೆ ನಡೆಸಿದ್ದಾರೆ.
ನವೆಂಬರ್ 21 ರಂದು ಈ ಘಟನೆ ನಡೆದಿದೆ. ಘಟನೆಯ ನಂತರವಷ್ಟೇ ಅಪ್ರಾಪ್ತ ಬಾಲಕ ಕಲ್ವಾ ಪೊಲೀಸ್ ಠಾಣೆಯಲ್ಲಿ ಘಟನೆಯ ಬಗ್ಗೆ ದೂರು ನೀಡಿದ್ದಾನೆ.

ಈ ಸಂಬಂಧ ಕಲ್ವಾ ಪೊಲೀಸರಿಂದ ಬಂದ ಮಾಹಿತಿಯಂತೆ ತೌಸಿಫ್ ಖಾನ್ಬಂಡೆ ಮತ್ತು ಸಮೀಲ್ ಖಾನ್ಬಂಡೆ ಎಂಬಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಲಕ ತಮ್ಮ ಹಣ, ಇಯರ್ ಫೋನ್​ ಕದ್ದಿದ್ದಾನೆ ಎಂದು ಆರೋಪಿಸಿ ಥಳಿಸಲಾಗಿದೆ.

ಮತ್ತಷ್ಟು ಓದಿ: ‘ತಪ್ಪಿತಸ್ಥರಿಗೆ ಘೋರ ಶಿಕ್ಷೆಯಾಗಲಿ’; ಮಹಿಳೆಯರ ಬೆತ್ತಲು ಮೆರವಣಿಗೆ ಮಾಡಿದವರ ವಿರುದ್ಧ ಸಿಡಿದೆದ್ದ ಬಾಲಿವುಡ್ ಮಂದಿ

ಕಲ್ವಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಕನ್ಹಯ್ಯಾ ಥೋರಟ್ ಮಾತನಾಡಿ, ಘಟನೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ತಕ್ಷಣ ಗಮನಹರಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ, ಆದರೆ ಇತರ ಆರೋಪಿಗಳ ಬಂಧನ ಇನ್ನೂ ಬಾಕಿಯಿದೆ ಎಂದಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:36 pm, Fri, 24 November 23