ರಾಂಚಿ ಮಾರ್ಚ್ 02: ಶುಕ್ರವಾರ ರಾತ್ರಿ ಜಾರ್ಖಂಡ್‌ನ (Jharkhand) ದುಮ್ಕಾ (Dumka) ಜಿಲ್ಲೆಯಲ್ಲಿ ಸ್ಪೇನ್‌ನ (Spain) ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹನ್ಸ್ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಮಹತ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಪ್ರವಾಸಿ ದಂಪತಿ ತಾತ್ಕಾಲಿಕ ಟೆಂಟ್‌ನಲ್ಲಿ ರಾತ್ರಿ ಕಳೆಯುತ್ತಿದ್ದರು ಎಂದು ಪಿಟಿಐ ವರದಿ ಮಾಡಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಂತರ ನೀಡಲಾಗುವುದು ಎಂದು ಜಾರ್ಮುಂಡಿ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಈ ದಂಪತಿ ಬಾಂಗ್ಲಾದೇಶದಿಂದ ದ್ವಿಚಕ್ರ ವಾಹನದಲ್ಲಿ ಆಗಮಿಸಿ ಬಿಹಾರ ಮೂಲಕ ನೇಪಾಳಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಏಳರಿಂದ ಎಂಟು ಸ್ಥಳೀಯ ಯುವಕರು ಅಪರಾಧದಲ್ಲಿ ಭಾಗಿಯಾಗಿದ್ದಾರೆ.ಅವರಲ್ಲಿ ಮೂವರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೆಸರು ಹೇಳಲು ಬಯಸದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಸುದ್ದಿಸಂಸ್ಥೆ ವರದಿ ಮಾಡಿದೆ.
ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದಿಲ್ಲ. ಆದರೆ ಕಾನೂನಿನ ಪ್ರಕಾರ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಬನ್ನಾ ಗುಪ್ತಾ ಹೇಳಿದ್ದಾರೆ. “ಈ ಘಟನೆಯ ಎಲ್ಲಾ ಸಂಪೂರ್ಣ ಸತ್ಯಗಳು ನನಗೆ ತಿಳಿದಿಲ್ಲ ಆದರೆ ನಮ್ಮ ಸಹೋದರಿ, ಭಾರತೀಯ ಅಥವಾ ವಿದೇಶಿಯರ ವಿರುದ್ಧ ಅಪರಾಧ ಎಸಗುವ ಎಲ್ಲಾ ದುಷ್ಟರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ” ಎಂದು ಸುದ್ದಿಗಾರರರೊಂದಿಗೆ ಮಾತನಾಡಿದ ಗುಪ್ತಾ ಹೇಳಿದ್ದಾರೆ.
ಇದನ್ನೂ ಓದಿ: ಡ್ರ್ಯಾಗರ್ನಿಂದ ಇರಿದು ರೌಡಿ ಶೀಟರ್ ಕೊಲೆ; ಹಳೆ ಕೇಸ್ ರಾಜಿ ಮಾಡಿಕೊಳ್ಳಲು ಹೋದವ ಸೇರಿದ ಮಸಣ
ಬಿಜೆಪಿ ಶಾಸಕ ಅನಂತ್ ಓಜಾ ಈ ಘಟನೆಯನ್ನು “ರಾಜ್ಯದ ಮೇಲಿನ ಕಳಂಕ” ಎಂದು ಕರೆದಿದ್ದು ಇದು ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಗೆ ಸಾಕ್ಷಿ ಎಂದು ಹೇಳಿದ್ದಾರೆ. “ಇದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ತೋರಿಸುತ್ತದೆ, ವಿದೇಶಿಯರೂ ಸಹ ಇಲ್ಲಿ ಸುರಕ್ಷಿತವಾಗಿಲ್ಲ. ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಬೇಕು.ಸರ್ಕಾರ ಇದರ ಬಗ್ಗೆ ಗಮನಹರಿಸಿ ಇಂತಹ ಅರಾಜಕತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಓಜಾ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನಲ್ಲಿದ್ದ ದಿನದಲ್ಲಿ ಆಪಾದಿತ ಅಪರಾಧ ಸಂಭವಿಸಿದ್ದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದರು.
ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ