AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ಕುಟುಂಬವೊಂದರ ನಾಲ್ವರು ಸದಸ್ಯರು ಒಂದೇ ಕೋಣೆಯಲ್ಲಿ ಶವವಾಗಿ ಪತ್ತೆ

ಪೊಲೀಸ್ ತಂಡವು ಸ್ಥಳಕ್ಕಾಗಮಿಸಿ ಒಳಗಿನಿಂದ ಬೀಗ ಹಾಕಿದ್ದ ಮನೆಯ ಬಾಗಿಲನ್ನು ಒಡೆದು ಒಳನುಗ್ಗಿದೆ. ಇಡೀ ಕೋಣೆ ಹೊಗೆಯಿಂದ ತುಂಬಿತ್ತು. ಕೋಣೆಯೊಳಗೆ ಚಾರ್ಕೋಲ್ ಹೀಟರ್, ಕೆಲವು ಎಲೆಗಳು ಮತ್ತು ಕುಟುಂಬದ ಸದಸ್ಯರ ದೇಹಗಳು ಬಿದ್ದಿರುವುದನ್ನು ನಾವು ಕಂಡುಕೊಂಡಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರನ್ನೂ ಕರೆಸಿ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಲಾಗಿದೆ.

ಪಶ್ಚಿಮ ಬಂಗಾಳದ ಕುಟುಂಬವೊಂದರ ನಾಲ್ವರು ಸದಸ್ಯರು ಒಂದೇ ಕೋಣೆಯಲ್ಲಿ ಶವವಾಗಿ ಪತ್ತೆ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Sep 19, 2023 | 12:57 PM

ಬೆಂಗಳೂರು ಸೆಪ್ಟೆಂಬರ್ 19: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯಲ್ಲಿ ಕೋಳಿ ಫಾರಂವೊಂದರ ಬಳಿ ಇರುವ ಕೋಣೆಯೊಂದರಲ್ಲಿ ಪಶ್ಚಿಮ ಬಂಗಾಳದ (West Bengal) ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ಕಾಳೆ ಸರಿಕಿ (60), ಲಕ್ಷ್ಮಿ ಸರಿಕಿ (50), ಉಷಾ ಸರಿಕಿ (40), ಮತ್ತು ಪೂಲ್ ಸರಿಕಿ (16) ಎಂದು ಗುರುತಿಸಲಾಗಿದೆ. ಈ ಕುಟುಂಬವು ಪಶ್ಚಿಮ ಬಂಗಾಳದ ಅಲಿಪುರದವಾರ್ ಜಿಲ್ಲೆಯವರಾಗಿದ್ದು, ಕಳೆದ 10 ದಿನಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಸಮೀಪದ ಹೊಳೆಯರಹಳ್ಳಿಯ ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಉಸಿರುಕಟ್ಟಿದ್ದೇ ಸಾವಿಗೆ ಕಾರಣ ಎಂದು ಹೇಳಲಾಗಿದೆ. ಆದಾಗ್ಯೂ, ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಶವಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಭಾನುವಾರ ಬೆಳಿಗ್ಗೆ ಸಮೀಪದ ಹಳ್ಳಿಯಲ್ಲಿ ಕೆಲಸ ಮಾಡುವ ಕಾಳೆ ಅವರ ಮಗಳು ಪೊಲೀಸರನ್ನು ಸಂಪರ್ಕಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯ ಕರೆಗಳಿಗೆ ಕುಟುಂಬ ಸದಸ್ಯರು ಯಾರೂ ಸ್ಪಂದಿಸದಿದ್ದಾಗ, ಕೋಳಿ ಫಾರಂಗೆ ಬಂದು ಪರಿಶೀಲಿಸಿದ್ದಾಳೆ . ಆಗ ಮನೆಯ ಮುಚ್ಚಿದ ಕಿಟಕಿಗಳಿಂದ ಹೊಗೆ ಬರುತ್ತಿರುವುದು ಕಂಡು ಬಂತು.

ಪೊಲೀಸ್ ತಂಡವು ಸ್ಥಳಕ್ಕಾಗಮಿಸಿ ಒಳಗಿನಿಂದ ಬೀಗ ಹಾಕಿದ್ದ ಮನೆಯ ಬಾಗಿಲನ್ನು ಒಡೆದು ಒಳನುಗ್ಗಿದೆ. ಇಡೀ ಕೋಣೆ ಹೊಗೆಯಿಂದ ತುಂಬಿತ್ತು. ಕೋಣೆಯೊಳಗೆ ಚಾರ್ಕೋಲ್ ಹೀಟರ್, ಕೆಲವು ಎಲೆಗಳು ಮತ್ತು ಕುಟುಂಬದ ಸದಸ್ಯರ ದೇಹಗಳು ಬಿದ್ದಿರುವುದನ್ನು ನಾವು ಕಂಡುಕೊಂಡಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರನ್ನೂ ಕರೆಸಿ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಭಾನುವಾರ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಶನಿವಾರ ರಾತ್ರಿ ಊಟದ ನಂತರ ನಾಲ್ವರು ಕುಟುಂಬ ಸದಸ್ಯರು ವಾತಾಯನ ವ್ಯವಸ್ಥೆ ಇಲ್ಲದ ಒಂದೇ ಕೊಠಡಿಯಲ್ಲಿ ಎಂದಿನಂತೆ ಮಲಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮಳೆಯಾಗುತ್ತಿದ್ದರಿಂದ ಮನೆಯವರು ಸೊಳ್ಳೆ ಬರದಿರಲು ಪರ್ಯಾಯವಾಗಿ ಚಾರ್ಕೋಲ್ ಹೀಟರ್ ಮತ್ತು ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಕೆಲವು ಎಲೆಗಳನ್ನು ಬಳಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಕೋಣೆಯಲ್ಲಿ ಸರಿಯಾಗಿ ಗಾಳಿಯಾಡುತ್ತಿರಲಿಲ್ಲ, ಒಳಗಿನಿಂದ ಬಾಗಿಲು ಮುಚ್ಚಿದ್ದರಿಂದ, ಕ್ರಮೇಣ ಉರಿಯುತ್ತಿರುವ ಇದ್ದಿಲಿನ ಹೊಗೆ ಇಡೀ ಕೋಣೆಯನ್ನು ಆವರಿಸಿ ಉಸಿರುಗಟ್ಟುವಿಕೆಗೆ ಕಾರಣವಾಯಿತು. ಅವರ ಉಸಿರುಕಟ್ಟುವಿಕೆಯಿಂದಾಗಿ ಅವರು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ ಎಂದು ಅಧಿಕಾರಿ ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಮೈಸೂರಿನ ಚುಂಚನಕಟ್ಟೆ ಬಳಿಯ ನಾಲೆಯಲ್ಲಿ ವ್ಯಕ್ತಿ ಶವ ಪತ್ತೆ, ಮತ್ತೊಂದೆಡೆ ಸಾಲಬಾಧೆಗೆ ರೈತ ಆತ್ಮಹತ್ಯೆ

ದೇಹಗಳ ಮೇಲೆ ಕಾಣುವಂಥಾ ಯಾವುದೇ ಗಾಯಗಳು ಕಂಡುಬಂದಿಲ್ಲ ಎಂದು ಪೊಲೀಸರು ಹೇಳಿದ್ದು, ಒಳಗೆ ಯಾವುದೇ ರೀತಿಯ ವಿಷಕಾರಿ ವಸ್ತುಗಳೂ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.  ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕ್ರಿಯಾ ಸಂಹಿತೆ 174ರ ಅಡಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಲದಂಡಿ ತಿಳಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ