Crime News; ಬಲವಂತವಾಗಿ ಮತಾಂತರಕ್ಕೆ ಪ್ರಯತ್ನ, ಯುವತಿಯನ್ನು ನಾಲ್ಕನೇ ಮಹಡಿಯಿಂದ ತಳ್ಳಿದ ಯುವಕ

ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಯುವತಿಯ ಮನೆಯವರು ಆರೋಪಿಸಿದ್ದಾರೆ. ಈ ಕಾರಣಕ್ಕೆ ಯುವತಿಯನ್ನು ಕಟ್ಟಡದ ಮೇಲೆ ಕರೆದುಕೊಂಡು ಹೋಗಿ ನಾಲ್ಕನೇ ಮಹಡಿಯಿಂದ ತಳ್ಳಿ ಸಾಯಿಸಿದ್ದಾನೆ.

Crime News; ಬಲವಂತವಾಗಿ ಮತಾಂತರಕ್ಕೆ ಪ್ರಯತ್ನ, ಯುವತಿಯನ್ನು ನಾಲ್ಕನೇ ಮಹಡಿಯಿಂದ ತಳ್ಳಿದ ಯುವಕ
ಸಾಂದರ್ಭಿಕ ಚಿತ್ರ
Updated By: ಅಕ್ಷಯ್​ ಪಲ್ಲಮಜಲು​​

Updated on: Nov 18, 2022 | 4:42 PM

ಲಕ್ನೋ: 19 ವರ್ಷದ ಯುವತಿಯನ್ನು ಕೊಂದ ಆರೋಪಿ ಸುಫಿಯಾನ್ ಎಂಬಾತನನ್ನು ಶುಕ್ರವಾರ ಪೊಲೀಸರು ಎನ್‌ಕೌಂಟರ್‌ ಮಾಡುವ ಮೂಲಕ ಬಂಧಿಸಲಾಗಿದ್ದು, ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಯುವತಿಯ ಮನೆಯವರು ಆರೋಪಿಸಿದ್ದಾರೆ. ಈ ಕಾರಣಕ್ಕೆ ಯುವತಿಯನ್ನು ಕಟ್ಟಡದ ಮೇಲೆ ಕರೆದುಕೊಂಡು ಹೋಗಿ ನಾಲ್ಕನೇ ಮಹಡಿಯಿಂದ ತಳ್ಳಿ ಸಾಯಿಸಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ ಶುಕ್ರವಾರ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸುಫಿಯಾನ್‌ನನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಕಮಿಷನರ್ (ಜೆಸಿಪಿ) ಪಿಯೂಷ್ ಮೊರ್ಡಿಯಾ ಪಿಟಿಐಗೆ ತಿಳಿಸಿದ್ದಾರೆ. ಸುಫಿಯಾನ್‌ನನ್ನು ಮಧ್ಯಾಹ್ನ 1 ಗಂಟೆ ಸುಮಾರಿಗೆ ಎನ್‌ಕೌಂಟರ್‌ನಲ್ಲಿ ಬಂಧಿಸಲಾಯಿತು. ಆರೋಪಿಯ ಬಲ ಕಾಲಿಗೆ ಗುಂಡು ತಗುಲಿದೆ. ಆರೋಪಿಯನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ (ಕೆಜಿಎಂಯು) ದಾಖಲಿಸಲಾಗಿದೆ. ಸುಫಿಯಾನ್‌ನ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿತ್ತು ಎಂದು ದುಬಗ್ಗಾ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸುಖವೀರ್ ಸಿಂಗ್ ಭದೌರಿಯಾ ಪಿಟಿಐಗೆ ತಿಳಿಸಿದ್ದಾರೆ.

20ರ ಹರೆಯದ ಆರೋಪಿ ಸುಫಿಯಾನ್ ತನ್ನನ್ನು ಇಸ್ಲಾಂಗೆ ಮತಾಂತರಗೊಳಿಸುವಂತೆ ಒತ್ತಾಯಿಸುತ್ತಿದ್ದ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ಜೊತೆಗೆ ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆಯ (ಅಥವಾ ಲವ್ ಜಿಹಾದ್ ಕಾನೂನು ಎಂದು ಕರೆಯಲ್ಪಡುವ) ಸಂಬಂಧಿತ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ:  ಕಾಡಿನಲ್ಲಿ ಯುವತಿಯ ಮೇಲೆ ಅತ್ಯಾಚಾರ, ಸ್ನೇಹಿತೆಯ ಸಹಾಯದಿಂದ ಬದುಕಿಳಿದ ಯುವತಿ

ಬಾಲಕಿ ಮತ್ತು ಆರೋಪಿ ನೆರೆಹೊರೆಯವರಾಗಿದ್ದು, ಆಕೆಯೊಂದಿಗೆ ಸ್ನೇಹ ಬೆಳೆಸಲು ಪ್ರಯತ್ನಿಸುತ್ತಿದ್ದ, ಆದರೆ ಯುವತಿಯ ಕುಟುಂಬದವರು ಈ ಸ್ನೇಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಪೊಲೀಸರ ಪ್ರಕಾರ, ಸೂಫಿಯಾನ್ ಯುವತಿಗೆ ಮೊಬೈಲ್ ಫೋನ್ ನೀಡಿದ್ದಾನೆ, ಮತ್ತು ಈ ವಿಷಯ ಆಕೆಯ ಕುಟುಂಬಕ್ಕೆ ತಿಳಿದಾಗ, ಯುವತಿಯ ಮನೆಯವರು ಈ ಬಗ್ಗೆ ಮಾತನಾಡಲು ಅವನ ಮನೆಗೆ ಬಂದಿದ್ದರು.

ಎರಡು ಕುಟುಂಬಗಳು ಮಾತನಾಡುತ್ತಿದ್ದಾಗ ಆರೋಪಿಯು ಬಾಲಕಿಯನ್ನು ಕಟ್ಟಡದ ನಾಲ್ಕನೇ ಮಹಡಿಗೆ ಕರೆದೊಯ್ದು ಅಲ್ಲಿಂದ ಕೆಳಗೆ ತಳ್ಳಿದ್ದಾನೆ ಎಂದು ಜಂಟಿ ಆಯುಕ್ತರು ತಿಳಿಸಿದ್ದಾರೆ. ಭಾರೀ ಸದ್ದು ಕೇಳಿದ ಕುಟುಂಬಸ್ಥರು ಹೊರಗೆ ಧಾವಿಸಿ ನೋಡಿದಾಗ ರಕ್ತಸಿಕ್ತ ಮಹಿಳೆ ನೆಲದ ಮೇಲೆ ಬಿದ್ದಿರುವುದು ಕಂಡು ಬಂದಿದೆ. ಸ್ಥಳದಿಂದ ಆರೋಪಿ ಪರಾರಿಯಾಗಿದ್ದಾನೆ. ನೆರೆಹೊರೆಯವರ ಸಹಾಯದಿಂದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದ್ದಾಳೆ. ಕುಟುಂಬ ಸದಸ್ಯರ ಪ್ರಕಾರ, ಹುಡುಗಿ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.