ಅತ್ಯಾಚಾರ, ಕೊಲೆ ಬೆದರಿಕೆ ಆರೋಪ: ಮಾಜಿ ಶಾಸಕ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ ಮಾಜಿ ಶಾಸಕ ಭಗವಾನ್ ಶರ್ಮಾ ಅವರನ್ನು ಬೆಂಗಳೂರಿನಲ್ಲಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ. ಆಗಸ್ಟ್ 16 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹೋಟೆಲ್​ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಅವರ ಮೇಲಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಅತ್ಯಾಚಾರ, ಕೊಲೆ ಬೆದರಿಕೆ ಆರೋಪ: ಮಾಜಿ ಶಾಸಕ ಪೊಲೀಸರ ವಶಕ್ಕೆ
ಮಾಜಿ ಶಾಸಕ ಭಗವಾನ್​ ಶರ್ಮಾ
Edited By:

Updated on: Aug 18, 2025 | 4:22 PM

ಬೆಂಗಳೂರು, ಆಗಸ್ಟ್​ 18: ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಉತ್ತರ ಪ್ರದೇಶದ (Uttar Pradesh) ಮಾಜಿ ಶಾಸಕ ಭಗವಾನ್​ ಶರ್ಮಾ (Bhavan Sharma) ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ (Kempegowda International Airport Station) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ, ಆರೋಪಿ ಭಗವಾನ್​ ಶರ್ಮಾರನ್ನು ಏರ್ಪೋಟ್​ ಠಾಣೆ ಪೊಲೀಸರು ಚಿಕ್ಕಬಳ್ಳಾಪುರ ಪೊಲೀಸರಿಗೆ ವಶಕ್ಕೆ ನೀಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಭಗವಾನ್​ ಶರ್ಮಾ ಪರಾರಿಯಾಗಿದ್ದರು. ಪೊಲೀಸರು ಬಲೆ ಬೀಸಿ ಭಗವಾನ್​ ಶರ್ಮಮನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಏನಿದು ಪ್ರಕರಣ?

ಉತ್ತರ ಪ್ರದೇಶದ ಮಾಜಿ ಶಾಸಕ ಭಗವಾನ್ ಶರ್ಮಾ ಒತ್ತಾಯದ ಮೇರೆಗೆ 40 ವರ್ಷದ ಮಹಿಳೆ ತನ್ನ ಅಪ್ರಾಪ್ತ ಮಗನೊಂದಿಗೆ ಆಗಸ್ಟ್ 14 ರಂದು ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದರು. ಅದೇ ದಿನ, ಭಗವಾನ್​ ಶರ್ಮಾ ಸಂತ್ರಸ್ತೆಯನ್ನು ನಗರದ ಹಲವಾರು ಸ್ಥಳಗಳಿಗೆ ಕರೆದುಕೊಂಡು ಹೋಗಿದ್ದರು ಎಂದು ಆರೋಪಿಸಲಾಗಿದೆ.

ನಂತರ, ಆಗಸ್ಟ್ 16 ರಂದು ಭಗವಾನ್​ ಶರ್ಮಾ ಮಹಿಳೆಯನ್ನು ಚಿತ್ರದುರ್ಗಕ್ಕೆ ಕರೆದೊಯ್ದರು ಮತ್ತು ಮರುದಿನ ಹಿಂದಿರುಗುವಾಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಠಡಿ ವ್ಯವಸ್ಥೆ ಮಾಡಿ ಇರಿಸಿದ್ದರು ಎಂದು ಎಫ್‌ಐಆರ್‌ನಲ್ಲಿದೆ. ಹೋಟೆಲ್ ಕೋಣೆಯೊಳಗೆ, ಮಹಿಳೆ ಮೇಲೆ ಅತ್ಯಾಚಾರ ಎಸಗಿಸಿದ್ದಾರೆ. ಮಹಿಳೆ ವಿರೋಧಿಸಿದಾಗ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ, ಆಗಸ್ಟ್ 17 ರಂದು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 69 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಹಾಡಹಗಲೇ ಲೇಡಿಸ್ ಪಿಜಿಗೆ ನುಗ್ಗಿದ ಖದೀಮ; ಚಾಕು ತೋರಿಸಿ ಮಹಿಳಾ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ

ಭಗವಾನ್ ಶರ್ಮ ಉತ್ತರ ಪ್ರದೇಶದ ದಿಬೈ ವಿಧಾನಸಭಾ ಕ್ಷೇತ್ರದಿಂದ ಬಿಎಸ್​ಪಿ ಮತ್ತು ಸಮಾಜವಾದಿ ಪಾರ್ಟಿಯಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Mon, 18 August 25