ಬಿಹಾರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರು ಮಕ್ಕಳು ಸಜೀವ ದಹನ
ಬಿಹಾರದ ಮುಜಫರ್ ಪುರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದೆ. ಈ ಘಟನೆಯಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಮಕ್ಕಳು ಸುಟ್ಟು ಕರಕಲಾಗಿದ್ದಾರೆ. ಬಿಹಾರದ ಮುಜಫರ್‌ಪುರ ಜಿಲ್ಲೆಯ ಬರಿಯಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರಮಣಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರ ಸಂಬಂಧಿಕರಿಗೆ 4 ಲಕ್ಷ ರೂ. ಪರಿಹಾರ ನೀಡಲಾಗಿದೆ.

ಮುಜಫರ್‌ಪುರ, ಏಪ್ರಿಲ್ 16: ಬಿಹಾರದ ಮುಜಫರ್‌ಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಅಡುಗೆ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಬೆಂಕಿಯಲ್ಲಿ (Fire Accident) ನಾಲ್ಕು ಮಕ್ಕಳು ಸುಟ್ಟು ಕರಕಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಜಫರ್ ಪುರ ಜಿಲ್ಲೆಯ ಬರಿಯಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರಮಣಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳ ಪ್ರಕಾರ, ಮೃತರನ್ನು ವಿಪುಲ್ ಕುಮಾರ್ (5), ಬ್ಯೂಟಿ ಕುಮಾರಿ (8), ಹನ್ಸಿಕಾ ಕುಮಾರಿ (3) ಮತ್ತು ಶ್ರಿಷ್ಟಿ ಕುಮಾರಿ (4) ಎಂದು ಗುರುತಿಸಲಾಗಿದೆ.
ಮೃತರ ಸಂಬಂಧಿಕರಿಗೆ 4 ಲಕ್ಷ ರೂ. ಪರಿಹಾರ ನೀಡಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಬ್ರತಾ ಸೇನ್ ಅವರು ಪ್ರಾಥಮಿಕವಾಗಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅನಿಸುತ್ತದೆ ಎಂದು ಹೇಳಿದರು. “ಈ ಘಟನೆಯಲ್ಲಿ ನಾಲ್ವರು ಮಕ್ಕಳು ಸುಟ್ಟು ಕರಕಲಾಗಿದ್ದಾರೆ. ಮಾಹಿತಿ ಬಂದ ತಕ್ಷಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದವು. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಅವರು ಹೇಳಿದರು.
ಇದನ್ನೂ ಓದಿ: ಬಂಗಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 4 ಲಕ್ಷ ರೂ.ಗಳ ಪರಿಹಾರವನ್ನು ತಕ್ಷಣವೇ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. “ಮನೆಗಳಿಗೆ ಹಾನಿಯಾದ ಜನರಿಗೆ ಜಿಲ್ಲಾಡಳಿತದಿಂದ ಪಡಿತರ ನೀಡಲಾಗುವುದು. ಜಿಲ್ಲಾಡಳಿತವು ಅವರಿಗೆ ಆರ್ಥಿಕ ಸಹಾಯವನ್ನೂ ನೀಡುತ್ತದೆ” ಎಂದು ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ