ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ಗಿಲ್ಲ ಜಾಮೀನು ಭಾಗ್ಯ, ಹೊಸ ವರ್ಷಾಚರಣೆಗೆ ಜೈಲೆ ಗಟ್ಟಿ..
ವಿಚಾರಣೆ ನಡೆಸಿದ ನ್ಯಾಯಾಲಯ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು 2021ರ ಜನವರಿ ಮೊದಲ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೀಗಾಗಿ ಸಂಪತ್ ರಾಜ್ ಹೊಸ ವರ್ಷಾಚರಣೆಯನ್ನು ಜೈಲಿನಲ್ಲಿಯೆ ಆಚರಿಸಬೇಕಾಗಿದೆ.
ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿ ತಿಂಗಳಿಗೆ ಮುಂದೂಡಲಾಗಿದೆ.
ಗಲಭೆಯ ನಂತರ ತಲೆಮರಿಸಿಕೊಂಡಿದ್ದ ಮಾಜಿ ಮೇಯರ್ ಸಂಪತ್ ರಾಜ್ ಕೆಲವು ದಿನಗಳ ಬಳಿಕ ಬಂಧನಕ್ಕೊಳಗಾಗಿದ್ದರು. ತೀವ್ರ ವಿಚಾರಣೆ ನಡೆಸಿದ ಪೊಲೀಸರು ಸಂಪತ್ ರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಘಟನೆಯಲ್ಲಿ ಸಂಪತ್ ರಾಜ್ ಕೈವಾಡ ಸಾಬೀತಾದ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ಸಂಪತ್ ರಾಜ್ ಜಾಮೀನು ಕೊರಿ ಅರ್ಜಿ ಹಾಕಿದ್ದರು.
ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು 2021ರ ಜನವರಿ ಮೊದಲ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೀಗಾಗಿ ಸಂಪತ್ ರಾಜ್ ಹೊಸ ವರ್ಷಾಚರಣೆಯನ್ನು ಜೈಲಿನಲ್ಲಿಯೆ ಆಚರಿಸಬೇಕಾಗಿದೆ.
Published On - 1:09 pm, Mon, 21 December 20